AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivo V23e: ಇಂದು ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬೊಂಬಾಟ್ ಕ್ಯಾಮೆರಾದ ಈ ಸ್ಮಾರ್ಟ್​ಫೋನ್

Vivo V23e Launching Today: ಮೊನ್ನೆಯಷ್ಟೆ ವಿವೋ T1 5G, ವಿವೋ ವೈ Y15s ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದ ಬೆನ್ನಲ್ಲೇ ಇದೀಗ ಹೊಸ ವಿವೋ ವಿ23ಇ ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಲು ಮುಂದಾಗಿದೆ. ಇಂದು ಈ ಸ್ಮಾರ್ಟ್​ಫೋನ್ ದೇಶದಲ್ಲಿ ಬಿಡುಗಡೆ ಆಗುತ್ತಿದ್ದು, ಬೊಂಬಾಟ್ ಫೀಚರ್​ಗಳಿಂದ ಕೂಡಿದೆ.

Vivo V23e: ಇಂದು ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬೊಂಬಾಟ್ ಕ್ಯಾಮೆರಾದ ಈ ಸ್ಮಾರ್ಟ್​ಫೋನ್
Vivo V23e
TV9 Web
| Updated By: Vinay Bhat|

Updated on: Feb 21, 2022 | 6:32 AM

Share

ಜನವರಿ ತಿಂಗಳಲ್ಲಿ ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ಪ್ರಸಿದ್ಧ ವಿವೋ (Vivo) ಕಂಪನಿ ಇದೀಗ ಫೆಬ್ರವರಿ ತಿಂಗಳಲ್ಲೂ ಮತ್ತಷ್ಟು ಹೊಚ್ಚ ಹೊಸ ಫೋನ್​ಗಳನ್ನು ಅನಾವರಣ ಮಾಡುತ್ತಿದೆ. ಮೊನ್ನೆಯಷ್ಟೆ ವಿವೋ T1 5G, ವಿವೋ ವೈ Y15s ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದ ಬೆನ್ನಲ್ಲೇ ಇದೀಗ ಹೊಸ ವಿವೋ ವಿ23ಇ (VIVO V23e) ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಲು ಮುಂದಾಗಿದೆ. ಇಂದು ಈ ಸ್ಮಾರ್ಟ್​ಫೋನ್ ದೇಶದಲ್ಲಿ ಬಿಡುಗಡೆ ಆಗುತ್ತಿದ್ದು, ಬೊಂಬಾಟ್ ಫೀಚರ್​ಗಳಿಂದ ಕೂಡಿದೆ. 44W ಫಾಸ್ಟ್ ಚಾರ್ಜರ್, ಆಕರ್ಷಕ ಕ್ಯಾಮೆರಾ, ಬಲಿಷ್ಠ ಪ್ರೊಸೆಸರ್​​ನಿಂದ ವಿವೋ V23e ಆವೃತ್ತವಾಗಿದೆ. ಹಾಗಾದ್ರೆ ಈ ಫೋನಿನ ಇತರೆ ವಿಶೇಷತೆ ಏನು? ಬೆಲೆ ಎಷ್ಟು ಎಂಬ ಬಗ್ಗೆ ನೋಡುವುದಾರೆ…

ವಿವೋ V23e ಸ್ಮಾರ್ಟ್‌ಫೋನ್‌ ಕಳೆದ ವರ್ಷ ವಿಯೆಟ್ನಾಂನಲ್ಲಿ ಬಿಡುಗಡೆ ಆಗಿತ್ತು. ಅಲ್ಲಿ ಇದರ ಬೆಲೆ 8,490,000 VND. ಈ ಡಿವೈಸ್‌ ಸಿಂಗಲ್‌ 8GB RAM ರೂಪಾಂತರದಲ್ಲಿ 128GB ಆಂತರಿಕ ಸಂಗ್ರಹಣೆಯೊಂದಿಗೆ ಲಭ್ಯವಾಗಲಿದೆ. ಭಾರತದಲ್ಲಿ ಇದರ MRP ಬೆಲೆ 28,990 ರೂ. ಇರಲಿದೆಯಂತೆ. ಆದರೆ, ಇದು 25,990 ರೂ. ಗೆ ಸೇಲ್ ಕಾಣಲಿದೆ ಎಂದು 91ಮೊಬೈಲ್ಸ್. ಕಾಮ್ ವರದಿ ಮಾಡಿದೆ. ಇದು ಮೂನ್ಲೈಟ್ ಶ್ಯಾಡೋ (ಕಪ್ಪು) ಮತ್ತು ನೀಲಿ ಗುಲಾಬಿ ಕಲರ್‌ ಆಯ್ಕೆಯಲ್ಲಿ ಬರಲಿದೆ.

ಈ ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ, ಇದು 2,400 x 1,080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಮೀಡಿಯಾಟೆಕ್‌ ಡೈಮೆನ್ಸಿಟಿ 870 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಆಧಾರಿತ FunTouch 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇದು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದರ ಜೊತೆಗೆ 44 ಮೆಗಾಪಿಕ್ಸೆಲ್​ನ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇನ್ನು ಈ ರಿಯರ್‌ ಕ್ಯಾಮೆರಾದಲ್ಲಿ ಐ ಫೋಕಸ್, ನೈಟ್ ಮೋಡ್, ಪೋರ್ಟ್ರೇಟ್ ಎರೇಸರ್, ಲೈವ್ ಫೋಟೋ, ಎಆರ್ ಸ್ಟಿಕ್ಕರ್ ಮತ್ತು ಸ್ಲೋ-ಮೋಷನ್‌ನಂತಹ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂದು ಹೇಳಲಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್ 4050mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇದರ ಮೂಲಕ ಕೇವಲ 30 ನಿಮಿಷಗಳಲ್ಲಿ 69% ಚಾರ್ಜ್ ಮಾಡಬಹುದು ಎಂದು ಹೇಳಲಾಗಿದೆ. ಕನನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್-ಸಿ ಮತ್ತು ಜಿಪಿಎಸ್ ಬೆಂಬಲಿಸಲಿದೆ. ಡಿಸ್ಪ್ಲೇ ಒಳಗೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಅಳವಡಿಸಲಾಗಿದೆ.

Airtel vs Jio vs Vi: ಕಡಿಮೆ ಬೆಲೆ, 84 ದಿನಗಳ ವ್ಯಾಲಿಡಿಟಿಯ ಬೆಸ್ಟ್ ಪ್ರಿಪೇಯ್ಡ್ ಪ್ಲಾನ್: ಇಲ್ಲಿದೆ ನೋಡಿ

Best Smartphone: ಕಡಿಮೆ ಬೆಲೆಗೆ ಬಿಗ್ ಬ್ಯಾಟರಿಯ ಬೆಸ್ಟ್ ಸ್ಮಾರ್ಟ್​ಫೋನ್ ಬೇಕೇ?: ಇಲ್ಲಿದೆ ನೋಡಿ ಲಿಸ್ಟ್

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ