Vivo Y32: ಒಮ್ಮೆ ಚಾರ್ಜ್ ಮಾಡಿದ್ರೆ 27 ದಿನಗಳ ಸ್ಟ್ಯಾಂಡ್‌ಬೈ ಟೈಂ: ವಿವೋ ರಿಲೀಸ್ ಮಾಡಿದೆ ಹೊಸ ಸ್ಮಾರ್ಟ್​ಫೋನ್

ವಿವೋ Y32 ಸ್ಮಾರ್ಟ್‌ಫೋನ್‌ ವಿಶ್ವದ ಮೊಟ್ಟ ಮೊದಲ ಕ್ವಾಲ್‌ಕಾಮ್‌ನ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿರುವುದು ವಿಶೇಷ. ಇದರ ಜೊತೆಗೆ ಸಿಂಗಲ್‌ ಚಾರ್ಜ್‌ನಲ್ಲಿ 27 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ ಎಂದು ಕಂಪನಿ ಹೇಳಿದೆ.

Vivo Y32: ಒಮ್ಮೆ ಚಾರ್ಜ್ ಮಾಡಿದ್ರೆ 27 ದಿನಗಳ ಸ್ಟ್ಯಾಂಡ್‌ಬೈ ಟೈಂ: ವಿವೋ ರಿಲೀಸ್ ಮಾಡಿದೆ ಹೊಸ ಸ್ಮಾರ್ಟ್​ಫೋನ್
Vivo Y32
Follow us
TV9 Web
| Updated By: Vinay Bhat

Updated on: Dec 19, 2021 | 12:43 PM

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಹಲವು ಮಾದರಿಯ ಫೋನ್​ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿರುವ ಪ್ರಸಿದ್ಧ ವಿವೋ (VIVO) ಸಂಸ್ಥೆ ಇದೀಗ ಹೊಸ ವಿವೋ ವೈ32 (Vivo Y32) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ವಾಟರ್‌ ಡ್ರಾಪ್‌ ಶೈಲಿಯ ಡಿಸ್‌ಪ್ಲೇ ನಾಚ್‌ ಜೊತೆಗೆ ವಿಶ್ವದ ಮೊಟ್ಟ ಮೊದಲ ಕ್ವಾಲ್‌ಕಾಮ್‌ನ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ (Snapdragon 680) ಬಲವನ್ನು ಪಡೆದುಕೊಂಡಿರುವುದು ವಿಶೇಷ. ಇದರ ಜೊತೆಗೆ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌, 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಸದ್ಯಕ್ಕೆ ಈ ಸ್ಮಾರ್ಟ್​ಫೋನ್ ಚೀನಾದಲ್ಲಿ ಬಿಡುಗಡೆ ಆಗಿದ್ದು, ಮುಂದಿನ ವರ್ಷ ಭಾರತಕ್ಕೂ ಇದು ಕಾಲಿಡಲಿದೆ.

ವಿವೋ Y32 ಸ್ಮಾರ್ಟ್‌ಫೋನ್‌ 720×1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಬಲಿಷ್ಠವಾದ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಅಳವಡಿಸಲಾಗಿದ್ದು, ಆಂಡ್ರಾಯ್ಡ್ 11 ನಲ್ಲಿ OriginOS 1.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಇನ್ನು ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ f/2.4 ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ 8-ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ವಿವೋ Y32 ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಸಿಂಗಲ್‌ ಚಾರ್ಜ್‌ನಲ್ಲಿ 27 ದಿನಗಳ ಸ್ಟ್ಯಾಂಡ್‌ಬೈ ಟೈಂ ಅಥವಾ 18 ಗಂಟೆಗಳ ಟಾಕ್‌ಟೈಮ್ ಅನ್ನು ನೀಡಲಿದೆ ಎಂದು ಕಂಪನಿ ಹೇಳಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, Wi-Fi, ಬ್ಲೂಟೂತ್ v5.0, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿದಂತೆ ಇತ್ತೀಚೆಗಿನ ಹೊಸ ಆಯ್ಕೆಗಳಿವೆ. ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕಾಗಿ CNY 1,399, ಅಂದರೆ ಭಾರತದಲ್ಲಿ ಇದರ ಬೆಲೆ ಸುಮಾರು 16,700 ರೂ. ಎನ್ನಬಹುದು.

BSNL: ಜಿಯೋ ಏರ್ಟೆಲ್ ಯಾವುದರಲ್ಲೂ ಇಲ್ಲ: ಬಿಎಸ್​ಎನ್​ಎಲ್​ನಿಂದ ಹೊಸ ಬಂಪರ್ ಪ್ಲಾನ್ ಘೋಷಣೆ

(Vivo Y32 27 days of standby time and world first Snapdragon 680 powered Vivo Y32 Smartphone has launched)