ಚೀನಾ ಮೂಲದ ವಿವೋ (Vivo) ಕಂಪನಿಯು ಮೂರು ದಿನಗಳ ಹಿಂದೆಯಷ್ಟೆ ವಿವೋ Y21 ಸ್ಮಾರ್ಟ್ಫೋನನ್ನು ಲಾಂಚ್ ಮಾಡಿತ್ತು. ಸದ್ಯ ಇದರ ಬೆನ್ನಲ್ಲೆ ಸೋಮವಾರ ಮತ್ತೊಂದು ಬಜೆಟ್ ಬೆಲೆಯ ವಿವೋ ವೈY33ಎಸ್ (Vivo Y33s) ಹೆಸರಿನ ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. 50 ಮೆಗಾಫಿಕ್ಸೆಲ್ ಕ್ಯಾಮೆರಾ, ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಆಕರ್ಷಕ ಫೀಚರ್ಗಳುಳ್ಳ ವಿವೋ Y33s ಸ್ಮಾರ್ಟ್‌ಫೋನ್ ಇಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ.
ಕೇವಲ ಒಂದು ಮಾದರಿಯಲ್ಲಷ್ಟೆ ಸದ್ಯಕ್ಕೆ ಈ ಫೋನ್ ರಿಲೀಸ್ ಆಗಿದ್ದು, 8GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯ ಹೊಂದಿರುವ ಫೋನಿನ ಬೆಲೆ 17,990 ರೂ. ಆಗಿದೆ. ಪ್ರಸಿದ್ಧ ಇ ಕಾಮರ್ಸ್ ತಾನವಾದ ಅಮೆಜಾನ್, ಫ್ಲಿಪ್ಕಾರ್ಟ್, ಪೇಟಿಎಮ್ ಸೇರಿದಂತೆ ವಿವೋ ಇಂಡಿಯಾ.ಕಾಮ್ನಲ್ಲಿ ಖರೀದಿಗೆ ಸಿಗುತ್ತದೆ. ಹೆಚ್ಡಿಎಫ್ಸಿ ಮತ್ತು ಐಸಿಐಸಿಐ ಬ್ಯಾಂಕುದಾರರಿಗೆ 1500 ರೂ. ಡಿಸ್ಕೌಂಟ್ನಲ್ಲಿ ವಿವೋ Y33s ದೊರೆಯುತ್ತದೆ.
ಏನು ವಿಶೇಷತೆ?:
ವಿವೋ Y33s ಸ್ಮಾರ್ಟ್‌ಫೋನ್ 2,408×1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್ ಅನ್ನು ಅಳವಡಿಸಲಾಗಿದ್ದು, ಇದಕ್ಕೆ ಬೆಂಬಲವಾಗಿ ಫನ್‌ಟಚ್ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಇದೆ.
ಈ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್ ಇರಲಿದೆ. ಸೆಕೆಂಡರಿ ಕ್ಯಾಮೆರಾವು 2 ಎಂಪಿ ಸೆನ್ಸಾರ್‌ನಲ್ಲಿರಲಿದ್ದು, ತೃತೀಯ ಕ್ಯಾಮೆರಾವು 2 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ 16 ಮೆಗಾಫಿಕ್ಸೆಲ್ನ ಸೆಲ್ಫೀ ಕ್ಯಾಮೆರಾ ಒಳಗೊಂಡಿರುತ್ತದೆ.
ಇನ್ನೂ 5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿರಲಿದ್ದು, ಅದಕ್ಕೆ ಪೂರಕವಾಗಿ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಇರಲಿದೆ. ಜೊತೆಗೆ 4G LTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ v5 ಮತ್ತು USB OTG ಸೇರಿದಂತೆ ಇತ್ತೀಚೆಗಿನ ಪ್ರಮುಖ ಆಯ್ಕೆ ನೀಡಲಾಗಿದೆ.
Realme C21Y: 5000mAh ಬ್ಯಾಟರಿ, ತ್ರಿವಳಿ ಕ್ಯಾಮೆರಾ: ಕೇವಲ 8,999 ರೂ. ಗೆ ರಿಯಲ್ ಮಿಯಿಂದ ಹೊಸ ಸ್ಮಾರ್ಟ್‌ಫೋನ್
ಭಾರತದಲ್ಲಿ ರಿಲೀಸ್ ಆಗಿದ್ದರೂ ಖರೀದಿಗೆ ಸಿಗುತ್ತಿಲ್ಲ ಮೋಟೋ ಎಡ್ಜ್ 20 ಸರಣಿ: ಕಾರಣ ತಿಳಿಸಿದ ಕಂಪೆನಿ
(Vivo Y33s with 50-megapixel triple camera Faast Charging launched in India just Rs 17990)