Vivo V23e 5G
2022ರ ಮೊದಲ ಕ್ವಾರ್ಟರ್ನಲ್ಲಿ ಭಾರತದಲ್ಲಿ ಅತಿ ಹೆಚ್ಚು ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡಿರುವ ಕಂಪನಿ ಎಂದರೆ ಅದು ವಿವೋ (Vivo) ಎನ್ನಬಹುದು. ತಿಂಗಳಿಗೆ ಎರಡು ಅಥವಾ ಮೂರು ಮೊಬೈಲ್ಗಳನ್ನು ವಿವೋ ಬಿಡುಗಡೆ ಮಾಡುತ್ತಲೇ ಇದೆ. ಅದರಲ್ಲೂ ತನ್ನ V ಸರಣಿಯ ಫೋನ್ಗೆ ಭಾರತದಲ್ಲಿ ಹೆಚ್ಚಿನ ಬೇಡಿಕೆಯಿದೆ. ಈ ವರ್ಷದ ಆರಂಭದಲ್ಲಿ ವಿವೋ ಇದೇ ವಿ ಸರಣಿಯಲ್ಲಿ ವಿವೋ ವಿ23ಇ (Vivo V23e 5G) ಸ್ಮಾರ್ಟ್‌ಫೋನ್ ಪರಿಚಯಿಸಿತ್ತು. ಆಕರ್ಷಕ ಫೀಚರ್ಗಳಿಂದ ಕೂಡಿರುವ ಈ ಫೋನ್ ಇದೀಗ ಬಂಪರ್ ಡಿಸ್ಕೌಂಟ್ನಲ್ಲಿ ಮಾರಾಟ ಆಗುತ್ತಿದೆ. ಗಮನಿಸ ಬೇಕಾದ ಅಂಶ ಎಂದರೆ ಈ ಆಫರ್ ಇಂದೇ ಕೊನೆಗೊಳ್ಳಲಿದೆ. ಹಾಗಾದ್ರೆ ವಿವೋ V23e ಫೋನಿಗೆ ಇರುವ ಆಫರ್ ಏನು?, ಇದರಲ್ಲಿ ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.
- ಭಾರತದಲ್ಲಿ ವಿವೋ V23e 5G ಫೋನ್ 8GB + 128GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಈ ಫೋನ್ 25,990 ರೂ. ಬೆಲೆಯನ್ನು ಹೊಂದಿದೆ. ಸದ್ಯದ ಕ್ಯಾಶ್‌ಬ್ಯಾಕ್ ಕೊಡುಗೆಯಲ್ಲಿ ಈ ಫೋನ್ ಮೇಲೆ ಬರೋಬ್ಬರಿ 5000 ರೂ. ಗಳ ರಿಯಾಯಿತಿಯನ್ನು ಘೋಷಿಸಲಾಗಿದೆ. ಅಂದರೆ ಈ ಫೋನನ್ನು ಕೇವಲ 20,990 ರೂ. ಗಳಿಗೆ ಖರೀದಿಸಬಹುದಾಗಿದೆ.
- ಗ್ರಾಹಕರು ಐಸಿಐಸಿಐ ಬ್ಯಾಂಕ್, ಎಸ್‌ಬಿಐ ಅಥವಾ ಐಡಿಎಫ್‌ಸಿ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಈ ಫೋನ್ ಖರೀದಿಸಿದರೆ 5000ರೂ. ರಿಯಾಯಿತಿಯನ್ನು ಪಡೆಯಬಹುದು. ಇನ್ನು ಈ ಕ್ಯಾಶ್‌ಬ್ಯಾಕ್ ಕೊಡುಗೆಯು ಇದೇ ಮೇ 10 ಅಂದರೆ ಇಂದು ಕೊನೆಗೊಳ್ಳಲಿದೆ. ಫ್ಲಿಪ್ಕಾರ್ಟ್ ಅಥವಾ ವಿವೋ ವೆಬ್ವೈಟ್ನಲ್ಲಿ ಖರೀದಿಸಬಹುದು.
- ವಿವೋ V23e 5G ಸ್ಮಾರ್ಟ್‌ಫೋನ್ 6.44 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ವನ್ನು ಒಳಗೊಂಡಿದೆ.
- ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ನಲ್ಲಿ ಫನ್‌ಟಚ್ OS 12 ಬೆಂಬಲಿಸಲಿದೆ. ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
- ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ನಿಂದ ಇದೆ. ಇದಲ್ಲದೆ ಆಟೋಫೋಕಸ್ ಲೆನ್ಸ್ ಹೊಂದಿರುವ 44 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.
- ವಿವೋ ವಿ23e 5G ಸ್ಮಾರ್ಟ್‌ಫೋನ್ 4,050mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರ ಮೂಲಕ ಕೇವಲ 30 ನಿಮಿಷಗಳಲ್ಲಿ 69% ಚಾರ್ಜ್ ಮಾಡಬಹುದು ಎಂದು ಹೇಳಲಾಗಿದೆ. ಇದು 5G ಬೆಂಬಲ ಕೂಡ ಪಡೆದುಕೊಂಡಿದೆ.
ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ