Vivo V23 5G: ಸ್ಮಾರ್ಟ್​ಫೋನ್ ಪ್ರಿಯರ ನಿದ್ದೆ ಕದ್ದ ವಿವೋ ರಿಲೀಸ್ ಮಾಡಿದ ಎರಡು ಹೊಸ ಸ್ಮಾರ್ಟ್​ಫೋನ್

Vivo V23 Pro 5G: ವಿವೋ ವಿ23 5ಜಿ (Vivo V23 5G) ಮತ್ತು ವಿವೋ ವಿ23 ಪ್ರೊ 5ಜಿ (Vivo V23 Pro 5G) ಭರ್ಜರಿ ಫೀಚರ್​ಗಳಿಂದ ಕೂಡಿದ್ದು, ಬಲಿಷ್ಠವಾದ ಮೀಡಿಯಾಟೆಕ್‌ ಡೈಮೆನ್ಸಿಟಿ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌, ಅತ್ಯುತ್ತಮ ಬ್ಯಾಟರಿ ಬ್ಯಾಕಪ್ ಕೂಡ ನೀಡಲಾಗಿದೆ.

Vivo V23 5G: ಸ್ಮಾರ್ಟ್​ಫೋನ್ ಪ್ರಿಯರ ನಿದ್ದೆ ಕದ್ದ ವಿವೋ ರಿಲೀಸ್ ಮಾಡಿದ ಎರಡು ಹೊಸ ಸ್ಮಾರ್ಟ್​ಫೋನ್
Vivo V23 5G and Vivo V23 Pro 5G
Follow us
TV9 Web
| Updated By: Vinay Bhat

Updated on: Jan 06, 2022 | 3:30 PM

ಪ್ರಸಿದ್ಧ ವಿವೋ (Vivo) ಕಂಪನಿ ಭಾರತೀಯ ಮಾರುಕಟ್ಟೆಯಲ್ಲಿ ಮೊನ್ನೆಯಷ್ಟೆ ವಿವೋ ವೈ21ಟಿ (Vivo Y21T) ಬಜೆಟ್ ಬೆಲೆಯ ಸ್ಮಾರ್ಟ್​ಫೋನ್ ಅನ್ನು ಬಿಡುಗಡೆ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ವಿವೋ ವಿ23 5ಜಿ (Vivo V23 5G) ಮತ್ತು ವಿವೋ ವಿ23 ಪ್ರೊ 5ಜಿ (Vivo V23 Pro 5G) ಎಂಬ ಎರಡು ಹೊಸ ಫೋನನ್ನು ಅನಾವರಣ ಮಾಡಿದೆ. ಭರ್ಜರಿ ಫೀಚರ್​ಗಳಿಂದ ಕೂಡಿರುವ ಈ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಈ ಎರಡೂ ಫೋನ್ ಫ್ಲೋರೈಟ್ ಎಜಿ ಗ್ಲಾಸ್ ಬ್ಯಾಕ್ ಅನ್ನು ಹೊಂದಿದ್ದು, ಸೂರ್ಯನ ಬೆಳಕಿನಲ್ಲಿ ಅಲ್ಟ್ರಾ ವೈಲೆಟ್‌ ರೇಸ್‌ ಬಿದ್ದಾಗ ಕಲರ್‌ ಬದಲಾಯಿಸುತ್ತದೆ. ಇದರ ಜೊತೆಗೆ ಬಲಿಷ್ಠವಾದ ಮೀಡಿಯಾಟೆಕ್‌ ಡೈಮೆನ್ಸಿಟಿ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌, ಅತ್ಯುತ್ತಮ ಬ್ಯಾಟರಿ ಬ್ಯಾಕಪ್ ಕೂಡ ನೀಡಲಾಗಿದೆ.

ವಿವೋ V23 5G:

ಭಾರತದಲ್ಲಿ ವಿವೋ V23 5G ಸ್ಮಾರ್ಟ್‌ಫೋನ್‌ ಒಟ್ಟು ಎರಡು ಮಾದರಿಯಲ್ಲಿ ಖರೀದಿಗೆ ಸಿಗಲಿದೆ. ಇದರ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 29,990 ರೂ. ನಿಗದಿ ಮಾಡಲಾಗಿದೆ. ಅಂತೆಯೆ 12GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಬೆಲೆ 34,990 ರೂ. ಇದೆ. ಸ್ಟಾರ್‌ಡಸ್ಟ್ ಬ್ಲಾಕ್ ಮತ್ತು ಸನ್‌ಶೈನ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇದು ವಿವೋ ಕಂಪೆನಿಯ ಅಧಿಕೃತ ವೆಬ್‌ಸೈಟ್, ಫ್ಲಿಪ್‌ಕಾರ್ಟ್ ಮತ್ತು ಆಫ್‌ಲೈನ್ ರಿಟೇಲ್‌ ಸ್ಟೋರ್‌ ಮೂಲಕ ಖರೀದಿಸಲು ಲಭ್ಯವಿರುತ್ತವೆ. ವಿವೋ V23 5G ಜನವರಿ 19 ರಿಂದ ಸೇಲ್ ಕಾಣಲಿದೆ.

ವಿವೋ V23 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 920SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ f/1.89 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ f/2.4 ಅಪರ್ಚರ್ ಲೆನ್ಸ್ ಹೊಂದಿದೆ. ಇದಲ್ಲದೆ ಈ ಫೋನ್‌ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಸೆನ್ಸಾರ್‌ ಸಾಮರ್ಥ್ಯ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ವಿವೋ V23 ಪ್ರೊ 5G:

ವಿವೋ V23 ಪ್ರೊ 5G ಸ್ಮಾರ್ಟ್‌ಫೋನ್‌ ಕೂಡ ಎರಡು ಮಾದಿರಯಲ್ಲಿ ಬಿಡುಗಡೆ ಆಗಿದೆ. ಇದರ 8GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 38,990 ರೂ. ಮತ್ತು 12GB ಹಾಗೂ 256GB ಸ್ಟೋರೇಜ್ ರೂಪಾಂತರಕ್ಕಾಗಿ 43,990 ರೂ. ನಿಗದಿ ಮಾಡಲಾಗಿದೆ.ಈ ಫೋನ್ ಜನವರಿ 13 ರಿಂದ ಖರೀದಿಗೆ ಲಭ್ಯವಾಗಲಿದೆ.

ವಿವೋ V23 ಪ್ರೊ 5G ಸ್ಮಾರ್ಟ್‌ಫೋನ್‌ 1,080×2,376 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.56-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಈ ಸ್ಮಾರ್ಟ್‌ಫೋನ್‌ ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಎಫ್/1.88 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ f/2.4 ಅಪರ್ಚರ್ ಲೆನ್ಸ್ ಹೊಂದಿದೆ. ಇದಲ್ಲದೆ ಈ ಫೋನ್‌ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಸೆನ್ಸಾರ್‌ ಸಾಮರ್ಥ್ಯ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Xiaomi 11 Lite NE 5G: ಶವೋಮಿ 11 ಲೈಟ್ NE 5G ಸ್ಮಾರ್ಟ್​​ಫೋನ್ ಮೇಲೆ ಬಂಪರ್ ಡಿಸ್ಕೌಂಟ್: ಈ ಆಫರ್ ಮಿಸ್ ಮಾಡಲೇ ಬೇಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ