ರೋಚಕತೆ ಸೃಷ್ಟಿಸಿದ ವಿವೋ V29e ಫೋನ್ ಬಿಡುಗಡೆ ದಿನಾಂಕ ಬಹಿರಂಗ: ಯಾವಾಗ?, ಏನಿದೆ ಫೀಚರ್ಸ್?

Vivo V29e launching on August 28th: ವಿವೋ V29e ಸ್ಮಾರ್ಟ್​ಫೋನ್ ಭಾರತದಲ್ಲಿ ಆಗಸ್ಟ್ 28 ರಂದು ಬಿಡುಗಡೆಯಾಗಲಿದೆ. ಬಿಡುಗಡೆ ಸಮಾರಂಭದ ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗುತ್ತದೆ ಮತ್ತು ಪ್ರತಿಯೊಬ್ಬರೂ ಇದನ್ನು ವೀಕ್ಷಿಸಲು ಆನ್‌ಲೈನ್‌ನಲ್ಲಿ ಲೈವ್ ಸ್ಟ್ರೀಮ್ ಆಯ್ಕೆ ನೀಡಲಾಗುತ್ತದೆ ಎಂದು ವಿವೋ ಹೇಳಿದೆ.

ರೋಚಕತೆ ಸೃಷ್ಟಿಸಿದ ವಿವೋ V29e ಫೋನ್ ಬಿಡುಗಡೆ ದಿನಾಂಕ ಬಹಿರಂಗ: ಯಾವಾಗ?, ಏನಿದೆ ಫೀಚರ್ಸ್?
Vivo V29e
Follow us
Vinay Bhat
|

Updated on: Aug 18, 2023 | 3:01 PM

ಚೀನಾ ಮೂಲದ ಪ್ರಸಿದ್ಧ ವಿವೋ ಕಂಪನಿ ಭಾರತದಲ್ಲಿ ಸ್ಮಾರ್ಟ್​ಫೋನ್ ಬಿಡುಗಡೆ ಮಾಡುವುದನ್ನು ಹೆಚ್ಚಿಸಿದೆ. ಮೊದಲ ಕ್ವಾರ್ಟರ್​ಗೆ ಹೋಲಿಸಿದರೆ ದ್ವಿತೀಯ ಕ್ವಾರ್ಟರ್​ನಲ್ಲಿ ಆಕರ್ಷಕ ಮೊಬೈಲ್​ಗಳನ್ನು ಪರಿಚಯಿಸುತ್ತಿದೆ. ಇದೀಗ ಮತ್ತೊಂದು ನೂತನ ಮೊಬೈಲ್ ಬಿಡುಗಡೆ ಮಾಡುವ ಬಗ್ಗೆ ವಿವೋ ಘೋಷಿಸಿದ್ದು, ದಿನಾಂಕವನ್ನು ಕೂಡ ಬಹಿರಂಗ ಪಡಿಸಿದೆ. ವಿವೋ ಇಂಡಿಯಾ ತನ್ನ ಮುಂಬರುವ ಫೋನ್ ವಿವೋ ವಿ29ಇ (Vivo V29e) ಎಂದು ತಿಳಿಸಿದ್ದು, ಬಿಡುಗಡೆ ದಿನಾಂಕವನ್ನು ಇಂದು ಪ್ರಕಟಿಸಿದೆ. ಇದಕ್ಕಾಗಿ ಮೀಸಲಾದ ಮೈಕ್ರೋಸೈಟ್ ಅನ್ನು ಸಹ ಪ್ರಾರಂಭಿಸಿದೆ. ಜೊತೆಗೆ ಕೆಲ ಫೀಚರ್​ಗಳ ಬಗ್ಗೆ ಮಾಹಿತಿ ಕೂಡ ತಿಳಿಸಿದೆ.

ವಿವೋ V29e ಸ್ಮಾರ್ಟ್​ಫೋನ್ ಭಾರತದಲ್ಲಿ ಆಗಸ್ಟ್ 28 ರಂದು ಬಿಡುಗಡೆಯಾಗಲಿದೆ. ಬಿಡುಗಡೆ ಸಮಾರಂಭದ ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗುತ್ತದೆ ಮತ್ತು ಪ್ರತಿಯೊಬ್ಬರೂ ಇದನ್ನು ವೀಕ್ಷಿಸಲು ಆನ್‌ಲೈನ್‌ನಲ್ಲಿ ಲೈವ್ ಸ್ಟ್ರೀಮ್ ಆಯ್ಕೆ ನೀಡಲಾಗುತ್ತದೆ ಎಂದು ವಿವೋ ಹೇಳಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್, ವಿವೋ.ಕಾಮ್ ಮತ್ತು ರಿಟೇಲ್ ಔಟ್‌ಲೆಟ್‌ಗಳ ಮೂಲಕ ಈ ಸ್ಮಾರ್ಟ್‌ಫೋನ್ ಮಾರಾಟವಾಗಲಿದೆ ಎಂದು ದೃಢಪಡಿಸಿದೆ.

ಇದನ್ನೂ ಓದಿ
Image
ವಾಟ್ಸ್​ಆ್ಯಪ್​ನಲ್ಲಿ ಬಂತು HD ಕ್ವಾಲಿಟಿ ಫೋಟೋ ಆಯ್ಕೆ: ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
Image
Redmi Pad SE: ಬಜೆಟ್ ದರಕ್ಕೆ ಬೆಸ್ಟ್ ಫೀಚರ್ಸ್ ಲೇಟೆಸ್ಟ್ ರೆಡ್ಮಿ ಪ್ಯಾಡ್
Image
ಇನ್​ಸ್ಟಾಗ್ರಾಮ್​ನಲ್ಲಿ ಕೆಲವರಿಗೆ ಮಾತ್ರ ಸ್ಟೇಟಸ್ ಕಾಣುವಂತೆ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್
Image
Moto E13 128GB: ಮೋಟೊ ಹೊಸ ಫೋನ್ ಹೊಸ ಆವೃತ್ತಿಯಲ್ಲಿ ಲಭ್ಯ

ವಿವೋ V29e ಬಿಡುಗಡೆ ಕುರಿತು ಕಂಪನಿ ಹಂಚಿಕೊಂಡಿರುವ ಟ್ವೀಟ್:

ವಿವೋ V29e ಕೆಂಪು ಮತ್ತು ನೀಲಿ ಎರಡು ಬಣ್ಣದ ಆಯ್ಕೆಗಳಲ್ಲಿ ಬಿಡುಗಡೆ ಆಗಲಿದೆಯಂತೆ. ಇದು ಡ್ಯುಯಲ್-ಟೋನ್ ಹಿಂಬದಿಯ ವಿನ್ಯಾಸದೊಂದಿಗೆ 3D ಡಿಸ್ ಪ್ಲೇ ಮತ್ತು ಬ್ಯಾಕ್ ಪ್ಯಾನಲ್​ನಲ್ಲಿ ಬಣ್ಣವನ್ನು ಬದಲಾಯಿಸುವ ಆಯ್ಕೆ ಹೊಂದಿದೆ. ಒಟ್ಟಾರೆಯಾಗಿ, ವಿವೋ V29e ಪ್ರೀಮಿಯಂ ವಿನ್ಯಾಸ ಮತ್ತು ಲುಕ್ ಅನ್ನು ಹೊಂದಿದೆ. ಭಾರತದಲ್ಲಿ ಬಿಡುಗಡೆಯಾಗಲಿರುವ V29 ಸರಣಿಯ ಮೊದಲ ಫೋನ್ ಇದಾಗಿದೆ. V29e ಬಿಡುಗಡೆಯ ನಂತರ ವಿವೋ V29ಮತ್ತು ವಿವೋ V29 ಪ್ರೊ ಮಾದರಿಗಳು ಅನಾವರಣಗೊಳ್ಳುವ ನಿರೀಕ್ಷೆಯಿದೆ.

ಬರೋಬ್ಬರಿ 24GB RAM: ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದ ರಿಯಲ್ ಮಿ ಜಿಟಿ 5 ಸ್ಮಾರ್ಟ್​ಫೋನ್

ವಿವೋ V29e ಕ್ಯಾಮೆರಾ ವಿಶೇಷತೆಗಳು:

ವಿವೋ ಬಿಡುಗಡೆ ಮಾಡಿರುವ ಟೀಸರ್​ನಲ್ಲಿ, ವಿವೋ V29e ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಫೀಚರ್ ಬಹಿರಂಗವಾಗಿದೆ. OIS (ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್) ಜೊತೆಗೆ 64MP ಪ್ರಾಥಮಿಕ ಕ್ಯಾಮೆರಾದೊಂದಿಗೆ ಡ್ಯುಯಲ್ ಹಿಂಬದಿಯ ಕ್ಯಾಮೆರಾಗಳನ್ನು ಇದು ಹೊಂದಿದೆ. ಕಡಿಮೆ-ಬೆಳಕಿನ ಛಾಯಾಗ್ರಹಣ ಮತ್ತು ರಾತ್ರಿಯ ಫೋಟೋಕ್ಕಾಗಿ ಕ್ಯಾಮರಾವನ್ನು ಆಪ್ಟಿಮೈಸ್ ಮಾಡಲಾಗಿದೆ. ವಿವೋ V29e ಸಹ ‘ಐ ಆಟೋ ಫೋಕಸ್’ ಜೊತೆಗೆ 50MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಭಾರತದಲ್ಲಿ ವಿವೋ V29e ಬೆಲೆ:

ಭಾರತದಲ್ಲಿ V29e ನ ನಿಖರ ಬೆಲೆ ಬಹಿರಂಗವಾಗಿಲ್ಲ. ಆದರೆ, ಮೂಲಗಳ ಪ್ರಕಾರ ಇದರ ಬೆಲೆ 25,000 ರೂ. ಯಿಂದ 30,000 ರೂ. ಒಳಗಡೆ ಇರಲಿದೆ ಎಂದು ಹೇಳಲಾಗಿದೆ. ಇದು ಭಾರತದಲ್ಲಿ 8GB + 128GB ಮತ್ತು 8GB + 256GB ಯ ಎರಡು ರೂಪಾಂತರಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ