ವಿವೋದಿಂದ ಬಲಿಷ್ಠ ಸ್ಮಾರ್ಟ್​ಫೋನ್ ಬಿಡುಗಡೆಗೆ ತಯಾರಿ: ಪ್ರೊಸೆಸರ್, ಕ್ಯಾಮೆರಾ ಯಾವುದು ನೋಡಿ

Vivo T2 Pro India Launch: ವಿವೋ T2 ಪ್ರೊ ಸ್ಮಾರ್ಟ್​ಫೋನ್ ಐಕ್ಯೂ Z7 ಪ್ರೊ ಫೋನಿನ ಮರುಬ್ರಾಂಡ್ ಎಂದು ಹೇಳಲಾಗಿದೆ. ಈ ಫೋನ್ 6.78-ಇಂಚಿನ FHD+ AMOLED ಡಿಸ್‌ಪ್ಲೇ ಜೊತೆಗೆ 120Hz ರಿಫ್ರೆಶ್ ರೇಟ್, 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು ಪಂಚ್-ಹೋಲ್ ಕಟೌಟ್ ಅನ್ನು ಹೊಂದಿರುತ್ತದೆ.

ವಿವೋದಿಂದ ಬಲಿಷ್ಠ ಸ್ಮಾರ್ಟ್​ಫೋನ್ ಬಿಡುಗಡೆಗೆ ತಯಾರಿ: ಪ್ರೊಸೆಸರ್, ಕ್ಯಾಮೆರಾ ಯಾವುದು ನೋಡಿ
vivo t2 pro
Follow us
Vinay Bhat
|

Updated on:Sep 18, 2023 | 3:27 PM

ವಿವೋ ಕಂಪನಿ ಭಾರತದಲ್ಲಿ ಈಗೀಗ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಇದೀಗ ಮತ್ತೊಂದು ನೂತನ ಫೋನಿನ ಬಿಡುಗಡೆ ಬಗ್ಗೆ ಘೋಷಿಸಿದ್ದು ದಿನಾಂಕವನ್ನು ಕೂಡ ಪ್ರಕಟಿಸಿದೆ. ಭಾರತದಲ್ಲಿ ಸೆಪ್ಟೆಂಬರ್ 22 ರಂದು ವಿವೋ T2 ಪ್ರೊ (Vivo T2 Pro) ಸ್ಮಾರ್ಟ್​ಫೋನ್ ಬಿಡುಗಡೆ ಆಗಲಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಈ ಬಗ್ಗೆ ಖಚಿತ ಪಡಿಸಿದೆ. ಬಿಡುಗಡೆಗು ಮುನ್ನ ವಿವೋ T2 ಪ್ರೊ ಸ್ಮಾರ್ಟ್​ಫೋನ್​ನ ಕೆಲ ಫೀಚರ್​ಗಳು ಅಧಿಕೃತವಾಗಿ ಬಹಿರಂಗಪಡಿಸಲಾಗಿದೆ.

ವಿವೋ T2 ಪ್ರೊ ಸ್ಮಾರ್ಟ್​ಫೋನ್ ಐಕ್ಯೂ Z7 ಪ್ರೊ ಫೋನಿನ ಮರುಬ್ರಾಂಡ್ ಎಂದು ಹೇಳಲಾಗಿದೆ. ಈ ಫೋನ್ 6.78-ಇಂಚಿನ FHD+ AMOLED ಡಿಸ್‌ಪ್ಲೇ ಜೊತೆಗೆ 120Hz ರಿಫ್ರೆಶ್ ರೇಟ್, 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು ಪಂಚ್-ಹೋಲ್ ಕಟೌಟ್ ಅನ್ನು ಹೊಂದಿರುತ್ತದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 7200 SoC ಮೂಲಕ ARM Mali-G610 GPU ನೊಂದಿಗೆ ಜೋಡಿಸಲ್ಪಟ್ಟಿದೆ.

ಬಿಡುಗಡೆಗೆ ಸಿದ್ಧವಾದ ಶವೋಮಿ ಕಂಪನಿಯ ಅತ್ಯಂತ ದುಬಾರಿ ಸ್ಮಾರ್ಟ್​ಫೋನ್: ಯಾವುದು ನೋಡಿ

ಇದನ್ನೂ ಓದಿ
Image
ಭಾರತಕ್ಕೆ ಬರುತ್ತಿದೆ ಹೊಸ ಫ್ಲಿಪ್ ಫೋನ್: ಸೋರಿಕೆ ಆಯಿತು ರೋಚಕ ವಿಷಯ
Image
ಜಿಯೋ ಬಂಪರ್ ಪ್ಲಾನ್: ಕೇವಲ 123 ರೂ. ರಿಚಾರ್ಜ್ ಮಾಡಿದ್ರೆ 14GB ಡೇಟಾ
Image
ಐಫೋನ್ 15 ಅಥವಾ ಐಫೋನ್ 14? ಯಾವುದು ಬೆಸ್ಟ್?
Image
ಭಾರತದಲ್ಲಿ ಇಂದಿನಿಂದ ಖರೀದಿಸಬಹುದು 200MP ಕ್ಯಾಮೆರಾದ ಹಾನರ್ 90 ಫೋನ್

ಕ್ಯಾಮೆರಾ ವಿಚಾರಕ್ಕೆ ಬಂದರೆ, ವಿವೋ T2 ಪ್ರೊ 64 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 2 ಮೆಗಾ ಪಿಕ್ಸೆಲ್ ಪೋರ್ಟ್ರೇಟ್ ಲೆನ್ಸ್‌ನೊಂದಿಗೆ ಬರುವ ನಿರೀಕ್ಷೆಯಿದೆ. ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾ ಪಿಕ್ಸೆಲ್ ಕ್ಯಾಮೆರಾ ಇದೆ.

ವಿವೋ T2 ಪ್ರೊ ಫೋನಿನಲ್ಲಿ 66W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 4,600mAh ಬ್ಯಾಟರಿಯನ್ನು ಪ್ಯಾಕ್ ಮಾಡುವ ನಿರೀಕ್ಷೆಯಿದೆ. ಆಂಡ್ರಾಯ್ಡ್ 13-ಆಧಾರಿತ Funtouch OS ಮೂಲಕ ರನ್ ಆಗುತ್ತದೆ. ಈ ಫೋನ್ ಗೀಕ್‌ಬೆಂಚ್‌ನಲ್ಲಿ ಕಾಣಿಸಿಕೊಂಡಿದ್ದು, ಸಿಂಗಲ್-ಕೋರ್ ಪರೀಕ್ಷೆಯಲ್ಲಿ 1161 ಸ್ಕೋರ್ ಮತ್ತು ಮಲ್ಟಿ-ಕೋರ್ ಕಾರ್ಯಕ್ಷಮತೆಯಲ್ಲಿ 2625 ಸ್ಕೋರ್ ಗಳಿಸುವಲ್ಲಿ ಯಶಸ್ವಿಯಾಗಿದೆ.

ಭಾರತದಲ್ಲಿ ವಿವೋ T2 ಪ್ರೊ ಬೆಲೆ (ನಿರೀಕ್ಷಿತ)

ಭಾರತದಲ್ಲಿ ಬಿಡುಗಡೆಯಾದ ಐಕ್ಯೂ Z7 ಪ್ರೊ ಮೂಲ ಮಾದರಿ 23,999 ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ. ಹೀಗಾಗಿ ವಿವೋ T2 ಪ್ರೊ ಕೂಡ ಅದೇ ಶ್ರೇಣಿಯಲ್ಲಿ ನಿರೀಕ್ಷಿಸಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:26 pm, Mon, 18 September 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್