Vivo y35m
ಪ್ರಸಿದ್ಧ ವಿವೋ (Vivo) ಕಂಪನಿ 2022ರಲ್ಲಿ ಅನೇಕ ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡಿ ಯಶಸ್ಸು ಕಂಡಿತ್ತು. ಇದೀಗ 2023ರ ಆರಂಭದಲ್ಲೇ ಮಾರುಕಟ್ಟೆಯಲ್ಲಿ ಮತ್ತೆ ಧೂಳೆಬ್ಬಿಸಲು ಶುರು ಮಾಡಿದೆ. ಕಳೆದ ವರ್ಷ ತನ್ನ ವಿವೋ ವೈ ಸರಣಿಯಲ್ಲಿ ವಿವೋ Y35 ಫೋನನ್ನು ರಿಲೀಸ್ ಮಾಡಿದ್ದ ಕಂಪನಿ ಇದೀಗ ಇದರ ಮುಂದುವರೆದ ಭಾಗವಾಗಿ ವಿವೋ ವೈ35ಎಮ್ (Vivo Y35m) ಫೋನನ್ನು ಬಿಡುಗಡೆ ಮಾಡಿದೆ. ಇದುಕೂಡ ಆಕರ್ಷಕ ಫೀಚರ್ಗಳಿಂದ ಕೂಡಿದ್ದು, ಮೀಡಿಯಾಟೆಕ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಬಲಿಷ್ಠ ಬ್ಯಾಟರಿ, ಫಾಸ್ಟ್ ಚಾರ್ಜರ್ ಕೂಡ ನೀಡಲಾಗಿದೆ. ಹಾಗಾದ್ರೆ ಈ ಫೋನ್ನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆಗಳಿವೆ ಎಂಬ ಸಂಪೂರ್ಣ ಮಾಹಿತಿ ನೋಡೋಣ.
- ವಿವೋ Y35m ಸ್ಮಾರ್ಟ್‌ಫೋನ್ ಸದ್ಯಕ್ಕೆ ಚೀನಾ ಮಾರುಕಟ್ಟೆಯಲ್ಲಿ ರಿಲೀಸ್ ಆಗಿದೆ. ಕೆಲವು ದಿನಗಳ ಬಳಿಕ ಇದು ಭಾರತಕ್ಕೂ ಕಾಲಿಡುವ ನಿರೀಕ್ಷೆಯಿದೆ.
- ಚಿನಾದಲ್ಲಿ ಈ ಸ್ಮಾರ್ಟ್‌ಫೋನ್ 4GB RAM + 128GB ಸ್ಟೋರೇಜ್ ಕಾನ್ಫಿಗರೇಶನ್ಗೆ CNY 1,999, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 16,800 ರೂ. ಎನ್ನಬಹುದು. ಅಂತೆಯೆ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ CNY 1,699 (20,400 ರೂ.)
- ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ ಇದು 1600*720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51 ಇಂಚಿನ ಫುಲ್ ಹೆಚ್‌ಡಿ ಪ್ಲಸ್ IPS ಡಿಸ್ ಪ್ಲೇ ಹೊಂದಿದೆ.
- ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕವೂ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
- ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ವಿವೋ Y35m ಸ್ಮಾರ್ಟ್‌ಫೋನ್ ಡ್ಯುಯೆಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ.
- ಎರಡನೇ ಕ್ಯಾಮೆರಾ 2 ಮೆಗಾಫಿಕ್ಸೆಲ್ ಮಾಕ್ರೋ ಸೆನ್ಸಾರ್ ಅಳವಡಿಸಲಾಗಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
- ವಿವೋ Y35 ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
- ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, 3.5mm ಹೆಡ್ಫೋನ್ ಜ್ಯಾಕ್ ಸೇರಿದಂತೆ ಇತ್ತೀಚಿನ ಎಲ್ಲ ಆಯ್ಕೆ ನೀಡಲಾಗಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ