AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivo Y01: ಸದ್ದಿಲ್ಲದೆ ಕೇವಲ 8,999 ರೂಪಾಯಿಗೆ ಆಕರ್ಷಕ ಸ್ಮಾರ್ಟ್​​ಫೋನ್ ರಿಲೀಸ್ ಮಾಡಿದ ವಿವೋ

ವಿವೋದ Y ಸರಣಿಯ ಫೋನ್​ಗೆ ಭಾರತದಲ್ಲಿ ಹೆಚ್ಚಿನ ಬೇಡಿಕೆಯಿದೆ. ಇದನ್ನೆ ಗಮನದಲ್ಲಿಟ್ಟುಕೊಂಡು ಸದ್ದಿಲ್ಲದೆ ವಿವೋ ಕಂಪನಿ ದೇಶದಲ್ಲಿ ಹೊಸ ವಿವೋ ವೈ01 (Vivo Y01) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ.

Vivo Y01: ಸದ್ದಿಲ್ಲದೆ ಕೇವಲ 8,999 ರೂಪಾಯಿಗೆ ಆಕರ್ಷಕ ಸ್ಮಾರ್ಟ್​​ಫೋನ್ ರಿಲೀಸ್ ಮಾಡಿದ ವಿವೋ
Vivo Y01
TV9 Web
| Updated By: Vinay Bhat|

Updated on: May 17, 2022 | 2:26 PM

Share

ಈ ವರ್ಷ ಭಾರತದಲ್ಲಿ ಅತಿ ಹೆಚ್ಚು ಸ್ಮಾರ್ಟ್​​ಫೋನ್​ಗಳನ್ನು (Smartphone) ಬಿಡುಗಡೆ ಮಾಡಿರುವ ಕಂಪನಿ ಎಂದರೆ ಅದು ವಿವೋ (Vivo) ಎನ್ನಬಹುದು. ತಿಂಗಳಿಗೆ ಎರಡು ಅಥವಾ ಮೂರು ಮೊಬೈಲ್​ಗಳನ್ನು ವಿವೋ ಬಿಡುಗಡೆ ಮಾಡುತ್ತಲೇ ಇದೆ. ಅದರಲ್ಲೂ ತನ್ನ Y ಸರಣಿಯ ಫೋನ್​ಗೆ ಭಾರತದಲ್ಲಿ ಹೆಚ್ಚಿನ ಬೇಡಿಕೆಯಿದೆ. ಇದನ್ನೆ ಗಮನದಲ್ಲಿಟ್ಟುಕೊಂಡು ಸದ್ದಿಲ್ಲದೆ ವಿವೋ ಕಂಪನಿ ದೇಶದಲ್ಲಿ ಹೊಸ ವಿವೋ ವೈ01 (Vivo Y01) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಯಾವುದೇ ಪ್ರಚಾರವಿಲ್ಲದೆ ಸೈಲೆಂಟ್ ಆಗಿ ಈ ಸ್ಮಾರ್ಟ್​ಫೋನ್ (Smartphone) ಅನ್ನು ಲಾಂಚ್ ಮಾಡಿದೆ. ಈ ಫೋನ್‌ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದ್ದು, ಸೆಲ್ಫಿ ಕ್ಯಾಮೆರಾವನ್ನು ಕೂಡ ಪಡೆದುಕೊಂಡಿದೆ. ಮೀಡಿಯಾ ಟೆಕ್‌ ಹಿಲಿಯೋ P35 ಪ್ರೊಸೆಸರ್ ಬಲವನ್ನು ಹೊಂದಿದೆ. ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

  1. ವಿವೋ Y01 ಸ್ಮಾರ್ಟ್‌ಫೋನ್‌ ಭಾರತದಲ್ಲಿ 2GB RAM ಮತ್ತು 32GB ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ ಬೆಲೆ 8,999 ರೂ. ಆಗಿದೆ. ಇದು ಎಲಿಗಂಟ್ ಬ್ಲ್ಯಾಕ್ ಮತ್ತು ಸಫೈರ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.
  2. ಈ ಸ್ಮಾರ್ಟ್‌ಫೋನ್‌ 6.51 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720×1600 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದಿಂದ ಕೂಡಿದೆ. ಐ ಪ್ರೊಟೆಕ್ಷನ್ ಮೋಡ್‌ ಅನ್ನು ಸಹ ನೀಡಲಾಗಿದೆ.
  3. ಮೀಡಿಯಾಟೆಕ್‌ ಹಿಲಿಯೋ P35 ಪ್ರೊಸೆಸರ್ ಬಲವನ್ನು ಹೊಂದಿದ್ದು, ಮಲ್ಟಿ-ಟರ್ಬೊ 3.0 ನಿಂದ ನಡೆಸಲಾಗುತ್ತಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
  4. ವಿವೋ Y01 ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು ಮುಖದ ಸೌಂದರ್ಯಕ್ಕೆ ಸಮಯ-ನಷ್ಟದಂತಹ ವೈಶಿಷ್ಟ್ಯಗಳನ್ನು ಬೆಂಬಲಿಸುತ್ತದೆ.
  5. ಇದನ್ನೂ ಓದಿ
    Image
    Mega Summer Days Sale: ಸಮ್ಮರ್ ಸೇಲ್ ಮುಗಿದ ಬೆನ್ನಲ್ಲೇ ಮೆಗಾ ಸಮ್ಮರ್ ಡೇಸ್: ಅಮೆಜಾನ್​ನಿಂದ ಆಫರ್ ಮೇಲೆ ಆಫರ್
    Image
    Galaxy F23 5G: ಬೆಲೆ ಕೇವಲ 15,000 ರೂ.: ಹೊಸ ಕಲರ್​ನಲ್ಲಿ ಗ್ಯಾಲಕ್ಸಿ F23 5G: ಬಂಪರ್ ಆಫರ್ ಮೂಲಕ ಖರೀದಿಸಿ
    Image
    iPhone SE 2022: ಐಫೋನ್ ಖರೀದಿಗೆ ಕ್ಯೂ ನಿಂತ ಜನರು: ಕೇವಲ 18,599 ರೂ. ಗೆ ಸಿಗುತ್ತಿದೆ ಆ್ಯಪಲ್ ಫೋನ್
    Image
    Smart TV: ಕೇವಲ 26 ಸಾವಿರಕ್ಕೆ 43 ಇಂಚಿನ ಸ್ಮಾರ್ಟ್ ಟಿವಿ: ಫೀಚರ್ಸ್ ನೋಡಿದ್ರೆ ಖರೀದಿಸದೆ ಇರಲ್ಲ
  6. ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯಾವುದೇ ಗ್ಲಿಚ್ ಇಲ್ಲದೆ ಗಂಟೆಗಳ ಬಳಕೆಯನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!