Vivo V27 Pro: ಭರ್ಜರಿ ಫೀಚರ್ಸ್​ನ ವಿವೋ V27 ಪ್ರೊ ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯ: ಬೆಲೆ ಎಷ್ಟು?

Vivo V27 Pro Price: ವಿವೋ V27 ಪ್ರೊ ಸ್ಮಾರ್ಟ್​ಫೋನ್ ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಖರೀದಿಗೆ ಸಿಗಲಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಎಲ್ಲ ಮಾಹಿತಿ ಇಲ್ಲಿದೆ.

Vivo V27 Pro: ಭರ್ಜರಿ ಫೀಚರ್ಸ್​ನ ವಿವೋ V27 ಪ್ರೊ ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯ: ಬೆಲೆ ಎಷ್ಟು?
Vivo V27 Pro
Follow us
|

Updated on: Mar 06, 2023 | 6:57 AM

ಭಾರತದಲ್ಲಿ ವಿವೋ ಕಂಪನಿಯ ಸ್ಮಾರ್ಟ್​ಫೋನ್​ಗಳಿಗೆ ವಿಶೇಷ ಬೇಡಿಕೆ ಇದೆ. ಅಪರೂಕ್ಕೆ ಮೊಬೈಲ್​ಗಳನ್ನು ಬಿಡುಗಡೆ ಮಾಡಿದರೂ ಅದು ಒಂದಲ್ಲ ಒಂದು ವಿಶೇಷತೆಯಿಂದ ಕೂಡಿರುತ್ತಿದೆ. ಅದರಂತೆ ಪ್ರಸಿದ್ಧ ವಿವೋ ಸಂಸ್ಥೆ ಕಳೆದ ವಾರ ಹೊಸ ಮೊಬೈಲ್ ಒಂದನ್ನು ಅನಾವರಣ ಮಾಡಿತ್ತು. ಅದುವೇ ವಿವೋ V27 ಸರಣಿ. ಇದರಲ್ಲಿ ವಿವೋ V27 (Vivo V27) ಮತ್ತು ವಿವೋ V27 ಪ್ರೊ (Vivo V27 Pro) ಎಂಬ ಎರಡು ಮಾಡೆಲ್‌ಗಳಿವೆ. ಈ ಪೈಕಿ ವಿವೋ V27 ಪ್ರೊ ಸ್ಮಾರ್ಟ್​ಫೋನ್ ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಖರೀದಿಗೆ ಸಿಗಲಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಎಲ್ಲ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿತ್ತು. ಇದರ 8GB RAM + 128GB ಸ್ಟೋರೇಜ್‌ ಆಯ್ಕೆಗೆ 37,999 ರೂ. ಬೆಲೆ ಹೊಂದಿದೆ. 8GB RAM + 256GB ಸ್ಟೋರೇಜ್‌ ಆಯ್ಕೆಗೆ 39,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 12GB RAM + 256GB ಸ್ಟೋರೇಜ್‌ ಆಯ್ಕೆಗೆ 42,999 ರೂ. ಇದೆ. ಈ ಫೋನ್ ಇಂದು ಮಧ್ಯಾಹ್ನ 12 ಗಂಟೆಯಿಂದ ಫ್ಲಿಪ್​ಕಾರ್ಟ್ ಮೂಲಕ ಖರೀದಿಸಬಹುದು.

ಇದನ್ನೂ ಓದಿ
Image
WhatsApp New Features: ವಾಟ್ಸ್​ಆ್ಯಪ್​ನಲ್ಲಿ ಬಹುನಿರೀಕ್ಷಿತ ಫೀಚರ್: ಏನಿದು ಸ್ಪ್ಲಿಟ್ ವ್ಯೂ ಆಯ್ಕೆ?
Image
iPhone 13 Offer: ಹೋಳಿ ಹಬ್ಬಕ್ಕೆ ಬಂಪರ್ ಆಫರ್: ಐಫೋನ್ ಖರೀದಿಗೆ ಇದಕ್ಕಿಂತ ಒಳ್ಳೆಯ ಸಮಯ ಬರಲ್ಲ
Image
Smartphones: ಹುಬ್ಬೇರಿಸುವಂತಹ ಫೀಚರ್​ಗಳಿದ್ದರೂ ಮಾರುಕಟ್ಟೆಯಲ್ಲಿ ಫೇಲ್ ಆದ ಸ್ಮಾರ್ಟ್​ಫೋನ್​ಗಳು ಯಾವುವು ಗೊತ್ತೇ?
Image
POCO C55: ಕೇವಲ 8,999 ರೂ.: ಕಳೆದ ವಾರ ಬಿಡುಗಡೆ ಆದ ಈ ಸ್ಮಾರ್ಟ್​ಫೋನ್ ಮೇಲೆ ಬಂಪರ್ ಡಿಸ್ಕೌಂಟ್

ಏನು ವಿಶೇಷತೆ?:

ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್‌ 13 ಆಧಾರಿತ ಫನ್‌ಟಚ್‌ OS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

Amazon, Flipkart Holi sale 2023: ಅಮೆಜಾನ್, ಫ್ಲಿಪ್​ಕಾರ್ಟ್​ನಲ್ಲಿ ಹೋಳಿ ಸೇಲ್: ಅನೇಕ ಪ್ರಾಡಕ್ಟ್ ಮೇಲೆ ಬಂಪರ್ ಡಿಸ್ಕೌಂಟ್

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766V ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ ವೈಡ್‌ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೈಕ್ರೋ ಲೆನ್ಸ್‌ ಜೊತೆಗೆ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ವಿವೋ V27 ಪ್ರೊ ಸ್ಮಾರ್ಟ್‌ಫೋನ್‌ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು 66W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಪಡೆದುಕೊಂಡಿದೆ. ಜೊತೆಗೆ Wi-Fi, ಬ್ಲೂಟೂತ್ v5.3, GPS, Beidu, Glonass, Galileo, Navic, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಇ-ಕಂಪಾಸ್‌, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅಳವಡಿಸಲಾಗಿದೆ.

ವಿವೋ V27:

V27 ಜೊತೆ ರಿಲೀಸ್ ಆದ ವಿವೋ V27 ಸ್ಮಾರ್ಟ್‌ಫೋನ್​ನಲ್ಲಿ ಕೂಡ ಕ್ಯಾಮೆರಾ, ಪ್ರೊಸೆಸರ್ ಅದ್ಭುವಾಗಿದೆ. ಇದರಲ್ಲಿ ಮೀಡಿಯಾ ಟೆಕ್ ಡೈಮೆನ್ಸಿಟಿ 8200 ಪ್ರೊಸೆಸರ್‌ ಇದ್ದು ಇದು Funtouch OS ಬೆಂಬಲಿತ ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ರನ್‌ ಆಗಲಿದೆ. ಹಾಗೆಯೆ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದ್ದು, ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ನೀಡಲಾಗಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೋನಿ IMX766V ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ ಮುಂಭಾಗ ಸೆಲ್ಫೀಗಾಗಿ 50 ಮೆಗಾ ಪಿಕ್ಸಲ್‌ ಕ್ಯಾಮೆರಾ ನೀಡುವುದು ವಿಶೇಷ.

OnePlus Nord CE 3: ಅದ್ಭುತ ಕ್ಯಾಮೆರಾ, ಭರ್ಜರಿ ಫೀಚರ್ಸ್: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಒನ್​ಪ್ಲಸ್ ನಾರ್ಡ್ CE 3

4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ತಕ್ಕಂತೆ 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಭಾರತದಲ್ಲಿ ವಿವೋ V27 ಸ್ಮಾರ್ಟ್​ಫೋನ್​ನ 8 GB RAM + 128 GB ವೇರಿಯಂಟ್‌ ಬೆಲೆಯು 32,999 ರೂ. ಆಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು