Vivo Y15s: ಎರಡು ತಿಂಗಳ ಹಿಂದೆ ಬಿಡುಗಡೆ ಆದ ಈ ಆಕರ್ಷಕ ಸ್ಮಾರ್ಟ್​​ಫೋನ್ ಬೆಲೆಯಲ್ಲಿ ದಿಢೀರ್ ಇಳಿಕೆ

| Updated By: Vinay Bhat

Updated on: Apr 15, 2022 | 6:36 AM

Vivo Y15s New Price: ಎರಡು ತಿಂಗಳ ಹಿಂದೆಯಷ್ಟೇ ಭಾರತದಲ್ಲಿ ಬಿಡುಗಡೆ ಆಗಿ ಬಜೆಟ್ ಪ್ರಿಯರ ನಿದ್ದೆ ಕದ್ದಿದ್ದ ವಿವೋ ವೈ15ಎಸ್​ (Vivo Y15s) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಲಾಗಿದೆ.

Vivo Y15s: ಎರಡು ತಿಂಗಳ ಹಿಂದೆ ಬಿಡುಗಡೆ ಆದ ಈ ಆಕರ್ಷಕ ಸ್ಮಾರ್ಟ್​​ಫೋನ್ ಬೆಲೆಯಲ್ಲಿ ದಿಢೀರ್ ಇಳಿಕೆ
Vivo Y15s
Follow us on

ವಿವೋ (Vivo) ಮೊಬೈಲ್‌ ಕಂಪನಿ ಈ ವರ್ಷ ತಿಂಗಳಿಗೆ ಒಂದರಂತೆ ಆಕರ್ಷಕ ಸ್ಮಾರ್ಟ್​​ಫೋನ್ ಅನ್ನು ಬಿಡುಗಡೆ ಮಾಡುತ್ತಿದೆ. ಬಜೆಟ್ ಬೆಲೆಯಿಂದ ಹಿಡಿದು ಹೈ ರೇಂಜ್ ಮಾದರಿಯ ಫೋನ್​ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿರುವ ವಿವೋ ಇದೀಗ ತನ್ನ ಮೊಬೈಲ್ ಬೆಲೆಯಲ್ಲಿ ದಿಢೀರ್ ಇಳಿಕೆ ಮಾಡಿ ಗ್ರಾಹಕರಿಗೆ ಖಷಿ ನೀಡಿದೆ. ಹೌದು, ಎರಡು ತಿಂಗಳ ಹಿಂದೆಯಷ್ಟೇ ಭಾರತದಲ್ಲಿ ಬಿಡುಗಡೆ ಆಗಿ ಬಜೆಟ್ ಪ್ರಿಯರ ನಿದ್ದೆ ಕದ್ದಿದ್ದ ವಿವೋ ವೈ15ಎಸ್​ (Vivo Y15s) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಲಾಗಿದೆ. ಆಕರ್ಷಕ ಫೀಚರ್​​ಗಳಿಂದ ಗಮನ ಸೆಳೆದಿರುವ ಈ ಫೋನ್​ನಲ್ಲಿ ಅತ್ಯುತ್ತಮ ಕ್ಯಾಮೆರಾ, 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್​​ಫೋನಿನ (Smartphone) ಬೆಲೆಯಲ್ಲಿ ಎಷ್ಟು ರೂ. ಕಡಿಮೆ ಆಗಿದೆ. ನೂತನ ಬೆಲೆ ಏನು ಎಂಬುದನ್ನು ನೋಡೋಣ.

ಭಾರತದಲ್ಲಿ ವಿವೋ Y15s ಸ್ಮಾರ್ಟ್‌ಫೋನ್ ಬೆಲೆಯು 10,990 ರೂ. ಆಗಿದ್ದು, ಇದೀಗ ಇದರಲ್ಲಿ 500 ರೂ. ಗಳ ಇಳಿಕೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ 3GB RAM ಮತ್ತು 32GB ಸ್ಟೋರೇಜ್ ರೂಪಾಂತರದಲ್ಲಿ ಮಾತ್ರ ಲಭ್ಯವಿದೆ. ಮಿಸ್ಟಿಕ್ ಬ್ಲೂ ಮತ್ತು ವೇವ್ ಗ್ರೀನ್ ಬಣ್ಣಗಳಲ್ಲಿ ಖರೀದಿಸಬಹುದಾದ ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮೂಲಕ ನಿಮ್ಮದಾಗಿಸಬಹುದು. ಈಗ ಉಚಿತ ಡೆಲಿವರಿ ಆಯ್ಕೆ ಕೂಡ ಇದೆ.

ವಿವೋ Y15s ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ HD + IPS ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 3GB RAM ಜೊತೆಗೆ ಆಕ್ಟಾ ಕೋರ್ ಮೀಡಿಯಾಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 (Go ಆವೃತ್ತಿ) ನಲ್ಲಿ ಫನ್‌ಟಚ್‌ OS 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೆ ಈ ಫೋನ್ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮೆರಿ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಕೂಡ ನೀಡಲಾಗಿದೆ. ಇದು f/2.0 ಲೆನ್ಸ್‌ನೊಂದಿಗೆ ಬರುತ್ತದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.0, GPS/ A-GPS, FM ರೇಡಿಯೋ, ಮೈಕ್ರೋ-USB ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

iQoo Neo 6: ಇದಪ್ಪ ಫೋನ್ ಅಂದ್ರೆ: ಸ್ಟೈಲಿಶ್​ಗೆ ತಕ್ಕಂತೆ ಭರ್ಜರಿ ಫೀಚರ್ಸ್​ನ ಐಕ್ಯೂ ನಿಯೋ 6 5G ಬಿಡುಗಡೆ

Realme GT 2 Pro: ಇಂದಿನಿಂದ ರಿಯಲ್‌ ಮಿ GT 2 ಪ್ರೊ ಮಾರಾಟ ಆರಂಭ: ಖರೀದಿಗೆ ಕ್ಯೂ ನಿಲ್ಲೋದು ಗ್ಯಾರಂಟಿ+