ಒಂದು ದಿನದ ಅಂತರದಲ್ಲಿ ನಾಲ್ಕನೇ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ ವಿವೋ
ವಿವೋ ಕಂಪನಿ ಇಂದು ತನ್ನ V ಸರಣಿ ಅಡಿಯಲ್ಲಿ ವಿವೋ V29 ಲೈಟ್ 5G ಎಂಬ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್‌ಫೋನ್ ಬಿಡುಗಡೆ ಆಗಿದೆ.
ಚೀನಾ ಮೂಲದ ಪ್ರಸಿದ್ಧ ವಿವೋ (Vivo) ಕಂಪನಿಯ ಸ್ಮಾರ್ಟ್ಫೋನ್ಗಳು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಮೊದಲ ಕ್ವಾರ್ಟರ್ನಲ್ಲಿ ಕಡಿಮೆ ಫೋನ್ಗಳನ್ನು ಬಿಡುಗಡೆ ಮಾಡಿದೆ. ಆದರೆ, ಈಗ ಒಂದರ ಹಿಂದೆ ಒಂದರಂತೆ ನೂತನ ಸ್ಮಾರ್ಟ್‌ಫೋನ್ ಅನಾವರಣ ಮಾಡುತ್ತಿದೆ. ಗುರುವಾರವಷ್ಟೆ ತನ್ನ S ಸರಣಿಯಲ್ಲಿ ವಿವೋ S17, ವಿವೋ S17 ಪ್ರೊ (Vivo S17 Pro) ಮತ್ತು ವಿವೋ S17t ಎಂಬ ಮೂರು ಮೊಬೈಲ್ಗಳನ್ನು ರಿಲೀಸ್ ಮಾಡಿತ್ತು. ಇದೀಗ ಇಂದು ತನ್ನ V ಸರಣಿ ಅಡಿಯಲ್ಲಿ ವಿವೋ V29 ಲೈಟ್ 5G ಎಂಬ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್‌ಫೋನ್ ಬಿಡುಗಡೆ ಆಗಿದೆ. ಹಾಗಾದರೆ, ಈ ಮೊಬೈಲ್ನ ಬೆಲೆ, ಫೀಚರ್ಸ್ ಏನಿದೆ ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ವಿವೋ V29 Lite 5G ಸ್ಮಾರ್ಟ್‌ಫೋನ್ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಅನಾವರಣಗೊಂಡಿದೆ. ಇದರ 8GB RAM + 128GB ಸ್ಟೋರೇಜ್ ಆಯ್ಕೆಗೆ CZK 8,499. ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 32,000 ರೂ. ಎನ್ನಬಹುದು. ಈ ಫೋನ್ ಜೂನ್ 15 ರಿಂದ ಖರೀದಿಗೆ ಸಿಗಲಿದೆ. ಇದು ಕಪ್ಪು ಮತ್ತು ಗೋಲ್ಡ್ ಬಣ್ಣದಲ್ಲಿ ಸೇಲ್ ಕಾಣಲಿದೆ.
Alienware m16: ಡೆಲ್ ಸೂಪರ್ ಸ್ಪೀಡ್ ಗೇಮಿಂಗ್ ಲ್ಯಾಪ್ಟಾಪ್ ಬಿಡುಗಡೆ
ಫೀಚರ್ಸ್ ಏನಿದೆ?:
ವಿವೋ V29 ಲೈಟ್ 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲ ಪಡೆದುಕೊಂಡಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ನೀಡಲಾಗಿದೆ. ಅಲ್ಲದೆ ಅಡ್ರಿನೊ 619 GPU ಬೆಂಬಲ ಸಹ ಇದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದಲ್ಲದೆ ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾ ಅಳವಡಿಸಲಾಗಿದೆ.
ವಿವೋ V29 ಲೈಟ್ 5G ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 44W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ನೀಡಲಾಗಿದೆ. ಕನೆಕ್ಟಿವಿಟಿ 5ಜಿ ಸಪೋರ್ಟ್ ಮಾಡುತ್ತದೆ. 4ಜಿ ಎಲ್ಟಿಇ ಹೈಬ್ರಿಡ್ ಎಸ್‌ಡಿ ಕಾರ್ಡ್ ಸ್ಲಾಟ್, ಬ್ಲೂಟೂತ್ 5.1 ಮತ್ತು ವೈಫೈ ಹೊಂದಾಣಿಕೆ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಆಯ್ಕೆ ಇದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ