Kannada News Technology Vivo Y01 was launched in India the companys latest budget model with just rs 8999
Vivo Y01: ಸದ್ದಿಲ್ಲದೆ ಕೇವಲ 8,999 ರೂಪಾಯಿಗೆ ಆಕರ್ಷಕ ಸ್ಮಾರ್ಟ್‌ಫೋನ್ ರಿಲೀಸ್ ಮಾಡಿದ ವಿವೋ
ವಿವೋದ Y ಸರಣಿಯ ಫೋನ್ಗೆ ಭಾರತದಲ್ಲಿ ಹೆಚ್ಚಿನ ಬೇಡಿಕೆಯಿದೆ. ಇದನ್ನೆ ಗಮನದಲ್ಲಿಟ್ಟುಕೊಂಡು ಸದ್ದಿಲ್ಲದೆ ವಿವೋ ಕಂಪನಿ ದೇಶದಲ್ಲಿ ಹೊಸ ವಿವೋ ವೈ01 (Vivo Y01) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ.
Vivo Y01
Follow us on
ಈ ವರ್ಷ ಭಾರತದಲ್ಲಿ ಅತಿ ಹೆಚ್ಚು ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡಿರುವ ಕಂಪನಿ ಎಂದರೆ ಅದು ವಿವೋ(Vivo) ಎನ್ನಬಹುದು. ತಿಂಗಳಿಗೆ ಎರಡು ಅಥವಾ ಮೂರು ಮೊಬೈಲ್ಗಳನ್ನು ವಿವೋ ಬಿಡುಗಡೆ ಮಾಡುತ್ತಲೇ ಇದೆ. ಅದರಲ್ಲೂ ತನ್ನ Y ಸರಣಿಯ ಫೋನ್ಗೆ ಭಾರತದಲ್ಲಿ ಹೆಚ್ಚಿನ ಬೇಡಿಕೆಯಿದೆ. ಇದನ್ನೆ ಗಮನದಲ್ಲಿಟ್ಟುಕೊಂಡು ಸದ್ದಿಲ್ಲದೆ ವಿವೋ ಕಂಪನಿ ದೇಶದಲ್ಲಿ ಹೊಸ ವಿವೋ ವೈ01 (Vivo Y01) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಯಾವುದೇ ಪ್ರಚಾರವಿಲ್ಲದೆ ಸೈಲೆಂಟ್ ಆಗಿ ಈ ಸ್ಮಾರ್ಟ್‌ಫೋನ್ (Smartphone) ಅನ್ನು ಲಾಂಚ್ ಮಾಡಿದೆ. ಈ ಫೋನ್ ಸಿಂಗಲ್ ರಿಯರ್ ಕ್ಯಾಮೆರಾವನ್ನು ಹೊಂದಿದ್ದು, ಸೆಲ್ಫಿ ಕ್ಯಾಮೆರಾವನ್ನು ಕೂಡ ಪಡೆದುಕೊಂಡಿದೆ. ಮೀಡಿಯಾ ಟೆಕ್ ಹಿಲಿಯೋ P35 ಪ್ರೊಸೆಸರ್ ಬಲವನ್ನು ಹೊಂದಿದೆ. ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ವಿವೋ Y01 ಸ್ಮಾರ್ಟ್‌ಫೋನ್ ಭಾರತದಲ್ಲಿ 2GB RAM ಮತ್ತು 32GB ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ ಬೆಲೆ 8,999 ರೂ. ಆಗಿದೆ. ಇದು ಎಲಿಗಂಟ್ ಬ್ಲ್ಯಾಕ್ ಮತ್ತು ಸಫೈರ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.
ಈ ಸ್ಮಾರ್ಟ್‌ಫೋನ್ 6.51 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720×1600 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದಿಂದ ಕೂಡಿದೆ. ಐ ಪ್ರೊಟೆಕ್ಷನ್ ಮೋಡ್ ಅನ್ನು ಸಹ ನೀಡಲಾಗಿದೆ.
ಮೀಡಿಯಾಟೆಕ್ ಹಿಲಿಯೋ P35 ಪ್ರೊಸೆಸರ್ ಬಲವನ್ನು ಹೊಂದಿದ್ದು, ಮಲ್ಟಿ-ಟರ್ಬೊ 3.0 ನಿಂದ ನಡೆಸಲಾಗುತ್ತಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ವಿವೋ Y01 ಸ್ಮಾರ್ಟ್‌ಫೋನ್ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು ಮುಖದ ಸೌಂದರ್ಯಕ್ಕೆ ಸಮಯ-ನಷ್ಟದಂತಹ ವೈಶಿಷ್ಟ್ಯಗಳನ್ನು ಬೆಂಬಲಿಸುತ್ತದೆ.
ಇದನ್ನೂ ಓದಿ
ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯಾವುದೇ ಗ್ಲಿಚ್ ಇಲ್ಲದೆ ಗಂಟೆಗಳ ಬಳಕೆಯನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.