AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivo X70 Pro: ಚೀನಾ ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿರುವ ಈ ಸ್ಮಾರ್ಟ್​ಫೋನ್ ತಿಂಗಳಾಂತ್ಯಕ್ಕೆ ಭಾರತದಲ್ಲಿ ಬಿಡುಗಡೆ

ವಿವೋ X70 ಪ್ರೊ ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್ 1080SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ.

Vivo X70 Pro: ಚೀನಾ ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿರುವ ಈ ಸ್ಮಾರ್ಟ್​ಫೋನ್ ತಿಂಗಳಾಂತ್ಯಕ್ಕೆ ಭಾರತದಲ್ಲಿ ಬಿಡುಗಡೆ
Vivo X70 Pro
TV9 Web
| Updated By: Vinay Bhat|

Updated on: Sep 11, 2021 | 1:14 PM

Share

ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಭಿನ್ನ ಶ್ರೇಣಿಯ ಫೋನುಗಳನ್ನು ಪರಿಯಿಸಿ ವಿಮರ್ಶಕರಿಂದ ಮೆಚ್ಚುಗೆಗೆ ಪಾತ್ರವಾಗಿರುವ ವಿವೋ ಕಂಪೆನಿ ಇದೀಗ ತನ್ನ ಹೊಸ ವಿವೋ X70 (Vivo X70) ಸರಣಿಯನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿ ಧೂಳೆಬ್ಬಿಸುತ್ತಿದೆ. ವಿವೋ X70 ಹಾಗೂ ವಿವೋ X70 ಪ್ರೊ (Vivo X70 Pro) ಮತ್ತು ವಿವೋ X70 ಪ್ರೊ+ (Vivo X70 Pro+) ಸ್ಮಾರ್ಟ್​ಫೋನ್ ವಿಭಿನ್ನ ಮಾದರಿಯ ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಕರ್ಷಕ ಕ್ಯಾಮೆರಾ, ಬ್ಯಾಟರಿಯನ್ನು ಒಳಗೊಂಡಿದೆ. ಭಾರತದಲ್ಲಿ ಈ ಸ್ಮಾರ್ಟ್​ಫೋನ್ ಸೆಪ್ಟೆಂಬರ್ ತಿಂಗಳ ಅಂತ್ಯದಲ್ಲಿ ಬಿಡುಗಡೆ ಆಗಲಿದೆಯಂತೆ.

ಬೆಲೆ ಎಷ್ಟು?:

ವಿವೋ X70 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ ಚೀನಾದಲ್ಲಿ CNY 3,699 ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 42,100 ರೂ. ಎನ್ನಬಹುದು. 8GB RAM + 256GB ಸ್ಟೋರೇಜ್ ರೂಪಾಂತರಕ್ಕೆ CNY 3,999 (ಅಂದಾಜು 45,500ರೂ) ಮತ್ತು 12GB RAM + 256GB ಶೇಖರಣಾ ರೂಪಾಂತರಕ್ಕಾಗಿ CNY 4,299 (ಸುಮಾರು 49,000ರೂ) ಬೆಲೆ ಹೊಂದಿದೆ.

ಇನ್ನೂ ವಿವೋ X70 ಪ್ರೊ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ CNY 4,299 (ಅಂದಾಜು 49,001ರೂ) ಮತ್ತು 8GB RAM + 256GB ಸ್ಟೋರೇಜ್ ವೇರಿಯಂಟ್‌ಗೆ CNY 4,599 (ಸರಿಸುಮಾರು ರೂ. 52,400), ಬೆಲೆ ಹೊಂದಿದೆ. ವಿವೋ X70 ಪ್ರೊ + ಸ್ಮಾರ್ಟ್‌ಫೋನ್‌ 8 ಜಿಬಿ RAM + 256 ಜಿಬಿ ಸ್ಟೋರೇಜ್ ವೇರಿಯಂಟ್ ಗೆ ಸಿಎನ್‌ವೈ 5,499 (ಅಂದಾಜು 62,700ರೂ) ಬೆಲೆಯನ್ನು ಹೊಂದಿದೆ.

ವಿವೋ X70:

ವಿವೋ X70 ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾಟೆಕ್‌ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಒರಿಜಿನೋಸ್ 1.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 40 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 32 ಮೆಗಾಪಿಕ್ಸೆಲ್ ಸೆನ್ಸರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ವಿವೋ X70 ಪ್ರೊ:

ವಿವೋ X70 ಪ್ರೊ ಸ್ಮಾರ್ಟ್‌ಫೋನ್‌ ಕೂಡ 6.56 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್ 1080SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4,450mAh ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಜೊತೆಗೆ 32 ಮೆಗಾಪಿಕ್ಸೆಲ್ ಸೆನ್ಸರ್ ಸೆಲ್ಫಿ ಕ್ಯಾಮೆರಾ ಹೊಂದಿದೆ.

ವಿವೋ X70ಪ್ರೊ ಪ್ಲಸ್:

ವಿವೋ X70ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 6.78-ಇಂಚಿನ ಅಲ್ಟ್ರಾ-ಹೆಚ್‌ಡಿ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ.

ನಿಮ್ಮ ಆ್ಯಂಡ್ರಾಯ್ಡ್ ಮೊಬೈಲ್​ನಲ್ಲಿ ಕನ್ನಡದಲ್ಲೇ ಬರೆಯುವುದು ಹೇಗೆ?

Facebook Ray-Ban Stories: ಸ್ಮಾರ್ಟ್​ ಗ್ಲಾಸ್ ಪರಿಚಯಿಸಿದ ಫೇಸ್​ಬುಕ್: ಇನ್ಮುಂದೆ ಕನ್ನಡಕದಲ್ಲೇ ಎಲ್ಲಾ!

(Vivo X70 Pro Vivo X70 Series Launched in China and Tipped to Launch in India By September End)

ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು