Vivo T2 5G: ಭಾರತದಲ್ಲಿ ಅತ್ಯಂತ ಕಡಿಮೆ ಬೆಲೆಗೆ 5G ಫೋನ್ ಬಿಡುಗಡೆ ಮಾಡಿದ ವಿವೋ: ಎಷ್ಟು ರೂ.?

ದೇಶಿಯ ಮಾರುಕಟ್ಟೆಯಲ್ಲಿ ವಿವೋ ಸಂಸ್ಥೆ ಹೊಸ ವಿವೋ ಟಿ2 5ಜಿ (Vivo T2 5G) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಫೋನಿನ ಬೆಲೆ, ಫೀಚರ್​ಗಳ ಕುರಿತ ಮಾಹಿತಿ ಇಲ್ಲಿದೆ.

Vivo T2 5G: ಭಾರತದಲ್ಲಿ ಅತ್ಯಂತ ಕಡಿಮೆ ಬೆಲೆಗೆ 5G ಫೋನ್ ಬಿಡುಗಡೆ ಮಾಡಿದ ವಿವೋ: ಎಷ್ಟು ರೂ.?
VIVO T2
Follow us
|

Updated on: Apr 11, 2023 | 3:09 PM

ಭಾರತದಲ್ಲಿ 5ಜಿ ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಯೋ, ಏರ್ಟೆಲ್ 5ಜಿ (Airtel 5G) ಸೇವೆ ದೇಶದೆಲ್ಲೆಡೆ ವಿಸ್ತರಣೆ ಆಗುತ್ತಿದ್ದು ಪ್ರಸಿದ್ಧ ಸ್ಮಾರ್ಟ್​ಫೋನ್ ಬ್ರ್ಯಾಂಡ್​ಗಳು ಒಂದರ ಹಿಂದೆ ಒಂದರಂತೆ 5ಜಿ ಬೆಂಬಲ ನೀಡುವ ಮೊಬೈಲ್ (Mobile) ಅನ್ನು ರಿಲೀಸ್ ಮಾಡುತ್ತಿದೆ. ಅದುಕೂಡ ಬಜೆಟ್ ಬೆಲೆಗೆ ಎಂಬುದು ವಿಶೇಷ. ಇದೀಗ ವಿವೋ ಸರದಿ. ದೇಶಿಯ ಮಾರುಕಟ್ಟೆಯಲ್ಲಿ ವಿವೋ ಸಂಸ್ಥೆ ಹೊಸ ವಿವೋ ಟಿ2 5ಜಿ (Vivo T2 5G) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಫೋನಿನ ಬೆಲೆ, ಫೀಚರ್​ಗಳ ಕುರಿತ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ವಿವೋ T2 5G ಸ್ಮಾರ್ಟ್​ಫೋನ್‌ ಭಾರತದಲ್ಲಿ ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 4GB RAM + 128GB ವೇರಿಯಂಟ್‌ಗೆ ಕೇವಲ 12,999 ರೂ. ಇದೆ. ಅಂತೆಯೆ 6GB RAM + 128GB ಸ್ಟೋರೇಜ್ ಮಾದರಿಗೆ 13,999 ರೂ. ನಿಗದಿ ಮಾಡಲಾಗಿದೆ. 8GB RAM + 128GB ಸ್ಟೋರೇಜ್ ಆಯ್ಕೆಗೆ 15,999 ರೂ. ಇದೆ. ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಸೇರಿದಂತೆ ವಿವೋ ಅಧಿಕೃತ ವೆಬ್​ಸೈಟ್​ನಲ್ಲಿ ಏಪ್ರಿಲ್ 31 ರಿಂದ ಖರೀದಿಗೆ ಸಿಗುತ್ತಿದೆ.

ಇದನ್ನೂ ಓದಿ
Image
Lava Blaze 2: ಇದು ಭಾರತದ ಸ್ಮಾರ್ಟ್​ಫೋನ್: ಕೇವಲ 8,999 ರೂ. ಗೆ ಬಿಡುಗಡೆ ಆಗಿದೆ ಹೊಸ ಲಾವಾ ಬ್ಲೇಜ್‌ 2
Image
Fake Sick Leave: ನಕಲಿ ಅನಾರೋಗ್ಯ ರಜೆಗಳಿಗೆ ಬ್ರೇಕ್; ಈಗ ನಿಮ್ಮ ಧ್ವನಿಯಿಂದ ನಿಮಗೆ ಶೀತವಿದೆಯೇ ಎಂದು ಕೃತಕ ಬುದ್ಧಿಮತ್ತೆ ಕಂಡುಹಿಡಿಯಬಹುದು!
Image
Vivo X90: ಬೆಸ್ಟ್ ಕ್ಯಾಮೆರಾ ಸೆಟಪ್ ಸಹಿತ ಬರುತ್ತಿದೆ ಪ್ರೀಮಿಯಂ ವಿವೊ X90 ಫೋನ್
Image
Realme Narzo N55: ಭಾರತದ ಮಾರುಕಟ್ಟೆಗೆ ಬರುತ್ತಿದೆ ರಿಯಲ್​ಮಿ ಹೊಸ ಸ್ಮಾರ್ಟ್​ಫೋನ್

Xiaomi 13 Ultra: DSLR ಕ್ಯಾಮೆರಾಗೆ ಪಂಚ್ ನೀಡಲು ಬರುತ್ತಿದೆ ಶಓಮಿ 13 ಅಲ್ಟ್ರಾ

ಫೀಚರ್ಸ್ ಏನಿದೆ?:

ವಿವೋ T2 5G ಸ್ಮಾರ್ಟ್​ಫೋನ್‌ ಅಧಿಕ ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.38 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಸೂರ್ಯನ ಕಿರಣ ಮೊಬೈಲ್ ಮೇಲೆ ಬಿದ್ದರೂ ಡಿಸ್ ಪ್ಲೇ ಬ್ರೈಟ್ ಆಗಿ ಕಾಣಲಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಅಳವಡಿಸಲಾಗಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಮೈಕ್ರೊ ಎಸ್​ಡಿ ಕಾರ್ಡ್ ಮೂಲಕ ಸಂಗ್ರಹಣೆ ವಿಸ್ತರಣೆ ಮಾಡಬಹುದು. ಇನ್​ ಡಿಸ್ ಪ್ಲೇ ಫಿಂಗರ್​ಪ್ರಿಂಟ್ ಆಯ್ಕೆ ನೀಡಲಾಗಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಒಳಗೊಂಡಿದೆ. ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸಲ್‌ ಸಾಮರ್ಥ್ಯದಿಂದ ಕೂಡಿದೆ. 12 ಮೆಗಾ ಪಿಕ್ಸಲ್​ನ ಡೆಪ್ತ್ ಸೆನ್ಸಾರ್ ನೀಡಲಾಗಿದೆ. ಹಾಗೆಯೇ ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾ ಪಿಕ್ಸಲ್‌ ಸಾಮರ್ಥ್ಯದ ಕ್ಯಾಮೆರಾ ನೀಡಲಾಗಿದೆ.

4,700mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದ್ದು, ಇದು 44W ವೋಲ್ಟ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತೆದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಪಡೆದುಕೊಂಡಿದೆ. ಉಳಿದಂತೆ 4G LTE, Wi-Fi, ಬ್ಲೂಟೂತ್, GPS/ A-GPS, USB ಟೈಪ್-C, 3.55mm ಆಡಿಯೋ ಜ್ಯಾಕ್ ಇದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ