ಪವರ್ ಫುಲ್ ಸ್ಮಾರ್ಟ್ಫೋನ್ಗಳಿಗೆ (Smartphone) ಹೆಸರುವಾಸಿಯಾಗಿರುವ ಪ್ರಸಿದ್ಧ ಐಕ್ಯೂ ಕಂಪನಿ ಇದೀಗ ಭಾರತದಲ್ಲಿ ತನ್ನ ಬಹುನಿರೀಕ್ಷಿತ ಹೊಸ ಐಕ್ಯೂ ಝಡ್6 5ಜಿ (iQoo Z6 5G) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಬಿಡುಗಡೆಗೂ ಮುನ್ನ ಸಾಕಷ್ಟು ಸದ್ದು ಮಾಡಿದ್ದ ಈ ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದರ ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್, 5,000mAh ಸಾಮರ್ಥ್ಯದ ಬ್ಯಾಟರಿಗೆ ತಕ್ಕಂತೆ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ನೀಡಲಾಗಿದೆ. ಕ್ಯಾಮೆರಾದಲ್ಲಿ ವಿಶೇಷವಾದ ಸೂಪರ್ ನೈಟ್ ಮೋಡ್ ಮತ್ತು ಬೊಕೆ ಮೋಡ್ ಸೇರಿದಂತೆ ಹಲವು ಕ್ಯಾಮೆರಾ (Camera) ಮೋಡ್‌ಗಳು ಪ್ರಿಲೋಡ್ ಆಗಿವೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಇತರೆ ವಿಶೇಷತೆಗಳು ಏನು? ಎಂಬ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಬೆಲೆ ಎಷ್ಟು?:
ಭಾರತದಲ್ಲಿ ಐಕ್ಯೂ Z6 5G ಸ್ಮಾರ್ಟ್‌ಫೋನ್ ಒಟ್ಟು ಮೂರು ಮಾದರಿಯಲ್ಲಿ ರಿಲೀಸ್ ಆಗಿದೆ. ಇದರ 4GB RAM ಮತ್ತು 128GB ಸ್ಟೋರೆಜ್ ರೂಪಾಂತರದ ಆಯ್ಕೆಗೆ 15,999 ರೂ.ಬೆಲೆ ಹೊಂದಿದೆ. 6GB RAM ಮತ್ತು 128GB ಸ್ಟೋರೆಜ್ ಮಾದರಿಗೆ 16,999 ರೂ. ಹಾಗೂ 8GB RAM ಮತ್ತು 128GB ಸ್ಟೋರೆಜ್ ಆಯ್ಕೆಯು 17,999 ರೂ. ಗೆ ಮಾರಾಟ ಆಗಲಿದೆ. ಈ ಸ್ಮಾರ್ಟ್‌ಫೋನ್ ಕ್ರೋಮ್ಯಾಟಿಕ್ ಬ್ಲೂ ಮತ್ತು ಡೈನಮೋ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ. ಇದು ಮಾರ್ಚ್ 22 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಐಕ್ಯೂ ಇಂಡಿಯಾ ಇ-ಸ್ಟೋರ್ ಮೂಲಕ ಖರೀದಿಗೆ ಸಿಗಲಿದೆ. ಐಕ್ಯೂ Z6 5G ಸ್ಮಾರ್ಟ್‌ಫೋನ್ ಅನ್ನು HDFC ಬ್ಯಾಂಕ್ ಕಾರ್ಡ್ ಅಥವಾ EMI ವಹಿವಾಟುಗಳ ಮೂಲಕ ಖರೀದಿಸಿದರೆ 2,000 ರೂ. ಕ್ಯಾಶ್‌ಬ್ಯಾಕ್ ಆಫರ್ ನೀಡಲಾಗಿದೆ.
ಏನು ವಿಶೇಷತೆ?:
ಐಕ್ಯೂ Z6 5G ಸ್ಮಾರ್ಟ್‌ಫೋನ್ 1,080×2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್ 12 ನಲ್ಲಿ ಫನ್‌ಟಚ್OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ನಿಂದ ಕೂಡಿರುವ ಈ ಸ್ಮಾರ್ಟ್ಫೋನ್ನ ಕ್ಯಾಮೆರಾ ಕೂಡ ಅದ್ಭುತವಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ 3P9 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.
Itel A49: ಗಮನಿಸಿ: ಭಾರತದಲ್ಲಿ ಕೇವಲ 6,499 ರೂ. ಗೆ ಬಿಡುಗಡೆ ಆಗಿದೆ ಆಕರ್ಷಕ ಸ್ಮಾರ್ಟ್‌ಫೋನ್