ಪ್ರಸಿದ್ಧ ವಿವೋ (Vivo) ಕಂಪನಿ ಭಾರತೀಯ ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್ಫೋನನ್ನು ಬಿಡುಗಡೆ ಮಾಡುತ್ತಿದೆ. ಮೊನ್ನೆಯಷ್ಟೆ ಬಜೆಟ್ ಬೆಲೆಯ ವಿವೋ ವೈ21ಟಿ (Vivo Y21T) ಫೋನ್ ಮತ್ತು ವಿವೋ ವಿ23 5ಜಿ (Vivo V23 5G) ಹಾಗೂ ವಿವೋ ವಿ23 ಪ್ರೊ 5ಜಿ (Vivo V23 Pro 5G) ಫೋನನ್ನು ಅನಾವರಣ ಮಾಡಿತ್ತು. ಇದೀಗ ದೇಶದಲ್ಲಿ ಮತ್ತೊಂದು ಹೊಸ ವಿವೋ ವೈ33ಟಿ (Vivo Y33T) ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಕಳೆದ 10 ದಿನಗಳಲ್ಲಿ ವಿವೋ ಕಂಪನಿ ಭಾರತದಲ್ಲಿ ಬಿಡುಗಡೆ ಮಾಡಿರುವ 4ನೇ ಫೋನ್ ಇದಾಗಿದೆ. ವಿವೋ Y33T ಸ್ಮಾರ್ಟ್‌ಫೋನ್ ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ ನಾಚ್ ಅನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್, ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದರ ಬೆಲೆ 20,000 ರೂ. ಗಿಂತ ಕಡಿಮೆ ಇದೆ.
ಹೌದು, ಭಾರತದಲ್ಲಿ ವಿವೋ Y33T ಸ್ಮಾರ್ಟ್‌ಫೋನ್ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಅನಾವರಣಗೊಂಡಿದೆ. 8GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 18,990 ರೂ. ನಿಗದಿ ಮಾಡಲಾಗಿದೆ. ಈಗಾಗಲೇ ಈ ಫೋನ್ ಅಮೆಜಾನ್, ಫ್ಲಿಪ್‌ಕಾರ್ಟ್, ವಿವೋ ಇಂಡಿಯಾ ಇ ಸ್ಟೋರ್, ಪೇಟಿಎಂ ಮತ್ತು ವಿವಿಧ ಆಫ್‌ಲೈನ್ ರಿಟೇಲ್ ಸ್ಟೋರ್‌ಗಳ ಮೂಲಕ ಖರೀದಿಗೆ ಲಭ್ಯವಿದೆ.
ವಿವೋ Y33T ಸ್ಮಾರ್ಟ್‌ಫೋನ್ 1,080×2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿರುವ ಇನ್-ಸೆಲ್ ಡಿಸ್‌ಪ್ಲೇ ಆಗಿದೆ. ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ನಲ್ಲಿ FunTouch OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.
ಇನ್ನು ಈ ಸ್ಮಾರ್ಟ್‌ಫೋನ್ 18W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5.0, GPS/ A-GPS, FM ರೇಡಿಯೋ ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸುತ್ತದೆ.
Realme 9i: ಭರ್ಜರಿ ಕ್ಯಾಮೆರಾ, ಬಲಿಷ್ಠ ಪ್ರೊಸೆಸರ್ನ ರಿಯಲ್ ಮಿ 9i ಸ್ಮಾರ್ಟ್‌ಫೋನ್ ಬಿಡುಗಡೆ: ಬೆಲೆ ಎಷ್ಟು?