ಭಾರತದಲ್ಲಿ ವಿವೋ Y36 ಸ್ಮಾರ್ಟ್​ಫೋನ್ ಬಿಡುಗಡೆ: ಇದು ಬಜೆಟ್ ಬೆಲೆಯ ಬಲಿಷ್ಠ ಫೋನ್

ವಿವೋ ಕಂಪನಿ ಭಾರತದಲ್ಲಿ ಹೊಸ ವಿವೋ ವೈ36 (Vivo Y36) ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿದೆ. ಇದೊಂದು ಕಡಿಮೆ ಬೆಲೆಯ ಬಜೆಟ್ ಫೋನಾಗಿದ್ದರೂ ಆಕರ್ಷಕ ಕ್ಯಾಮೆರಾ, ಬಲಿಷ್ಠ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್​ಗಳನ್ನು ಒಳಗೊಂಡಿದೆ.

ಭಾರತದಲ್ಲಿ ವಿವೋ Y36 ಸ್ಮಾರ್ಟ್​ಫೋನ್ ಬಿಡುಗಡೆ: ಇದು ಬಜೆಟ್ ಬೆಲೆಯ ಬಲಿಷ್ಠ ಫೋನ್
Vivo Y36
Follow us
|

Updated on: Jun 22, 2023 | 3:26 PM

ಚೀನಾ ಮೂಲದ ಪ್ರಸಿದ್ಧ ವಿವೋ (Vivo) ಕಂಪನಿಯ ಸ್ಮಾರ್ಟ್​ಫೋನ್​ಗಳಿಗೆ (Smartphone) ಭಾರತದಲ್ಲಿ ವಿಶೇಷ ಬೇಡಿಕೆ ಇದೆ. ದೇಶದಲ್ಲಿ ವಿಶೇಷ ಶೈಲಿಯ ಮೊಬೈಲ್​ಗಳನ್ನು ಅನಾವರಣ ಮಾಡಿ ಗ್ರಾಹಕರ ನೆಚ್ಚಿನ ಬ್ರ್ಯಾಂಡ್ ಆಗಿರುವ ವಿವೋ ತಿಂಗಳಿಗೆ ಕಡಿಮೆ ಎಂದರೂ ಒಂದರಿಂದ ಎರಡು ಫೋನನ್ನು ಅನಾವರಣ ಮಾಡುತ್ತದೆ. ಇತ್ತೀಚೆಗಷ್ಟೆ ತನ್ನ ವೈ ಸರಣಿ ಅಡಿಯಲ್ಲಿ ವಿವೋ Y35 ಮೊಬೈಲ್ ಪರಿಚಯಿಸಿತ್ತು. ಇದೀಗ ಇದರ ಮುಂದುವರೆದ ಭಾಗವಾಗಿ ಕಂಪನಿ ಭಾರತದಲ್ಲಿ ಹೊಸ ವಿವೋ ವೈ36 (Vivo Y36) ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿದೆ. ಇದೊಂದು ಕಡಿಮೆ ಬೆಲೆಯ ಬಜೆಟ್ ಫೋನಾಗಿದ್ದರೂ ಆಕರ್ಷಕ ಕ್ಯಾಮೆರಾ, ಬಲಿಷ್ಠ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್​ಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್​ ಬಗ್ಗೆ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ವಿವೋ Y36 ಫೋನ್ ಸದ್ಯಕ್ಕೆ ಭಾರತದಲ್ಲಿ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಮಾತ್ರ ರಿಲೀಸ್ ಆಗಿದೆ. ಇದರ 8GB RAM + 128GB ಸ್ಟೋರೇಜ್ ಸಾಮರ್ಥ್ಯದ ಬೆಲೆ 16,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್, ವಿವೋ ಇಂಡಿಯಾ ಸ್ಟೋರ್ ಸೇರಿದಂತೆ ಎಲ್ಲ ರಿಟೇಲ್ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿದೆ. ಇದು ಕಪ್ಪು ಮತ್ತು ವೈಬ್ರಂಟ್ ಗೋಲ್ಡ್ ಕಲರ್​ನಲ್ಲಿ ಮಾರಾಟ ಕಾಣುತ್ತಿದೆ. ಫ್ಲಿಪ್​ಕಾರ್ಟ್​ನಲ್ಲಿ ಹೆಚ್​ಡಿಎಫ್​ಸಿ ಕಾರ್ಡ್ ಮೂಲಕ ಪಡೆದುಕೊಂಡರೆ 1,500 ರೂ. ಗಳ ಡಿಸ್ಕೌಂಟ್ ಸಿಗಲಿದೆ.

ಇದನ್ನೂ ಓದಿ
Image
Redmi 12C: ಹೊಸ ವೇರಿಯೆಂಟ್​ನಲ್ಲಿ ರೆಡ್ಮಿ 12C ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಕೇವಲ 9,999 ರೂ.
Image
Infinix Note 30 5G: ಇಂದಿನಿಂದ 108MP ಕ್ಯಾಮೆರಾದ ಈ ಫೋನ್ ಖರೀದಿಗೆ ಲಭ್ಯ: ಬೆಲೆ ಕೇವಲ 13,999ರೂ.
Image
Zero Electricity Bill: ಮನೆಯ ವಿದ್ಯುತ್ ಬಿಲ್ ಕಡಿಮೆ ಬರಬೇಕೇ?: ಹಾಗಿದ್ರೆ ಹೀಗೆ ಮಾಡಿ
Image
WhatsApp Tricks: ವಾಟ್ಸ್​ಆ್ಯಪ್​ನಿಂದ ಫುಲ್ ಆಗುವ ಫೋನ್ ಸ್ಟೋರೇಜ್ ಅನ್ನು ಸರಿಪಡಿಸುವುದು ಹೇಗೆ?: ಈ ಟ್ರಿಕ್ ಫಾಲೋ ಮಾಡಿ

Samsung Galaxy A73: 10 ಸಾವಿರ ರೂ. ಡಿಸ್ಕೌಂಟ್​ನಲ್ಲಿ ಲಭ್ಯ ಸ್ಯಾಮ್​ಸಂಗ್ ಸ್ಮಾರ್ಟ್​ಫೋನ್

ಫೀಚರ್ಸ್ ಏನಿದೆ?:

ವಿವೋ Y36 ಸ್ಮಾರ್ಟ್​ಫೋನ್ 1080 x 2388 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.64 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಎಲ್​ಸಿಡಿ ಡಿಸ್‌ಪ್ಲೇ ಹೊಂದಿದೆ. ಇದರಲ್ಲಿ 90Hz ರಿಫ್ರೆಶ್ ರೇಟ್‌ ಆಯ್ಕೆ ನೀಡಲಾಗಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ನೀಡಲಾಗಿದೆ. ಬಲಿಷ್ಠವಾದ ಆಕ್ಟಾ-ಕೊರ್ 6nm ಸ್ನಾಪ್​ಡ್ರಾಗನ್ 680 ಪ್ರೊಸೆಸರ್​ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 13 ಓಎಸ್‌ ಆಧಾರಿತ ಒರಿಜಿನ್ಓಎಸ್ ಓಷನ್ ಯುಐನಲ್ಲಿ ರನ್‌ ಆಗಲಿದೆ. ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಮೂಲಕ ಇಂಟರ್ನಲ್‌ ಸ್ಟೋರೇಜ್‌ ಅನ್ನು ಹೆಚ್ಚಿಸಬಹುದು.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್​ನಲ್ಲಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಇದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಕ್ಯಾಮೆರಾ ನೀಡಲಾಗಿದೆ. 2 ಮೆಗಾ ಪಿಕ್ಸೆಲ್‌ ಬೊಕೆ ಶೂಟರ್, 2 ಮೆಗಾ ಪಿಕ್ಸೆಲ್ ಮಾಕ್ರೋ ಶೂಟರ್ ಆಯ್ಕೆ ಇದ್ದು, ಮುಂಭಾಗದಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾ ಪಿಕ್ಸೆಲ್‌ ಕ್ಯಾಮೆರಾ ಇದೆ. ಇದರಲ್ಲಿ ಸೂಪರ್ ನೈಟ್ ಮೋಡ್ ಸೇರಿದಂತೆ ಅನೇಕ ಫೋಟೋಗ್ರಫಿ ಮೋಡ್ ಆಯ್ಕೆ ಅಳವಡಿಸಲಾಗಿದೆ.

ಬ್ಯಾಟರಿ ವಿಚಾರಕ್ಕೆ ಬರುವುದಾದರೆ ವಿವೋ Y36 ಸ್ಮಾರ್ಟ್​ಫೋನ್ 44W ಚಾರ್ಜಿಂಗ್ ಅನ್ನು ಬೆಂಬಲಿಸುವ 5,000 mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಆಯ್ಕೆ ಪಡೆದುಕೊಂಡಿದೆ. ಇದು ಕೇವಲ 15 ನಿಮಿಷಗಳಲ್ಲಿ 0 ದಿಂದ ಶೇ. 30 ರಷ್ಟು ಚಾರ್ಜ್ ಆಗುತ್ತಂತೆ. ಹಾಗೆಯೇ ವೈ-ಫೈ, ಬ್ಲೂಟೂತ್ ಆವೃತ್ತಿ 5, ಜಿಪಿಎಸ್, ಯುಎಸ್‌ಬಿ-ಸಿ ಪೋರ್ಟ್ ಮತ್ತು 3.5 ಎಂಎಂ ಆಡಿಯೊ ಜಾಕ್ ಕನೆಕ್ಟಿವಿಟಿ ಆಯ್ಕೆಯ ಜೊತೆಗೆ ಸೆಕ್ಯೂರಿಟಿಗಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆ ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ