ಭಾರತದಲ್ಲಿ ವಿವೋ ಕಂಪನಿಯ ಸ್ಮಾರ್ಟ್ಫೋನ್ಗಳಿಗೆ ವಿಶೇಷ ಬೇಡಿಕೆ ಇದೆ. ಅಪರೂಕ್ಕೆ ಮೊಬೈಲ್ಗಳನ್ನು ಬಿಡುಗಡೆ ಮಾಡಿದರೂ ಅದು ಒಂದಲ್ಲ ಒಂದು ವಿಶೇಷತೆಯಿಂದ ಕೂಡಿರುತ್ತಿದೆ. ಅದರಂತೆ ಪ್ರಸಿದ್ಧ ವಿವೋ ಸಂಸ್ಥೆ ಕಳೆದ ವಾರ ಹೊಸ ಮೊಬೈಲ್ ಒಂದನ್ನು ಅನಾವರಣ ಮಾಡಿತ್ತು. ಅದುವೇ ವಿವೋ V27 ಸರಣಿ. ಇದರಲ್ಲಿ ವಿವೋ V27 (Vivo V27) ಮತ್ತು ವಿವೋ V27 ಪ್ರೊ (Vivo V27 Pro) ಎಂಬ ಎರಡು ಮಾಡೆಲ್‌ಗಳಿವೆ. ಈ ಪೈಕಿ ವಿವೋ V27 ಪ್ರೊ ಸ್ಮಾರ್ಟ್‌ಫೋನ್ ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಮೂಲಕ ಖರೀದಿಗೆ ಸಿಗಲಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಎಲ್ಲ ಮಾಹಿತಿ ಇಲ್ಲಿದೆ.
ಬೆಲೆ ಎಷ್ಟು?:
ವಿವೋ V27 ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿತ್ತು. ಇದರ 8GB RAM + 128GB ಸ್ಟೋರೇಜ್ ಆಯ್ಕೆಗೆ 37,999 ರೂ. ಬೆಲೆ ಹೊಂದಿದೆ. 8GB RAM + 256GB ಸ್ಟೋರೇಜ್ ಆಯ್ಕೆಗೆ 39,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 12GB RAM + 256GB ಸ್ಟೋರೇಜ್ ಆಯ್ಕೆಗೆ 42,999 ರೂ. ಇದೆ. ಈ ಫೋನ್ ಇಂದು ಮಧ್ಯಾಹ್ನ 12 ಗಂಟೆಯಿಂದ ಫ್ಲಿಪ್ಕಾರ್ಟ್ ಮೂಲಕ ಖರೀದಿಸಬಹುದು.
ಏನು ವಿಶೇಷತೆ?:
ವಿವೋ V27 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ OS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766V ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೈಕ್ರೋ ಲೆನ್ಸ್ ಜೊತೆಗೆ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.
ವಿವೋ V27 ಪ್ರೊ ಸ್ಮಾರ್ಟ್‌ಫೋನ್ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಪಡೆದುಕೊಂಡಿದೆ. ಜೊತೆಗೆ Wi-Fi, ಬ್ಲೂಟೂತ್ v5.3, GPS, Beidu, Glonass, Galileo, Navic, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಇ-ಕಂಪಾಸ್, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅಳವಡಿಸಲಾಗಿದೆ.
V27 ಜೊತೆ ರಿಲೀಸ್ ಆದ ವಿವೋ V27 ಸ್ಮಾರ್ಟ್ಫೋನ್ನಲ್ಲಿ ಕೂಡ ಕ್ಯಾಮೆರಾ, ಪ್ರೊಸೆಸರ್ ಅದ್ಭುವಾಗಿದೆ. ಇದರಲ್ಲಿ ಮೀಡಿಯಾ ಟೆಕ್ ಡೈಮೆನ್ಸಿಟಿ 8200 ಪ್ರೊಸೆಸರ್ ಇದ್ದು ಇದು Funtouch OS ಬೆಂಬಲಿತ ಆಂಡ್ರಾಯ್ಡ್ 13 ಬೆಂಬಲದೊಂದಿಗೆ ರನ್ ಆಗಲಿದೆ. ಹಾಗೆಯೆ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ನೀಡಲಾಗಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766V ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ ಮುಂಭಾಗ ಸೆಲ್ಫೀಗಾಗಿ 50 ಮೆಗಾ ಪಿಕ್ಸಲ್ ಕ್ಯಾಮೆರಾ ನೀಡುವುದು ವಿಶೇಷ.
4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ತಕ್ಕಂತೆ 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಭಾರತದಲ್ಲಿ ವಿವೋ V27 ಸ್ಮಾರ್ಟ್ಫೋನ್ನ 8 GB RAM + 128 GB ವೇರಿಯಂಟ್ ಬೆಲೆಯು 32,999 ರೂ. ಆಗಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ