AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivo Y33s: ಭಾರತದಲ್ಲಿ ನಾಳೆ ಬಿಡುಗಡೆ ಆಗಲಿದೆ ಆಕರ್ಷಕ ಫೀಚರ್​ನ ವಿವೋ ಕಂಪೆನಿಯ ಈ ಬಜೆಟ್ ಸ್ಮಾರ್ಟ್​ಫೋನ್

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ವಿವೋ Y33s ಸ್ಮಾರ್ಟ್‌ಫೋನ್ ಕಾಣಿಸಿಕೊಂಡಿದೆ. ಕೇವಲ ಒಂದು ಮಾದರಿಯಲ್ಲಷ್ಟೆ ಸದ್ಯಕ್ಕೆ ಈ ಫೋನ್ ಖರೀದಿಗೆ ಸಿಗಲಿದೆಯಂತೆ.

Vivo Y33s: ಭಾರತದಲ್ಲಿ ನಾಳೆ ಬಿಡುಗಡೆ ಆಗಲಿದೆ ಆಕರ್ಷಕ ಫೀಚರ್​ನ ವಿವೋ ಕಂಪೆನಿಯ ಈ ಬಜೆಟ್ ಸ್ಮಾರ್ಟ್​ಫೋನ್
Vivo Y33s
TV9 Web
| Edited By: |

Updated on: Aug 22, 2021 | 11:42 AM

Share

ಚೀನಾ ಮೂಲದ ವಿವೋ (Vivo) ಕಂಪನಿಯು ಎರಡು ದಿನಗಳ ಹಿಂದೆಯಷ್ಟೆ ವಿವೋ Y21 ಸ್ಮಾರ್ಟ್​ಫೋನನ್ನು ಲಾಂಚ್ ಮಾಡಿತ್ತು. ಸದ್ಯ ಇದರ ಬೆನ್ನಲ್ಲೆ ಸೋಮವಾರ ಮತ್ತೊಂದು ಬಜೆಟ್‌ ಬೆಲೆಯ ವಿವೋ Y33s ಹೆಸರಿನ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಲು ಸಜ್ಜಾಗಿದೆ. ಆಕರ್ಷಕ ಫೀಚರ್​ಗಳುಳ್ಳ ವಿವೋ Y33s ಸ್ಮಾರ್ಟ್‌ಫೋನ್ ಇದೇ ಆಗಸ್ಟ್ 23 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಲಿದೆ.

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ವಿವೋ Y33s ಸ್ಮಾರ್ಟ್‌ಫೋನ್ ಕಾಣಿಸಿಕೊಂಡಿದೆ. ಕೇವಲ ಒಂದು ಮಾದರಿಯಲ್ಲಷ್ಟೆ ಸದ್ಯಕ್ಕೆ ಈ ಫೋನ್ ಖರೀದಿಗೆ ಸಿಗಲಿದೆಯಂತೆ. 8GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯ ಹೊಂದಿರುವ ಫೋನಿನ ಬೆಲೆ 17,990 ರೂ. ಎಂದು ಹೇಳಲಾಗಿದೆ. ಇದು ಮಿಡ್ ಡೇ ಡ್ರೀಮ್ ಕಲರ್ ಆಯ್ಕೆಗಳಲ್ಲಿ ಬಿಡುಗಡೆ ಆಗಲಿದೆ.

ವಿವೋ Y33s ಸ್ಮಾರ್ಟ್‌ಫೋನ್ 2,408×1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್‌ ಅನ್ನು ಅಳವಡಿಸಲಾಗಿದ್ದು, ಇದಕ್ಕೆ ಬೆಂಬಲವಾಗಿ ಫನ್‌ಟಚ್ ಆಂಡ್ರಾಯ್ಡ್ 11 ಓಎಸ್‌ ಸಪೋರ್ಟ್‌ ಇದೆ.

ಈ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್ ಇರಲಿದೆ. ಸೆಕೆಂಡರಿ ಕ್ಯಾಮೆರಾವು 2 ಎಂಪಿ ಸೆನ್ಸಾರ್‌ನಲ್ಲಿರಲಿದ್ದು, ತೃತೀಯ ಕ್ಯಾಮೆರಾವು 2 ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದರೊಂದಿಗೆ 16 ಎಂಪಿಯ ಸೆಲ್ಫಿ ಕ್ಯಾಮೆರಾ ಒಳಗೊಂಡಿರುತ್ತದೆ.

ಇನ್ನೂ 5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿರಲಿದ್ದು, ಅದಕ್ಕೆ ಪೂರಕವಾಗಿ 18W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಇರಲಿದೆ. ಜೊತೆಗೆ 4G LTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ v5 ಮತ್ತು USB OTG ಸೇರಿದಂತೆ ಇತ್ತೀಚೆಗಿನ ಪ್ರಮುಖ ಆಯ್ಕೆ ನೀಡಲಾಗಿದೆ.

7 ಸಾವಿರಕ್ಕಿಂತ ಕಡಿಮೆ ಬೆಲೆಗೆ 6000mAh ಬ್ಯಾಟರಿ, 13mp ಕ್ಯಾಮೆರಾ ಸ್ಮಾರ್ಟ್​ಫೋನ್

Jio Offer: ಜಿಯೋ ಸೂಪರ್ ಆಫರ್: ಫ್ರೀ ಹಾಟ್​ಸ್ಟಾರ್ ಜೊತೆಗೆ 1 ವರ್ಷದವರೆಗೆ ಪ್ರತಿದಿನ 2GB ಡೇಟಾ

(Vivo Y33s launch in India is tipped for August 23)

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್