ಭಾರತದಲ್ಲಿ ಬಹುನಿರೀಕ್ಷಿತ ವಿವೋ Y200 ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಕೇವಲ 21,999 ರೂ.

Vivo Y200 Launched in India: ವಿವೋ ಕಂಪನಿ ಇಂದು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ವಿವೋ Y200 ಫೋನ್ ಅನಾವರಣ ಮಾಡಿದೆ. ಇದು Y100 ನ ಮುಂದಿನ ಆವೃತ್ತಿಯಾಗಿದೆ. ಈ ಫೋನ್​ನಲ್ಲಿ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಉತ್ತಮ ಬ್ಯಾಟರಿ ಆಯ್ಕೆ ನೀಡಲಾಗಿದೆ. ವಿವೋ Y200 ಸ್ಮಾರ್ಟ್​ಫೋನಿನ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಬಹುನಿರೀಕ್ಷಿತ ವಿವೋ Y200 ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಕೇವಲ 21,999 ರೂ.
Vivo Y200
Follow us
Vinay Bhat
|

Updated on: Oct 23, 2023 | 2:54 PM

ವಿವೋ ಕಂಪನಿಯು ಈಗೀಗ ಜಾಗತಿಕ ಮಾರುಕಟ್ಟೆಯಲ್ಲಿ ಪ್ರತಿ ವಾರ ಒಂದೊಂದು ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಇಂದು ಚೀನಾದಲ್ಲಿ ವಿವೋ Y78t ಫೋನ್ ಲಾಂಚ್ ಆಗಿದೆ. ಇದರ ಬೆನ್ನಲ್ಲೇ ಇತ್ತ ಭಾರತದಲ್ಲಿ ಕಂಪನಿ ತನ್ನ Y-ಸರಣಿಯ ಅಡಿಯಲ್ಲಿ ಬಹುನಿರೀಕ್ಷಿತ ವಿವೋ Y200 (Vivo Y200) ಫೋನ್ ಅನಾವರಣ ಮಾಡಿದೆ. ಇದು Y100 ನ ಮುಂದಿನ ಆವೃತ್ತಿಯಾಗಿದೆ. ಈ ಫೋನ್​ನಲ್ಲಿ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಉತ್ತಮ ಬ್ಯಾಟರಿ ಆಯ್ಕೆ ನೀಡಲಾಗಿದೆ. ವಿವೋ Y200 ಸ್ಮಾರ್ಟ್​ಫೋನಿನ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ.

ಭಾರತದಲ್ಲಿ ವಿವೋ Y200 ಬೆಲೆ, ಮಾರಾಟ

ವಿವೋ Y200 ಸ್ಮಾರ್ಟ್​ಫೋನ್ ಸದ್ಯಕ್ಕೆ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಮಾತ್ರ ರಿಲೀಸ್ ಆಗಿದೆ. ಇದರ 8GB + 128GB ಸ್ಟೋರೇಜ್ ಮಾದರಿಗೆ 21,999 ರೂ. ನಿಗದಿ ಮಾಡಲಾಗಿದೆ. ಈ ಹ್ಯಾಂಡ್ಸೆಟ್ ಡೆಸರ್ಟ್ ಗೋಲ್ಡ್ ಮತ್ತು ಜಂಗಲ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇ ಕಾಮರ್ಸ್ ತಾಣವಾದ ಅಮೆಜಾನ್, ಫ್ಲಿಪ್‌ಕಾರ್ಟ್, ವಿವೋ ಇಂಡಿಯಾ ಇ-ಸ್ಟೋರ್ ಮತ್ತು ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಗೆ ಲಭ್ಯವಿರುತ್ತದೆ. ಕಂಪನಿಯು ಎಸ್‌ಬಿಐ, ಇಂಡಸ್‌ಇಂಡ್, ಐಡಿಎಫ್‌ಸಿ ಫಸ್ಟ್, ಯೆಸ್ ಬ್ಯಾಂಕ್ ಕಾರ್ಡ್ ಮೂಲಕ ಪಡೆದುಕೊಂಡರೆ 2,500 ರೂ. ವರೆಗೆ ಕ್ಯಾಶ್‌ಬ್ಯಾಕ್ ಆಫರ್ ನೀಡುತ್ತಿದೆ.

ವಿವೋದ ಈ ಸ್ಮಾರ್ಟ್​ಫೋನ್ ಬೆಲೆಯಲ್ಲಿ ಬರೋಬ್ಬರಿ 10,000 ರೂ. ಇಳಿಕೆ

ಇದನ್ನೂ ಓದಿ
Image
ಬಜೆಟ್ ಬೆಲೆ, ಬಲಿಷ್ಠ ಪ್ರೊಸೆಸರ್: ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿವೋ Y78t
Image
ಇಂದು ಬಿಡುಗಡೆ: ಭಾರತದಲ್ಲಿ ಧೂಳೆಬ್ಬಿಸಲು ಬರುತ್ತಿದೆ ವಿವೋ Y200 ಫೋನ್
Image
ಒಪ್ಪೋದ ನೂತನ ಮಡಚುವ ಫೋನ್ ಫೈಂಡ್ N3 ಫ್ಲಿಪ್ ಇಂದಿನಿಂದ ಖರೀದಿಗೆ ಲಭ್ಯ
Image
1 ವರ್ಷ ಅಮೆಜಾನ್ ಪ್ರೈಮ್ ಫ್ರೀ: ಜಿಯೋದಿಂದ ಹೊಸ ಬಂಪರ್ ಪ್ಲಾನ ಬಿಡುಗಡೆ

ವಿವೋ Y200 ವಿಶೇಷಣಗಳು

ಡಿಸ್ ಪ್ಲೇ: ವಿವೋ Y200 ಸ್ಮಾರ್ಟ್​ಫೋನ್ 2400 × 1080 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ 6.67-ಇಂಚಿನ FHD+ AMOLED ಡಿಸ್ಪ್ಲೇ, 120Hz ರಿಫ್ರೆಶ್ ದರ, 800 nits ಬ್ರೈಟ್​ನೆಸ್ ಅನ್ನು ಹೊಂದಿದೆ.

ಪ್ರೊಸೆಸರ್: ಈ ಫೋನ್ ಅಡ್ರಿನೊ GPU ಜೊತೆಗೆ ಕ್ವಾಲ್ಕಂ ಸ್ನಾಪ್​ಡ್ರಾಗನ್ 4 Gen 1 6nm ಪ್ರೊಸೆಸರ್​ನಿಂದ ಚಾಲಿತವಾಗಿದೆ.

RAM ಮತ್ತು ಸ್ಟೋರೇಜ್: ಈ ಚಿಪ್‌ಸೆಟ್ ಅನ್ನು 8GB LPDDR4x RAM ಮತ್ತು 128GB UFS 2.2 ಸ್ಟೋರೇಜ್‌ನೊಂದಿಗೆ ಜೋಡಿಸಲಾಗಿದೆ. ಇದನ್ನು ಮೈಕ್ರೋ SD ಕಾರ್ಡ್ ಮೂಲಕ ಮತ್ತಷ್ಟು ವಿಸ್ತರಿಸಬಹುದಾಗಿದೆ.

ಓಎಸ್: ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ ಓಎಸ್ 13 ಮೂಲಕ ರನ್ ಆಗುತ್ತದೆ.

ಕ್ಯಾಮೆರಾಗಳು: f/1.79 ದ್ಯುತಿರಂಧ್ರದೊಂದಿಗೆ 64MP ಪ್ರಾಥಮಿಕ ಕ್ಯಾಮೆರಾ ಮತ್ತು f/2.4 ದ್ಯುತಿರಂಧ್ರದೊಂದಿಗೆ 2MP ಕ್ಯಾಮೆರಾ ಮತ್ತು ಮುಂಭಾಗ f/2.0 ದ್ಯುತಿರಂಧ್ರದೊಂದಿಗೆ 16MP ಸೆಲ್ಫಿ ಶೂಟರ್ ಇದೆ.

ಬ್ಯಾಟರಿ-ಸಂಪರ್ಕ: 44W ಫಾಸ್ಟ್ ಚಾರ್ಜಿಂಗ್ ಜೊತೆಗೆ 4800mAh ಬ್ಯಾಟರಿ ಇದೆ. ಸಂಪರ್ಕ ಆಯ್ಕೆಯಲ್ಲಿ 5G, ಡ್ಯುಯಲ್ 4G VoLTE, Wi-Fi 802.11 ac, ಬ್ಲೂಟೂತ್ 5.1, GPS, ಮತ್ತು USB ಟೈಪ್-C ಪೋರ್ಟ್ ಇದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ