Vivo X70 ProPlus, X70 Pro: ವಿವೋ ಕಂಪನಿಯಿಂದ ಬಂಪರ್ ಫೀಚರ್ಸ್​ನ ದುಬಾರಿಯ ಬೆಲೆಯ ಎರಡು ಹೊಸ ಸ್ಮಾರ್ಟ್​ಫೋನ್ ರಿಲೀಸ್

ವಿವೋ X70 ಪ್ರೊ ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1200 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ.

Vivo X70 ProPlus, X70 Pro: ವಿವೋ ಕಂಪನಿಯಿಂದ ಬಂಪರ್ ಫೀಚರ್ಸ್​ನ ದುಬಾರಿಯ ಬೆಲೆಯ ಎರಡು ಹೊಸ ಸ್ಮಾರ್ಟ್​ಫೋನ್ ರಿಲೀಸ್
Vivo X70 Pro and Vivo X70 Pro+
Follow us
TV9 Web
| Updated By: Vinay Bhat

Updated on: Sep 30, 2021 | 2:30 PM

ವಿಶ್ವದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಕಂಪನಿ ವಿವೋ (Vivo) ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿರುವ ವಿವೋ ಇದೀಗ ತನ್ನ X70 (Vivo X70 Series) ಸರಣಿಯಲ್ಲಿ ವಿವೋ X70 ಪ್ರೊ ((Vivo X70 Pro) ಮತ್ತು ವಿವೋ X70 ಪ್ರೊ+ ((Vivo X70 Pro Plus) ಸ್ಮಾರ್ಟ್​ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ವಿಭಿನ್ನ ಮಾದರಿಯ ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿವೆ. ಅಲ್ಲದೆ ಇದರ ಕ್ಯಾಮೆರಾಗಳನ್ನು Zeiss ಟ್ಯೂನ್ ಮಾಡಲಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ ಎಂಬುದನ್ನು ನೋಡೋಣ.

ವಿವೋ X70 ಪ್ರೊ:

ವಿವೋ X70 ಪ್ರೊ ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1200 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ 50 ಮೆಗಾಫಿಕ್ಸೆಲ್​ನ ಪ್ರಾಥಮಿಕ IMX766V ಸೆನ್ಸಾರ್, 12 MP ಅಲ್ಟ್ರಾವೈಡ್ ಲೆನ್ಸ್, 12 MP ಟೆಲಿಫೋಟೋ ಲೆನ್ಸ್ 2x ಜೂಮ್, ಮತ್ತು 8 MP ಪೆರಿಸ್ಕೋಪ್ ಲೆನ್ಸ್ 5x ಆಪ್ಟಿಕಲ್ ಜೂಮ್ ಜೊತೆಗೆ 32 ಮೆಗಾಫಿಕ್ಸೆಲ್​ನ ಸೆಲ್ಫೀ ಕ್ಯಾಮೆರಾ ನೀಡಲಾಗಿದೆ. 4,450mAh ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸುತ್ತದೆ.

ವಿವೋ X70 ಪ್ರೊ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 46,990 ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM + 256GB ಸ್ಟೋರೇಜ್ ವೇರಿಯಂಟ್‌ಗೆ 49,990 ರೂ. ಇದೆ. ಇನ್ನೂ ಹೈ-ಎಂಡ್ 12GB RAM + 256GB ಸ್ಟೋರೇಜ್ ರೂಪಾಂತರವು 52,990 ರೂ. ಗೆ ಸಿಗಲಿದೆ.

ವಿವೋ X70ಪ್ರೊ ಪ್ಲಸ್‌:

ವಿವೋ X70ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 6.78-ಇಂಚಿನ ಅಲ್ಟ್ರಾ-ಹೆಚ್‌ಡಿ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹಾಗೂ 120Hz ರಿಫ್ರೇಶ್‌ ರೇಟ್‌ ಅನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. 50 ಮೆಗಾಫಿಕ್ಸೆಲ್​ನ ಪ್ರೈಮರಿ ಸೆನ್ಸಾರ್, 48 ಮೆಗಾಪಿಕ್ಸೆಲ್ ಸೆನ್ಸಾರ್​ನ ಆಲ್ಟ್ರಾ ವೈಡ್ ಆಂಗಲ್ ಲೆನ್ಸ್, 12 ಮೆಗಾಫಿಕ್ಸೆಲ್​ನ ಡೆಪ್ತ್ ಸೆನ್ಸಾರ್, 8 ಮೆಗಾಫಿಕ್ಸೆಲ್​ನ ಪೆರಿಸ್ಕೋಪ್ ಕ್ಯಾಮೆರಾ ಇರುವುದು ವಿಶೇಷ. ಅಂತೆಯೆ 32 ಮೆಗಾಫಿಕ್ಸೆಲ್​ ಸೆಲ್ಫೀ ಕ್ಯಾಮೆರಾ ನೀಡಲಾಗಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸುತ್ತದೆ.

ವಿವೋ X70 ಪ್ರೊ + ಸ್ಮಾರ್ಟ್‌ಫೋನಿನ್ ಕೇವಲ ಒಂದು ಆಯ್ಕೆಯಲ್ಲಷ್ಟೆ ಇದು. ಇದರ 12GB RAM ಮತ್ತು 256GB ಸ್ಟೋರೇಜ್ ರೂಪಾಂತರಕ್ಕೆ 79,999 ರೂ. ನಿಗದಿ ಮಾಡಲಾಗಿದೆ. ವಿವೋ X70 ಪ್ರೊ ಇಂದಿನಿಂದ ಪ್ರೀ ಬುಕ್ಕಿಂಗ್​ಗೆ ಲಭ್ಯವಿದೆ. ಅಕ್ಟೋಬರ್ 7 ರಿಂದ ಖರೀದಿಗೆ ಸಿಗಲಿದೆ. ವಿವೋ X70 ಪ್ರೊ ಪ್ಲಸ್ ಸ್ಮಾರ್ಟ್​ಫೋನ್ ಇಂದಿನಿಂದ ಪ್ರೀ ಬುಕ್ಕಿಂಗ್​ಗೆ ಲಭ್ಯವಿದ್ದು ಅಕ್ಟೋಬರ್ 12ಕ್ಕೆ ಮೊದಲ ಸೇಲ್ ಕಾಣಲಿದೆ. ಈ ಎರಡೂ ಸ್ಮಾರ್ಟ್​ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್, ವಿವೋ ಇಂಡಿಯಾ ಇ- ಸ್ಟೋರ್​ಗಳಲ್ಲಿ ಖರೀದಿಗೆ ಸಿಗಲಿದೆ.

Poco C31: ಭಾರತದಲ್ಲಿ ಕೇವಲ 8,499 ರೂ. ಗೆ ಬಿಡುಗಡೆ ಆಯಿತು ಪೋಕೋ ಸಿ31 ಸ್ಮಾರ್ಟ್​ಫೋನ್

Micromax IN Note 1: ಚೀನಾ ಮೊಬೈಲ್​ಗಳಿಗೆ ಶಾಕ್ ಕೊಟ್ಟ ಭಾರತೀಯ ಸ್ಮಾರ್ಟ್​ಫೋನ್: ಬೆಲೆಯಲ್ಲಿ ಭರ್ಜರಿ ಇಳಿಕೆ

(Vivo X70 Pro Vivo just dropped the X70 series including the Vivo X70 Pro and X70 ProPlus in India)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ