AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivo Y21T: 50MP ಕ್ಯಾಮೆರಾ, 5000mAh ಬ್ಯಾಟರಿ: ವಿವೋದಿಂದ ಭಾರತದಲ್ಲಿ ಕಡಿಮೆ ಬೆಲೆಯ ಬೆಸ್ಟ್​ ಫೋನ್ ಬಿಡುಗಡೆ

ಭಾರತದಲ್ಲಿ ರಿಲೀಸ್ ಆಗಿರುವ ವಿವೋ ವೈ21ಟಿ ಸ್ಮಾರ್ಟ್​ಫೋನ್​ನಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದುಕೊಂಡಿದೆ. 5,000mAh ಬ್ಯಾಟರಿಯನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Vivo Y21T: 50MP ಕ್ಯಾಮೆರಾ, 5000mAh ಬ್ಯಾಟರಿ: ವಿವೋದಿಂದ ಭಾರತದಲ್ಲಿ ಕಡಿಮೆ ಬೆಲೆಯ ಬೆಸ್ಟ್​ ಫೋನ್ ಬಿಡುಗಡೆ
Vivo Y21T
TV9 Web
| Updated By: Vinay Bhat|

Updated on: Jan 04, 2022 | 3:39 PM

Share

ಪ್ರಸಿದ್ಧ ವಿವೋ (Vivo) ಕಂಪನಿ ಈ ವರ್ಷ ಸಾಕಷ್ಟು ಸ್ಮಾರ್ಟ್​ಫೋನ್​ಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಈಗಾಗಲೇ ಕೆಲವು ಫೋನ್​ಗಳ ಬಿಡುಗಡೆ ದಿನಾಂಕ ಕೂಡ ನಿಗದಿ ಮಾಡಲಾಗಿದೆ. ಹೀಗಿರುವಾದ ಇದೀಗ ತನ್ನ ಹೊಸ ವಿವೋ ವೈ21ಟಿ (Vivo Y21T) ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇದು ವಿವೋ ಕಂಪನಿಯ ಈ ವರ್ಷದ ಮೊದಲ ಸ್ಮಾರ್ಟ್​ಫೋನ್ (Smartphone) ಆಗಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿರುವ ಈ ಫೋನ್ ಇತ್ತೀಚೆಗಷ್ಟೆ ಇಂಡೋನೇಷ್ಯಾದಲ್ಲಿ ರಿಲೀಸ್ ಆಗಿತ್ತು. ಇದೀಗ ಭಾರತದಲ್ಲಿ ರಿಲೀಸ್ ಆಗಿರುವ ಈ ಸ್ಮಾರ್ಟ್​ಫೋನ್​ನಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದುಕೊಂಡಿದೆ. 5,000mAh ಬ್ಯಾಟರಿಯನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರ ಜೊತೆಗೆ ಇನ್ನೂ ಅನೇಕ ಆಕರ್ಷಕ ಫೀಚರ್​ಗಳಿಂದ ಈ ಸ್ಮಾರ್ಟ್​ಫೋನ್ ಕೂಡಿದೆ.

ವಿವೋ Y21T ಸ್ಮಾರ್ಟ್‌ಫೋನ್‌ 1080×2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಒಳಗೊಂಡ 6.58 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಅಂಡ್ರಾಯ್ಡ್‌ 11 ನಲ್ಲಿ ಫನ್‌ಟಚ್‌ OS 12 ಟಾಪ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ f/1.8 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ f/2.4 ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, FM ರೇಡಿಯೋ, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದರ 6GB RAM ಮತ್ತು 128GB ಸ್ಟೋರೇಜ್ 16,490 ರೂ. ನಿಗಧಿಪಡಿಸಲಾಗಿದೆ. ಈ ಫೋನ್‌ ಮಿಡ್ನೈಟ್ ಬ್ಲೂ ಮತ್ತು ಪರ್ಲ್ ವೈಟ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇದನ್ನು ವಿವೋ ಇಂಡಿಯಾ ಇ-ಸ್ಟೋರ್ ಮತ್ತು ಚಿಲ್ಲರೆ ಚಾನೆಲ್‌ಗಳ ಮೂಲಕ ಸ್ಮಾರ್ಟ್‌ಫೋನ್ ಖರೀದಿಸಲು ಲಭ್ಯವಿದೆ.

Samsung Galaxy S21 FE 5G: ಸ್ಯಾಮ್​ಸಂಗ್ ಕಂಪನಿಯ ಬಹುನಿರೀಕ್ಷಿತ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಬಿಡುಗಡೆ: ಬೆಲೆ, ವಿಶೇಷತೆ ಏನು?

Blackberry Shutdown: ಇಂದಿನಿಂದ ಕಾರ್ಯನಿರ್ವಹಿಸಲ್ಲ ಈ ಫೋನ್: ಕರೆ, ಎಸ್​ಎಮ್​ಎಸ್​ ಎಲ್ಲವೂ ಬಂದ್

(Vivo Y21T Price Vivo has expanded its mid-range Y-Series in India with the new Vivo Y21T)

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್