Vivo T1x: ಸದ್ದಿಲ್ಲದೆ ವಿವೋ T1X ಸ್ಮಾರ್ಟ್​​ಫೋನ್ ಮಾರಾಟ ಆರಂಭ: ಬೆಲೆ ಕೇವಲ 11,999 ರೂ.

ಈ ಬಾರಿ ವಿವೋ (Vivo) ಭಾರತದಲ್ಲಿ ಸದ್ದಿಲ್ಲದೆ ಹೊಸ ಫೋನೊಂದನ್ನು ಅನಾವರಣ ಮಾಡಿದೆ. ಅದುವೇ ವಿವೋ ವಿ1 ಎಕ್ಸ್ (Vivo T1x). ವಿಶೇಷ ಎಂದರೆ ಈ ಫೋನ್ ಇಂದಿನಿಂದ ಸೇಲ್ ಕೂಡ ಕಾಣುತ್ತಿದೆ.

Vivo T1x: ಸದ್ದಿಲ್ಲದೆ ವಿವೋ T1X ಸ್ಮಾರ್ಟ್​​ಫೋನ್ ಮಾರಾಟ ಆರಂಭ: ಬೆಲೆ ಕೇವಲ 11,999 ರೂ.
Vivo T1X
Follow us
TV9 Web
| Updated By: Vinay Bhat

Updated on: Jul 27, 2022 | 6:04 AM

ಭಾರತದ ಸ್ಮಾರ್ಟ್‌ಫೋನ್‌ (Smartphone) ಮಾರುಕಟ್ಟೆಯಲ್ಲಿ ವಿವೋ ಕಂಪನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ವಿವೋ ಒಂದು ಫೋನ್ ಬಿಡುಗಡೆ ಮಾಡಿದರೆ ಅದು ಸಾಕಷ್ಟು ಪ್ರಚಾರ ನೀಡುತ್ತದೆ. ಪ್ರಸಿದ್ಧಿ ಪಡೆಯುತ್ತದೆ. ಆದರೆ, ಈ ಬಾರಿ ವಿವೋ (Vivo) ಭಾರತದಲ್ಲಿ ಸದ್ದಿಲ್ಲದೆ ಹೊಸ ಫೋನೊಂದನ್ನು ಅನಾವರಣ ಮಾಡಿದೆ. ಅದುವೇ ವಿವೋ ವಿ1 ಎಕ್ಸ್ (Vivo T1x). ವಿಶೇಷ ಎಂದರೆ ಈ ಫೋನ್ ಇಂದಿನಿಂದ ಸೇಲ್ ಕೂಡ ಕಾಣುತ್ತಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಮೊದಲ ಸೇಲ್ ಪ್ರಯುಕ್ತ ಏನು ಆಫರ್ ಇದೆ?, ಫೀಚರ್ಸ್​ ಏನೇನು ಎಂಬುದನ್ನು ನೋಡೋಣ.

  1. ಭಾರತದಲ್ಲಿ ವಿವೋ T1X ಸ್ಮಾರ್ಟ್‌ಫೋನ್‌ ಒಟ್ಟು ಎರಡು ಮಾದರಿಯಲ್ಲಿ ಬಿಡುಗಡೆ ಆಗಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ ಕೇವಲ 11,999 ರೂ. ನಿಗದಿ ಮಾಡಲಾಗಿದೆ. 6GB RAM ಮತ್ತು 128GB ಸ್ಟೋರೇಜ್​ಗೆ 14,999 ರೂ. ಇದೆ.
  2. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಇಂದಿನಿಂದ ಖರೀದಿಸಬಹುದು. ಮೊದಲ ಸೇಲ್ ಪ್ರಯುಕ್ತ HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಪಡೆದುಕೊಂಡರೆ 1,000 ರೂ. ಗಳ ರಿಯಾಯಿತಿ ಸಿಗಲಿದೆ.
  3. ಈ ಫೋನ್ ಗ್ರಾವಿಟಿ ಬ್ಲಾಕ್ ಮತ್ತು ಸ್ಪೇಸ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇದು ಫ್ಲಿಪ್‌ಕಾರ್ಟ್ ಮೂಲಕ ಇಂದು ಮಧ್ಯಾಹ್ನ 12 ಗಂಟೆಯಿಂದ ಖರೀದಿಸಬಹುದು.
  4. ವಿವೋ V23 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ HD+ ಎಲ್​ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ.
  5. ಇದನ್ನೂ ಓದಿ
    Image
    Reliance JIO: 56 GB ಡೇಟಾ, ಅನ್ಲಿಮಿಟೆಡ್ ಕಾಲ್: ಇದು ಜಿಯೋ ಕಂಪನಿಯ ಬಂಪರ್ ಆಫರ್
    Image
    Galaxy Z Fold 3 5G: ಒಂದೂವರೆ ಲಕ್ಷದ ಈ ಸ್ಯಾಮ್​ಸಂಗ್ ಮಡಚುವ ಫೋನ್ ಮೇಲೆ ಬಂಪರ್ ಡಿಸ್ಕೌಂಟ್
    Image
    WhatsApp: ಐಫೋನ್ ಬಳಕೆದಾರರಿಗೆ ಸಂತಸದ ಸುದ್ದಿಕೊಟ್ಟ ವಾಟ್ಸ್​ಆ್ಯಪ್​: ಇನ್ನುಂದೆ ಹೀಗೂ ಮಾಡಬಹುದು
    Image
    5G Auctions: ಇಂದಿನಿಂದ 5G ಸ್ಪೆಕ್ಟ್ರಮ್ ಹರಾಜು: ಅಖಾಡದಲ್ಲಿದೆ 4 ಕಂಪನಿಗಳು, ಇಲ್ಲಿದೆ ಎಲ್ಲ ಮಾಹಿತಿ
  6. ಇದು ಕ್ವಾಲ್ಕಾಂ ಸ್ನಾಪ್​ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
  7. ಡ್ಯುಯೆಲ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಹೊಂದಿದೆ. ಜೊತೆಗೆ 8 ಮೆಗಾಫಿಕ್ಸೆಲ್​ನ ಸೆಲ್ಫೀ ಕ್ಯಾಮೆರಾ ನೀಡಲಾಗಿದೆ.
  8. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದೊಂದು ಬಜೆಟ್ ಬೆಲೆಗೆ ಲಭ್ಯವಿರುವ ಮತ್ತೊಂದು ಆಕರ್ಷಕ ಸ್ಮಾರ್ಟ್​​ಫೋನ್ ಆಗಿದೆ.

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ