Vivo X70 series: ವಿದೇಶದಲ್ಲಿ ಸಂಚಲನ ಸೃಷ್ಟಿಸಿದ ವಿವೋ X70 ಸರಣಿ ಸೆ. 30ಕ್ಕೆ ಭಾರತದಲ್ಲಿ ಬಿಡುಗಡೆ

ಆಕರ್ಷಕ ಕ್ಯಾಮೆರಾ, ಬ್ಯಾಟರಿಯನ್ನು ಒಳಗೊಂಡಿರುವ ವಿವೋ X70, ವಿವೋ X70 ಪ್ರೊ ಮತ್ತು ವಿವೋ X70 ಪ್ರೊ+ ಇದೇ ಸೆಪ್ಟೆಂಬರ್ 30 ರಂದು ಅಧಿಕೃತವಾಗಿ ಭಾರತದಲ್ಲಿ ಬಿಡುಗಡೆ ಆಗಲಿವೆ.

Vivo X70 series: ವಿದೇಶದಲ್ಲಿ ಸಂಚಲನ ಸೃಷ್ಟಿಸಿದ ವಿವೋ X70 ಸರಣಿ ಸೆ. 30ಕ್ಕೆ ಭಾರತದಲ್ಲಿ ಬಿಡುಗಡೆ
Vivo X70
Follow us
TV9 Web
| Updated By: Vinay Bhat

Updated on: Sep 17, 2021 | 3:31 PM

ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಭಿನ್ನ ಶ್ರೇಣಿಯ ಫೋನುಗಳನ್ನು ಪರಿಯಿಸಿ ವಿಮರ್ಶಕರಿಂದ ಮೆಚ್ಚುಗೆಗೆ ಪಾತ್ರವಾಗಿರುವ ವಿವೋ ಕಂಪೆನಿ ಇತ್ತೀಚೆಗಷ್ಟೆ ಹೊಸ ವಿವೋ X70 (Vivo X70) ಸರಣಿಯನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿತ್ತು. ವಿದೇಶದಲ್ಲಿ ಧೂಳೆಬ್ಬಿಸುತ್ತಿರುವ ಈ ಸರಣಿಯಲ್ಲಿ ವಿವೋ X70, ವಿವೋ X70 ಪ್ರೊ (Vivo X70 Pro) ಮತ್ತು ವಿವೋ X70 ಪ್ರೊ+ (Vivo X70 Pro+) ಸ್ಮಾರ್ಟ್​ಫೋನ್​ಗಳು ಒಳಗೊಂಡಿದೆ. ವಿಭಿನ್ನ ಮಾದರಿಯ ಪ್ರೊಸೆಸರ್‌, ಆಕರ್ಷಕ ಕ್ಯಾಮೆರಾ, ಬ್ಯಾಟರಿಯನ್ನು ಒಳಗೊಂಡಿರುವ ಈ ಸ್ಮಾರ್ಟ್​ಫೋನ್ ಇದೇ ಸೆಪ್ಟೆಂಬರ್ 30 ರಂದು ಅಧಿಕೃತವಾಗಿ ಭಾರತದಲ್ಲಿ ಬಿಡುಗಡೆ ಆಗಲಿವೆ. ಈ ಬಗ್ಗೆ ವಿವೋ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕೌಂಟ್‌ಡೌನ್‌ ಡೈಮರ್ ಸೂಚಿಸಿದೆ.

ವಿವೋ X70 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ ಚೀನಾದಲ್ಲಿ CNY 3,699 ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 42,100 ರೂ. ಎನ್ನಬಹುದು. 8GB RAM + 256GB ಸ್ಟೋರೇಜ್ ರೂಪಾಂತರಕ್ಕೆ CNY 3,999 (ಅಂದಾಜು 45,500ರೂ) ಮತ್ತು 12GB RAM + 256GB ಶೇಖರಣಾ ರೂಪಾಂತರಕ್ಕಾಗಿ CNY 4,299 (ಸುಮಾರು 49,000ರೂ) ಬೆಲೆ ಹೊಂದಿದೆ.

ಇನ್ನೂ ವಿವೋ X70 ಪ್ರೊ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ CNY 4,299 (ಅಂದಾಜು 49,001ರೂ) ಮತ್ತು 8GB RAM + 256GB ಸ್ಟೋರೇಜ್ ವೇರಿಯಂಟ್‌ಗೆ CNY 4,599 (ಸರಿಸುಮಾರು ರೂ. 52,400), ಬೆಲೆ ಹೊಂದಿದೆ. ವಿವೋ X70 ಪ್ರೊ + ಸ್ಮಾರ್ಟ್‌ಫೋನ್‌ 8 ಜಿಬಿ RAM + 256 ಜಿಬಿ ಸ್ಟೋರೇಜ್ ವೇರಿಯಂಟ್ ಗೆ ಸಿಎನ್‌ವೈ 5,499 (ಅಂದಾಜು 62,700ರೂ) ಬೆಲೆಯನ್ನು ಹೊಂದಿದೆ.

ವಿವೋ X70:

ವಿವೋ X70 ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾಟೆಕ್‌ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಒರಿಜಿನೋಸ್ 1.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 40 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 32 ಮೆಗಾಪಿಕ್ಸೆಲ್ ಸೆನ್ಸರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ವಿವೋ X70 ಪ್ರೊ:

ವಿವೋ X70 ಪ್ರೊ ಸ್ಮಾರ್ಟ್‌ಫೋನ್‌ ಕೂಡ 6.56 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್ 1080SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4,450mAh ಬ್ಯಾಟರಿಯನ್ನು ಹೊಂದಿದ್ದು, 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಜೊತೆಗೆ 32 ಮೆಗಾಪಿಕ್ಸೆಲ್ ಸೆನ್ಸರ್ ಸೆಲ್ಫಿ ಕ್ಯಾಮೆರಾ ಹೊಂದಿದೆ.

ವಿವೋ X70ಪ್ರೊ ಪ್ಲಸ್:

ವಿವೋ X70ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 6.78-ಇಂಚಿನ ಅಲ್ಟ್ರಾ-ಹೆಚ್‌ಡಿ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ.

Realme C25Y: ಬರೋಬ್ಬರಿ 48 ದಿನಗಳ ಸ್ಟ್ಯಾಂಡ್‌ಬೈ ಟೈಂ: ಭಾರತದಲ್ಲಿ ರಿಯಲ್‌ಮಿ C25Y ಸ್ಮಾರ್ಟ್​ಫೋನ್ ಬಿಡುಗಡೆ

Youtube: ಇನ್ಮುಂದೆ ಯಾವುದೇ ಭಾಷೆಯ ಕಮೆಂಟ್​ಗಳನ್ನು ಕನ್ನಡದಲ್ಲೇ ಓದಿ: ಯೂಟ್ಯೂಬ್​ನಿಂದ ಹೊಸ ಫೀಚರ್

(Vivo X70 Vivo X70 Pro and Vivo X70 ProPlus will be launched in India on September 30)

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು