ಚೀನಾ ಮೂಲದ ಪ್ರಸಿದ್ಧ ವಿವೋ (Vivo) ಕಂಪನಿಯ ಸ್ಮಾರ್ಟ್ಫೋನ್ಗಳು ಈಗೀಗ ಅಪರೂಪಕ್ಕೆ ಬಿಡುಗಡೆ ಆಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಿವೋ ಕಂಪನಿ ಕಡಿಮೆ ಮೊಬೈಲ್ಗಳನ್ನು ಬಿಡುಗಡೆ ಮಾಡುತ್ತಿದೆ ಎನ್ನಬಹುದು. ಸಮಯ ತೆಗೆದುಕೊಂಡು ಅತ್ಯುತ್ತಮ ಫೋನ್ಗಳನ್ನು ಪರಿಚಯಿಸುತ್ತಿರುವ ವಿವೋ ಇದೀಗ ನೂತನವಾಗಿ ತನ್ನ S ಸರಣಿಯಲ್ಲಿ ಮೂರು ಸ್ಮಾರ್ಟ್‌ಫೋನ್‌ಗಳನ್ನು (Smartphones) ರಿಲೀಸ್ ಮಾಡಿವೆ. ವಿವೋ S17, ವಿವೋ S17 ಪ್ರೊ (Vivo S17 Pro) ಮತ್ತು ವಿವೋ S17t ಎಂಬ ಮೊಬೈಲ್ಗಳು ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಆಗಿದೆ. ಈ ಮೂರೂ ಸ್ಮಾರ್ಟ್ಫೋನ್ಗಳಲ್ಲಿ ಉತ್ತಮ ಡಿಸ್ ಪ್ಲೇ, ಪ್ರೊಸೆಸರ್, ಕ್ಯಾಮೆರಾ, ಬ್ಯಾಟರಿ ಆಯ್ಕೆ ನೀಡಲಾಗಿದೆ. ಹಾಗಾದರೆ, ಈ ಮೂರೂ ಮೊಬೈಲ್ಗಳ ಬೆಲೆ, ಫೀಚರ್ಸ್ ಏನಿದೆ ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ವಿವೋ S17 ಸ್ಮಾರ್ಟ್ಫೋನ್ನ 8GB RAM + 256GB ಸ್ಟೋರೇಜ್ ಆಯ್ಕೆಗೆ CNY 2499, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜಿ 29,100 ರೂ. ಇರಬಹುದು. ಅಂತೆಯೆ 12GB RAM + 256GB ಆಯ್ಕೆಗೆ CNY 2,799 (32,600 ರೂ.). ವಿವೋ S17t ಫೋನಿನ 12GB RAM + 512GB ಸ್ಟೋರೇಜ್ ಆವೃತ್ತಿಗೆ CNY 2,999 (34,900 ರೂ.). ವಿವೋ S17 ಪ್ರೊ ಸ್ಮಾರ್ಟ್ಫೋನ್ನ 8GB RAM + 256GB, 12GB + 256GB ಮತ್ತು 12GB + 512GB ಆವೃತ್ತಿಗೆ ಕ್ರಮವಾಗಿ CNY 3,099 (36,100 ರೂ.), CNY 3,299 (38,400 ರೂ.), CNY 3,499 (40,800 ರೂ.).
OnePlus 11 5G: ಭಾರತದಲ್ಲಿ ಭರ್ಜರಿ ಸೇಲ್ ಕಂಡ ಒನ್‌ಪ್ಲಸ್ 11 5Gಯ ಮಾರ್ಬಲ್ ಒಡಿಸ್ಸಿ ಆವೃತ್ತಿ ಬಿಡುಗಡೆ
ಫೀಚರ್ಸ್ ಏನಿದೆ?:
ವಿವೋ S17 ಫೋನ್ 2800*1260 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಅಮೊಲೆಡ್ ಡಿಸ್‌ಪ್ಲೇ ಹೊಂದಿದೆ. ಬಲಿಷ್ಠವಾದ ಸ್ನಾಪ್‌ಡ್ರಾಗನ್ 778G+ ಪ್ರೊಸೆಸರ್ ಅಳವಡಿಸಲಾಗಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ 4,600mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಅದಕ್ಕೆ ಪೂರಕವಾಗಿ 80W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ.
ವಿವೋ S17 ಪ್ರೊ ಫೋನ್ ಕೂಡ 2800*1260 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಅಮೊಲೆಡ್ ಡಿಸ್‌ಪ್ಲೇ ಹೊಂದಿದೆ. ಇದರಲ್ಲಿ ಮೀಡಿಯಾ ಟೆಕ್ ಆಕ್ಟಾ-ಕೋರ್ ಡೈಮೆನ್ಸಿಟಿ 8020 ಪ್ರೊಸೆಸರ್ ನೀಡಲಾಗಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿದೆ. ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದ್ದು, ಸೆಲ್ಫಿ ಕ್ಯಾಮೆರಾ ಸಹ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. 4,600mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 80W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ.
ಇನ್ನು ವಿವೋ S17t ಫೋನ್ ಕೂಡ 2800*1260 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಅಮೊಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಫೋನ್ನಲ್ಲಿ ಸ್ನಾಪ್‌ಡ್ರಾಗನ್ 778G+ ಪ್ರೊಸೆಸರ್ ಅಳವಡಿಸಲಾಗಿದ್ದು, 8GB/12GB RAM ಮತ್ತು 256/512GB ಸ್ಟೋರೇಜ್ ಆಯ್ಕೆ ಪಡೆದಿದೆ. ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. 4,600mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಅದಕ್ಕೆ ಪೂರಕವಾಗಿ 80W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ