AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivo Y35m: ಹೊಸ ವರ್ಷಕ್ಕೆ ವಿವೋದಿಂದ ಬಜೆಟ್ ಬೆಲೆಗೆ ಬಂಪರ್ ಸ್ಮಾರ್ಟ್​ಫೋನ್ ಬಿಡುಗಡೆ

ಕಳೆದ ವರ್ಷ ತನ್ನ ವಿವೋ ವೈ ಸರಣಿಯಲ್ಲಿ ವಿವೋ Y35 ಫೋನನ್ನು ರಿಲೀಸ್ ಮಾಡಿದ್ದ ಕಂಪನಿ ಇದೀಗ ಇದರ ಮುಂದುವರೆದ ಭಾಗವಾಗಿ ವಿವೋ ವೈ35ಎಮ್ (Vivo Y35m) ಫೋನನ್ನು ಬಿಡುಗಡೆ ಮಾಡಿದೆ.

Vivo Y35m: ಹೊಸ ವರ್ಷಕ್ಕೆ ವಿವೋದಿಂದ ಬಜೆಟ್ ಬೆಲೆಗೆ ಬಂಪರ್ ಸ್ಮಾರ್ಟ್​ಫೋನ್ ಬಿಡುಗಡೆ
Vivo y35m
TV9 Web
| Edited By: |

Updated on:Jan 03, 2023 | 2:19 PM

Share

ಪ್ರಸಿದ್ಧ ವಿವೋ (Vivo) ಕಂಪನಿ 2022ರಲ್ಲಿ ಅನೇಕ ಸ್ಮಾರ್ಟ್​​ಫೋನ್​ಗಳನ್ನು (Smartphone) ಬಿಡುಗಡೆ ಮಾಡಿ ಯಶಸ್ಸು ಕಂಡಿತ್ತು. ಇದೀಗ 2023ರ ಆರಂಭದಲ್ಲೇ ಮಾರುಕಟ್ಟೆಯಲ್ಲಿ ಮತ್ತೆ ಧೂಳೆಬ್ಬಿಸಲು ಶುರು ಮಾಡಿದೆ. ಕಳೆದ ವರ್ಷ ತನ್ನ ವಿವೋ ವೈ ಸರಣಿಯಲ್ಲಿ ವಿವೋ Y35 ಫೋನನ್ನು ರಿಲೀಸ್ ಮಾಡಿದ್ದ ಕಂಪನಿ ಇದೀಗ ಇದರ ಮುಂದುವರೆದ ಭಾಗವಾಗಿ ವಿವೋ ವೈ35ಎಮ್ (Vivo Y35m) ಫೋನನ್ನು ಬಿಡುಗಡೆ ಮಾಡಿದೆ. ಇದುಕೂಡ ಆಕರ್ಷಕ ಫೀಚರ್​ಗಳಿಂದ ಕೂಡಿದ್ದು, ಮೀಡಿಯಾಟೆಕ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಬಲಿಷ್ಠ ಬ್ಯಾಟರಿ, ಫಾಸ್ಟ್ ಚಾರ್ಜರ್ ಕೂಡ ನೀಡಲಾಗಿದೆ. ಹಾಗಾದ್ರೆ ಈ ಫೋನ್​ನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆಗಳಿವೆ ಎಂಬ ಸಂಪೂರ್ಣ ಮಾಹಿತಿ ನೋಡೋಣ.

  • ವಿವೋ Y35m ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಚೀನಾ ಮಾರುಕಟ್ಟೆಯಲ್ಲಿ ರಿಲೀಸ್ ಆಗಿದೆ. ಕೆಲವು ದಿನಗಳ ಬಳಿಕ ಇದು ಭಾರತಕ್ಕೂ ಕಾಲಿಡುವ ನಿರೀಕ್ಷೆಯಿದೆ.
  • ಚಿನಾದಲ್ಲಿ ಈ ಸ್ಮಾರ್ಟ್​ಫೋನ್​ 4GB RAM + 128GB ಸ್ಟೋರೇಜ್ ಕಾನ್ಫಿಗರೇಶನ್​ಗೆ CNY 1,999, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 16,800 ರೂ. ಎನ್ನಬಹುದು. ಅಂತೆಯೆ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ CNY 1,699 (20,400 ರೂ.)
  • ಇದನ್ನೂ ಓದಿ
    Image
    Tecno Phantom X2 5G: ಬಲಿಷ್ಠ ಪ್ರೊಸೆಸರ್, ಭರ್ಜರಿ ಕ್ಯಾಮೆರಾ: ಭಾರತದಲ್ಲಿ ಟೆಕ್ನೋ ಫ್ಯಾಂಟಮ್ X2 5G ಸ್ಮಾರ್ಟ್​ಫೋನ್ ಬಿಡುಗಡೆ
    Image
    Tech Tips: ಹೊಸ ವರ್ಷದ ಪ್ರಯುಕ್ತ EMI ನಲ್ಲಿ ಸ್ಮಾರ್ಟ್​​ಫೋನ್ ಖರೀದಿಸುವ ಮುನ್ನ ಈ ವಿಚಾರ ತಿಳಿದುಕೊಳ್ಳಿ
    Image
    Flipkart: ಬಂಪರ್ ಆಫರ್: ಕೇವಲ 749 ರೂ. ಗೆ ಈ ಆಕರ್ಷಕ ಸ್ಮಾರ್ಟ್ LED ಟಿವಿಯನ್ನು ಖರೀದಿಸಿ
    Image
    Best Recharge Plans 2023: ಜಿಯೋ, ವಿ, ಏರ್ಟೆಲ್ ಧಮಾಕ ಆಫರ್: ಒಂದು ವರ್ಷದ ವ್ಯಾಲಿಡಿಯ ಬೆಸ್ಟ್ ಯೋಜನೆಗಳು ಇಲ್ಲಿದೆ
  • ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ ಇದು 1600*720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ ಫುಲ್ ಹೆಚ್‌ಡಿ ಪ್ಲಸ್‌ IPS ಡಿಸ್‌ ಪ್ಲೇ ಹೊಂದಿದೆ.
  • ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್‌ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕವೂ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
  • ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ವಿವೋ Y35m ಸ್ಮಾರ್ಟ್‌ಫೋನ್‌ ಡ್ಯುಯೆಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ.
  • ಎರಡನೇ ಕ್ಯಾಮೆರಾ 2 ಮೆಗಾಫಿಕ್ಸೆಲ್ ಮಾಕ್ರೋ ಸೆನ್ಸಾರ್ ಅಳವಡಿಸಲಾಗಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
  • ವಿವೋ Y35 ಸ್ಮಾರ್ಟ್‌ಫೋನ್‌ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.
  • ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, 3.5mm ಹೆಡ್​ಫೋನ್ ಜ್ಯಾಕ್ ಸೇರಿದಂತೆ ಇತ್ತೀಚಿನ ಎಲ್ಲ ಆಯ್ಕೆ ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:19 pm, Tue, 3 January 23

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ