Vivo Y20T: 5000mAh ಬ್ಯಾಟರಿ, ಸ್ನ್ಯಾಪ್‌ಡ್ರಾಗನ್ ಪ್ರೊಸೆಸರ್: ಬಜೆಟ್ ಬೆಲೆಗೆ ವಿವೋ Y20T ಸ್ಮಾರ್ಟ್‌ಫೋನ್ ಬಿಡುಗಡೆ
Vivo Y20T Launched: ವಿವೋ Y20T ಸ್ಮಾರ್ಟ್‌ಫೋನ್ ಭಾರತದಲ್ಲಿ ಸದ್ಯಕ್ಕೆ ಕೇವಲ ಒಂದು ಆಯ್ಕೆಯಲ್ಲಷ್ಟೆ ಅನಾವರಣಗೊಂಡಿದೆ. ಇದರ 6GB RAM ಮತ್ತು 64GB ಸ್ಟೋರೇಜ್ ಆಯ್ಕೆಯ ಬೆಲೆಯು ಕೇವಲ 15,490 ರೂ. ಆಗಿದೆ.
ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸುತ್ತಿರುವ ವಿವೋ (VIVO) ಸಂಸ್ಥೆಯು ಇದೀಗ ಹೊಸದಾಗಿ ವಿವೋ ವೈ20ಟಿ (Vivo Y20T) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಟ್ರಿಪಲ್ ಕ್ಯಾಮೆರಾ ರಚನೆಯನ್ನು, ಸ್ನ್ಯಾಪ್‌ಡ್ರಾಗನ್ ಪ್ರೊಸೆಸರ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಸೇರಿದಂತೆ ಅನೇಕ ಆಕರ್ಷಕ ಫೀವರ್ಗಳನ್ನು ಈ ಸ್ಮಾರ್ಟ್‌ಫೋನ್ (Smartphone) ಒಳಗೊಂಡಿದೆ. ಜೊತೆಗೆ ಭಾರತದಲ್ಲಿ ಇದು ಅತಿ ಕಡಿಮೆ ಬೆಲೆಗೆ ಲಭ್ಯವಾಗುತ್ತಿದೆ.
ವಿವೋ Y20T ಸ್ಮಾರ್ಟ್‌ಫೋನ್ ಭಾರತದಲ್ಲಿ ಸದ್ಯಕ್ಕೆ ಕೇವಲ ಒಂದು ಆಯ್ಕೆಯಲ್ಲಷ್ಟೆ ಅನಾವರಣಗೊಂಡಿದೆ. ಇದರ 6GB RAM ಮತ್ತು 64GB ಸ್ಟೋರೇಜ್ ಆಯ್ಕೆಯ ಬೆಲೆಯು ಕೇವಲ 15,490 ರೂ. ಆಗಿದೆ. ಈ ಫೋನ್ ಅಬ್ಸಿಡಿಯನ್ ಕಪ್ಪು ಮತ್ತು ಪ್ಯೂರಿಸ್ಟ್ ನೀಲಿ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ವಿವೋ ಇಂಡಿಯಾ ಇ-ಸ್ಟೋರ್, ಅಮೆಜಾನ್, ಫ್ಲಿಪ್‌ಕಾರ್ಟ್, ಪೇಟಿಎಂ, ಟಾಟಾ ಕ್ಲಿಕ್, ಬಜಾಜ್ ಫಿನ್‌ಸರ್ವ್ ಇಎಂಐ ಸ್ಟೋರ್ ಸೇರಿದಂತೆ ಪ್ರಮುಖ ರಿಟೇಲ್ ಸ್ಟೋರ್‌ಗಳ ಮೂಲಕ ಈ ಹೊಸ ಫೋನ್ ಮಾರಾಟ ಕಾಣುತ್ತಿದೆ.
ವಿವೋ Y20T ಸ್ಮಾರ್ಟ್‌ಫೋನ್ 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, 6.51-ಇಂಚಿನ ಪೂರ್ಣ-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ವಿಶೇಷವಾಗಿ ಸ್ನ್ಯಾಪ್‌ಡ್ರಾಗನ್ 662 SoC ಪ್ರೊಸೆಸರ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಅನ್ನು ಪಡೆದಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ f/2.4 ಅಪರ್ಚರ್ ನೊಂದಿಗೆ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಹಾಗೂ ತೃತೀಯ ಕ್ಯಾಮೆರಾವು ಸಹ 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, 4 ಜಿ, ಬ್ಲೂಟೂತ್ ವಿ 5 ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಸೇರಿವೆ.
Moto E40: ಭಾರತದಲ್ಲಿ ಬಿಡುಗಡೆ ಆಯ್ತು ಮೋಟೋ E40 ಸ್ಮಾರ್ಟ್‌ಫೋನ್: ಇದರ ಬೆಲೆ ಕೇವಲ 9,499 ರೂ.
ಒಂದು ಸಿಮ್ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು?: ಈ ವಿಚಾರ ನಿಮಗೆ ತಿಳಿದಿರಲಿ
(Vivo Y20T with Qualcomm Snapdragon 662 SoC 5000mAh Battery launched in India)