Vivo Y02: ಬಜೆಟ್ ಬೆಲೆಗೆ ಬೊಂಬಾಟ್ ಸ್ಟಾರ್ಟ್​ಫೋನ್ ಬಿಡುಗಡೆ ಮಾಡಿದ ವಿವೋ: ಎಷ್ಟು ರೂ.?

ವಿವೋ ಕಂಪನಿ ಇದೀಗ ತನ್ನ ವೈ ಸರಣಿಯಲ್ಲೇ ಮತ್ತೊಂದು ಹೊಸ ವಿವೋ ವೈ02 (Vivo Y02) ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದು ಮೀಡಿಯಾಟೆಕ್‌ ಪ್ರೊಸೆಸರ್‌ ಅನ್ನು ನೀಡಲಾಗಿದೆ.

Vivo Y02: ಬಜೆಟ್ ಬೆಲೆಗೆ ಬೊಂಬಾಟ್ ಸ್ಟಾರ್ಟ್​ಫೋನ್ ಬಿಡುಗಡೆ ಮಾಡಿದ ವಿವೋ: ಎಷ್ಟು ರೂ.?
Vivo Y02
Follow us
TV9 Web
| Updated By: Vinay Bhat

Updated on: Dec 05, 2022 | 3:22 PM

ಪ್ರಸಿದ್ಧ ವಿವೋ ಕಂಪನಿ ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್​ಫೋನುಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಇತ್ತೀಚೆಗಷ್ಟೆ ವಿವೋ Y73t, ವಿವೋ Y52 5G ಸ್ಮಾರ್ಟ್‌ಫೋನ್​ಗಳನ್ನು ಬಿಡುಗಡೆ ಮಾಡಿದ್ದ ವಿವೋ ಕಂಪನಿ ಇದೀಗ ತನ್ನ ವೈ ಸರಣಿಯಲ್ಲೇ ಮತ್ತೊಂದು ಹೊಸ ವಿವೋ ವೈ02 (Vivo Y02) ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದು ಮೀಡಿಯಾಟೆಕ್‌ ಪ್ರೊಸೆಸರ್‌ ಅನ್ನು ನೀಡಲಾಗಿದೆ. ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್​ಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ, ಫೀಚರ್ಸ್​ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

  • ವಿವೋ Y02 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಭಾರತೀಯ ಮಾರುಕಟ್ಟೆಯಲ್ಲಿ ಕೇವಲ ಒಂದು ಮಾದರಿಯಲ್ಲಷ್ಟೆ ಅನಾವರಣ ಮಾಡಲಾಗಿದೆ. ಇದರ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯಕ್ಕೆ ಕೇವಲ 8,999 ರೂ. ನಿಗದಿ ಮಾಡಲಾಗಿದೆ.
  • ಈ ಫೋನ್ ವಿವೋ ಕಂಪನಿಯ ಅಧಿಕೃತ ವೆಬ್​ಸೈಟ್ ಮತ್ತು ರಿಟೇಲ್ ಸ್ಟೋರ್​ಗಳಲ್ಲಿ ಖರೀದಿಗೆ ಲಭ್ಯವಿದೆ. ಮುಂದಿನ ದಿನಗಳಲ್ಲಿ ಫ್ಲಿಪ್​ಕಾರ್ಟ್ ಅಥವಾ ಅಮೆಜಾನ್​ನಲ್ಲಿ ಮಾರಾಟ ಆಗುವ ನಿರೀಕ್ಷೆಯಿದೆ.
  • ಇದನ್ನೂ ಓದಿ
    Image
    Dual Sim: ಶಾಕಿಂಗ್: ಸದ್ಯದಲ್ಲೇ ಅಂತ್ಯವಾಗಲಿದೆ ಡ್ಯುಯೆಲ್ ಸಿಮ್ ಯುಗ: ಯಾಕೆ ಗೊತ್ತೇ?
    Image
    WhatsApp Update: ಬಳಕೆದಾರರು ಶಾಕ್: ಸದ್ದಿಲ್ಲದೆ ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಹೊಸ ಫೀಚರ್
    Image
    Fake iPhone: ಮಾರುಕಟ್ಟೆಯಲ್ಲಿ ಭರ್ಜರಿ ಸೇಲ್ ಆಗುತ್ತಿದೆ ಡುಪ್ಲಿಕೇಟ್ ಐಫೋನ್​ಗಳು: ಕಂಡುಹಿಡಿಯುವುದು ಹೇಗೆ?
    Image
    Tech Tips: ಫೋನ್ ಪೇಯಲ್ಲಿ ನಿಮ್ಮ ಪಾಸ್​ವರ್ಡ್ ಬದಲಾಯಿಸುವುದು ಹೇಗೆ?: ಇಲ್ಲಿದೆ ಮಾಹಿತಿ
  • ಈ ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ ಫುಲ್‌ ಹೆಚ್‌ಡಿ+ ಫುಲ್ ವೀವ್ ಡಿಸ್‌ಪ್ಲೇಯನ್ನು ಹೊಂದಿದೆ.
  • ಡಿಸ್​ಪ್ಲೇಯಲ್ಲಿ ವಿಶೇಷವಾಗಿ ಕಣ್ಣಿನ ಪ್ರೊಟೆಕ್ಷನ್ ಫೀಚರ್ ನೀಡಲಾಗಿದೆ. ವಾಟರ್​ಡ್ರಾಪ್ ಸ್ಟೈನ್​ನ ಕಟೌಟ್​ನಿಂದ ಆವೃತ್ತವಾಗಿದೆ.
  • ಬೆಲೆಗೆ ತಕ್ಕಂತೆ ಬಲಿಷ್ಠವಾದ ಮೀಡಿಯಾಟೆಕ್‌ ಹೀಲಿಯೊ P22 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಗೋ ಎಡಿಷನ್​ OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
  • ವಿವೋ Y52 5G (2022) ಸ್ಮಾರ್ಟ್‌ಫೋನ್‌ ಹಿಂಭಾಗ 8 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಅಂತೆಯೆ ಮುಂಭಾಗ ಸೆಲ್ಫೀಗಾಗಿ 5 ಮೆಗಾಫಿಕ್ಸೆಲ್ ಕ್ಯಾಮೆರಾ ಅಳವಡಿಸಲಾಗಿದೆ. ಇದು ಫೇಸ್ ಬ್ಯೂಟಿ, ಟೈಮ್ ಲಾಪ್ಸ್ ಆಯ್ಕೆಯನ್ನು ಹೊಂದಿದೆ.
  • ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, ಇದಕ್ಕೆ ತಕ್ಕಂತೆ 10W ಚಾರ್ಜಿಂಗ್‌ ಬೆಂಬಲ ಪಡೆದುಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ ಸಪೋರ್ಟ್ ಇದೆ.
  • ಉಳಿದಂತೆ ಹಾಟ್‌ಸ್ಪಾಟ್‌, ಡ್ಯುಯಲ್ ಸಿಮ್, ವೈ-ಫೈ 2.4, ಬ್ಲೂಟೂತ್ 5.0, ಜಿಪಿಎಸ್, ಎನ್‌ಎಫ್‌ಸಿ, ಯುಎಸ್‌ಬಿ-ಸಿ ಪೋರ್ಟ್ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆ ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು