Vivo Y21T: 5000mAh ಬ್ಯಾಟರಿಗೆ ಫಾಸ್ಟ್ ಚಾರ್ಜರ್: ಕಡಿಮೆ ಬೆಲೆಯ ವಿವೋ Y21T ಸ್ಮಾರ್ಟ್‌ಫೋನ್‌ ಬಿಡುಗಡೆ

ವಿವೋ Y21T ಸ್ಮಾರ್ಟ್​ಫೋನ್​ನಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದುಕೊಂಡಿದೆ. 5,000mAh ಬ್ಯಾಟರಿಯನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರ ಜೊತೆಗೆ ಇನ್ನೂ ಅನೇಕ ಆಕರ್ಷಕ ಫೀಚರ್​ಗಳಿಂದ ಕೂಡಿದೆ.

Vivo Y21T: 5000mAh ಬ್ಯಾಟರಿಗೆ ಫಾಸ್ಟ್ ಚಾರ್ಜರ್: ಕಡಿಮೆ ಬೆಲೆಯ ವಿವೋ Y21T ಸ್ಮಾರ್ಟ್‌ಫೋನ್‌ ಬಿಡುಗಡೆ
Vivo Y21T
Follow us
TV9 Web
| Updated By: Vinay Bhat

Updated on: Jan 02, 2022 | 2:23 PM

ಪ್ರಸಿದ್ಧ ವಿವೋ (Vivo) ಕಂಪನಿ ಈ ವರ್ಷ ಸಾಕಷ್ಟು ಸ್ಮಾರ್ಟ್​ಫೋನ್​ಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಈಗಾಗಲೇ ಕೆಲವು ಫೋನ್​ಗಳ ಬಿಡುಗಡೆ ದಿನಾಂಕ ಕೂಡ ನಿಗದಿ ಮಾಡಲಾಗಿದೆ. ಹೀಗಿರುವಾದ ಇದೀಗ ತನ್ನ ಹೊಸ ವಿವೋ ವೈ21ಟಿ (Vivo Y21T) ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇದು ವಿವೋ ಕಂಪನಿಯ ಈ ವರ್ಷದ ಮೊದಲ ಸ್ಮಾರ್ಟ್​ಫೋನ್ (Smartphone) ಆಗಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿರುವ ಈ ಫೋನ್ ಸದ್ಯಕ್ಕೆ ಇಂಡೋನೇಷ್ಯಾದಲ್ಲಿ ರಿಲೀಸ್ ಆಗಿದ್ದು, ಭಾರತಕ್ಕೂ ಕಾಲಿಡಲಿದೆಯಂತೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದುಕೊಂಡಿದೆ. 5,000mAh ಬ್ಯಾಟರಿಯನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರ ಜೊತೆಗೆ ಇನ್ನೂ ಅನೇಕ ಆಕರ್ಷಕ ಫೀಚರ್​ಗಳಿಂದ ಈ ಸ್ಮಾರ್ಟ್​ಫೋನ್ ಕೂಡಿದೆ.

ವಿವೋ Y21T ಸ್ಮಾರ್ಟ್‌ಫೋನ್‌ 720×1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಅಂಡ್ರಾಯ್ಡ್‌ 11 ನಲ್ಲಿ ಫನ್‌ಟಚ್‌ OS 12 ಟಾಪ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ f/1.8 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ f/2.4 ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, FM ರೇಡಿಯೋ, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕಾಗಿ IDR 3,099,000 ಅಂದರೆ ಭಾರತದಲ್ಲಿ ಇದರ ಬೆಲೆ ಸುಮಾರು 16,200 ರೂ. ಎನ್ನಬಹುದು.

ROG Phone 5 Ultimate: ರಿಲೀಸ್ ಆದ 9 ತಿಂಗಳ ಬಳಿಕ ಈ ಫೋನ್ ಖರೀದಿಸಲು ಕ್ಯೂ: 5 ದಿನಗಳಲ್ಲಿ ಸೋಲ್ಡ್ ಔಟ್

(Vivo Y21T Qualcomm Snapdragon 680 SoC and 18W fast charging support has been launched)