Kannada News Technology Vivo Y35 was launched in India as the company's latest smartphone in its Y series
Vivo Y35: ಭಾರತದಲ್ಲಿ ವಿವೋದಿಂದ ಮತ್ತೊಂದು ಸ್ಮಾರ್ಟ್‌ಫೋನ್ ಬಿಡುಗಡೆ: ಯಾವುದು?, ಬೆಲೆ ಎಷ್ಟು?
ಇತ್ತೀಚೆಗಷ್ಟೆ ತನ್ನ Y ಸರಣಿಯಲ್ಲಿ ವಿವೋ Y77e 5G ಹಾಗೂ V25 ಸರಣಿಯಲ್ಲಿ ವಿವೋ ವಿ25 ಪ್ರೊ ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದ್ದ ಕಂಪನಿ ಇದೀಗ ವಿವೋ ವೈ35 ಫೋನನ್ನು ರಿಲೀಸ್ ಮಾಡಿದೆ.
Vivo Y35
Follow us on
ಪ್ರಸಿದ್ಧ ವಿವೋ (VIvo) ಕಂಪನಿ 2022ರ ಮೊದಲ ಕ್ವಾರ್ಟರ್ನಲ್ಲಿ ಅತಿ ಹೆಚ್ಚು ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡಿ ಯಶಸ್ಸು ಕಂಡಿತ್ತು. ಇದೀಗ ಎರಡನೇ ಕ್ವಾರ್ಟರ್ನಲ್ಲೂ ವಿವೋ ಫೋನ್ಗಳ ಬಿಡುಗಡೆ ಕಾರ್ಯಕ್ರಮ ಭರ್ಜರಿ ಆಗಿ ನಡೆಯುತ್ತಿದೆ. ಅದರಲ್ಲೂ ಭಾರತದಲ್ಲಿ ಒಂದರ ಹಿಂದ ಒಂದರಂತೆ ಮೊಬೈಲ್ಗಳು ಅನಾವರಣಗೊಳ್ಳುತ್ತಿದೆ.ಇತ್ತೀಚೆಗಷ್ಟೆ ತನ್ನ Y ಸರಣಿಯಲ್ಲಿ ವಿವೋ Y77e 5G ಹಾಗೂ V25 ಸರಣಿಯಲ್ಲಿ ವಿವೋವಿ25 ಪ್ರೊ ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದ್ದ ಕಂಪನಿ ಇದೀಗ ವಿವೋ ವೈ35 (Vivo Y35) ಫೋನನ್ನು ರಿಲೀಸ್ ಮಾಡಿದೆ. ಇದುಕೂಡ ಆಕರ್ಷಕ ಫೀಚರ್ಗಳಿಂದ ಕೂಡಿದ್ದು, ಸ್ನಾಪ್ಡ್ರಾಗನ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಬಲಿಷ್ಠ ಬ್ಯಾಟರಿ, ಫಾಸ್ಟ್ ಚಾರ್ಜರ್ ಕೂಡ ನೀಡಲಾಗಿದೆ. ಹಾಗಾದ್ರೆ ಈ ಫೋನ್ನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆಗಳಿವೆ ಎಂಬ ಸಂಪೂರ್ಣ ಮಾಹಿತಿ ನೋಡೋಣ.
ವಿವೋ Y35ಸ್ಮಾರ್ಟ್‌ಫೋನ್ ಭಾರತದಲ್ಲಿ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ8GB RAM + 128GB ಸ್ಟೋರೇಜ್ ಕಾನ್ಫಿಗರೇಶನ್ ಬೆಲೆ 18,499 ರೂ. ಆಗಿದೆ. ಭಾರತವ ವಿವೋ ಇಂಡಿಯಾ ಎ– ಸ್ಟೋರ್ನಲ್ಲಿ ಈ ಫೋನನ್ನು ನೀವು ಖರೀದಿಸಬಹುದು.
ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ ಇದು 1080*2408ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58ಇಂಚಿನ ಫುಲ್ ಹೆಚ್‌ಡಿ ಪ್ಲಸ್ LCDಡಿಸ್ ಪ್ಲೇ ಹೊಂದಿದೆ.
ಕ್ವಾಲ್ಕಂ ಸ್ನಾಪ್ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕವೂ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ 50ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಟ್ರಿಪಲ್ ರಿಯರ್ ಕ್ಯಾಮೆರಾವನ್ನು ನೀಡಲಾಗಿದೆ. 2 ಮೆಗಾಫಿಕ್ಸೆಲ್ ಬೋಕೆ ಮೋಡ್ ಹಾಗೂ 2 ಮೆಗಾಫಿಕ್ಸೆಲ್ ಮಾಕ್ರೋ ಸೆನ್ಸಾರ್ ಅಳವಡಿಸಲಾಗಿದೆ. ಇದಲ್ಲದೆ 16ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಇದನ್ನೂ ಓದಿ
ವಿವೋ Y35ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್ v5.0 ಸೇರಿದಂತೆ ಇತ್ತೀಚಿನ ಎಲ್ಲ ಆಯ್ಕೆ ನೀಡಲಾಗಿದೆ.