50MP ಕ್ಯಾಮೆರಾ, 5000mAh ಬ್ಯಾಟರಿ: ಭಾರತದಲ್ಲಿ ವಿವೋ Y17s ಸ್ಮಾರ್ಟ್‌ಫೋನ್ ಬಿಡುಗಡೆ

Vivo Y17s Phone Launched in India: ವಿವೋ Y17s ಮಧ್ಯಮ ಶ್ರೇಣಿಯ ಮೊಬೈಲ್ ಆಗಿದೆ. ಇದನ್ನು ಗ್ಲಿಟರ್ ಪರ್ಪಲ್ ಮತ್ತು ಮಿಸ್ಟಿಕ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಪರಿಚಯಿಸಲಾಗಿದೆ. ಇದರ 4 GB RAM + 64 GB ಸ್ಟೋರೇಜ್ ಮಾದರಿಯ ಬೆಲೆ ಕೇವಲ 11,499 ರೂ. ಮತ್ತು 4 GB RAM + 128 GB ಸ್ಟೋರೇಜ್ ಮಾದರಿಯ ಬೆಲೆ 12,499 ರೂ. ಆಗಿದೆ.

50MP ಕ್ಯಾಮೆರಾ, 5000mAh ಬ್ಯಾಟರಿ: ಭಾರತದಲ್ಲಿ ವಿವೋ Y17s ಸ್ಮಾರ್ಟ್‌ಫೋನ್ ಬಿಡುಗಡೆ
Vivo Y17s
Follow us
|

Updated on: Oct 03, 2023 | 1:57 PM

ಚೀನಾದ ಪ್ರಸಿದ್ಧ ಫೋನ್ ತಯಾರಕ ಸಂಸ್ಥೆ ವಿವೋ ತನ್ನ ಹೊಸ ಬಜೆಟ್ ಸ್ಮಾರ್ಟ್‌ಫೋನ್ ವಿವೋ Y17s (Vivo Y17s) ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಕಳೆದ ತಿಂಗಳಷ್ಟೇ ಈ ಫೋನ್ ಸಿಂಗಾಪುರದಲ್ಲಿ ಅನಾವರಣಗೊಂಡಿತ್ತು. ಇದೀಗ ಭಾರತಕ್ಕೂ ಬಂದಿದೆ. ಇದೊಂದು ಬಜೆಟ್ ಸ್ಮಾರ್ಟ್​ಫೋನ್ ಆಗಿದ್ದರೂ ಆಕರ್ಷಕ ಡಿಸ್ ಪ್ಲೇ, ಬಲಿಷ್ಠ ಪ್ರೊಸೆಸರ್, ಬ್ಯಾಟರಿ ಆಯ್ಕೆಯನ್ನು ಹೊಂದಿದೆ. ವಿವೋ Y17s ಫೋನಿನ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದಲ್ಲಿ ವಿವೋ Y17s ಬೆಲೆ ಮತ್ತು ಲಭ್ಯತೆ

ವಿವೋ Y17s ಮಧ್ಯಮ ಶ್ರೇಣಿಯ ಮೊಬೈಲ್ ಆಗಿದೆ. ಇದನ್ನು ಗ್ಲಿಟರ್ ಪರ್ಪಲ್ ಮತ್ತು ಮಿಸ್ಟಿಕ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಪರಿಚಯಿಸಲಾಗಿದೆ. ಇದರ 4 GB RAM + 64 GB ಸ್ಟೋರೇಜ್ ಮಾದರಿಯ ಬೆಲೆ ಕೇವಲ 11,499 ರೂ. ಮತ್ತು 4 GB RAM + 128 GB ಸ್ಟೋರೇಜ್ ಮಾದರಿಯ ಬೆಲೆ 12,499 ರೂ. ಆಗಿದೆ. ವಿವೋ ಇ-ಸ್ಟೋರ್‌ ಸೇರಿದಂತೆ ಅಮೆಜಾನ್, ಫ್ಲಿಪ್​ಕಾರ್ಟ್​ನಿಂದ ಈ ಫೋನ್ ಖರೀದಿಸಬಹುದು.

ವಿವೋ Y17s ಫೀಚರ್ಸ್:

ವಿವೋ Y17s ಸ್ಮಾರ್ಟ್​ಫೋನ್ 6.56 ಇಂಚಿನ IPS LCD ಡಿಸ್ ಪ್ಲೇ ಹೊಂದಿದೆ. ಇದು 720 x 1612 ಪಿಕ್ಸೆಲ್‌ಗಳ HD+ ರೆಸಲ್ಯೂಶನ್ ನೀಡುತ್ತದೆ. ಡಿಸ್‌ಪ್ಲೇಯು 60Hz ರಿಫ್ರೆಶ್ ರೇಟ್ ಮತ್ತು 840 ನಿಟ್‌ಗಳ ಗರಿಷ್ಠ ಬ್ರೈಟ್​ನೆಸ್ ಹೊಂದಿದೆ. ಮೀಡಿಯಾಟೆಕ್ ಹಿಲಿಯೊ G85 ಪ್ರೊಸೆಸರ್ ಅನ್ನು ಅಳವಡಿಸಲಾಗಿದ್ದು, 4 GB LPDDR4x RAM ಮತ್ತು 128 GB ವರೆಗಿನ ಆಂತರಿಕ ಸಂಗ್ರಹಣೆಯನ್ನು ಹೊಂದಿದೆ. SD ಕಾರ್ಡ್ ಸಹಾಯದಿಂದ ಫೋನ್‌ನ ಸಂಗ್ರಹಣೆಯನ್ನು ಹೆಚ್ಚಿಸಬಹುದು.

ಇದನ್ನೂ ಓದಿ
Image
ದೇಶೀಯ ಸ್ಮಾರ್ಟ್​ಫೋನ್ ಲಾವಾ ಬ್ಲೇಜ್ ಪ್ರೊ 5G ಇಂದಿನಿಂದ ಖರೀದಿಗೆ ಲಭ್ಯ
Image
ಭಾರತದ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಅಕೌಂಟ್ ಬ್ಯಾನ್ ಮಾಡಿದ ವಾಟ್ಸ್​ಆ್ಯಪ್
Image
ಜಿಯೋ ಬುಕ್​ಗೆ ಸೆಡ್ಡು ಹೊಡೆಯಲು ಜೊತೆಯಾದ ಗೂಗಲ್-ಹೆಚ್​ಪಿ
Image
EMI ನಲ್ಲಿ ಮೊಬೈಲ್ ಖರೀದಿಸುವ ಮುನ್ನ 10 ಬಾರಿ ಯೋಚಿಸಿ: ಇದೊಂದು ಟ್ರ್ಯಾಪ್?

ಸ್ಯಾಮ್​ಸಂಗ್ ಗ್ಯಾಲಕ್ಸಿ S23 FE ಬಿಡುಗಡೆ ದಿನಾಂಕ ಪ್ರಕಟ: ನಿಟ್ಟುಸಿರು ಬಿಟ್ಟ ಫ್ಯಾನ್ಸ್

ವಿವೋ Y17s 50 ಮೆಗಾಪಿಕ್ಸೆಲ್ ಮುಖ್ಯ ಹಿಂಭಾಗದ ಕ್ಯಾಮೆರಾವನ್ನು ಹೊಂದಿದೆ. 2 ಮೆಗಾಪಿಕ್ಸೆಲ್ ಬೊಕೆ ಲೆನ್ಸ್ ಕೂಡ ಇದೆ. ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ನೀಡಲಾಗಿದೆ. ಆಂಡ್ರಾಯ್ಡ್ 13 OS ನಲ್ಲಿ ಕಾರ್ಯನಿರ್ವಹಿಸುತ್ತದೆ, ಇದು ಕಂಪನಿಯ Funtouch OS 13 ನಿಂದ ಕೂಡಿದೆ.

ಈ ಸ್ಮಾರ್ಟ್​ಫೋನ್ ಬೃಹತ್ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇತರ ವೈಶಿಷ್ಟ್ಯಗಲೆಂದರೆ, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, ಯುಎಸ್‌ಬಿ-ಸಿ ಪೋರ್ಟ್, 3.5 ಎಂಎಂ ಆಡಿಯೊ ಜ್ಯಾಕ್ ಹೊಂದಿದೆ. ಈ ಫೋನ್ 5G ಆಯ್ಕೆ ಪಡೆದುಕೊಂಡಿಲ್ಲ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?