Vivo Y52 5G: 5000mAh ಬ್ಯಾಟರಿ, 50MP ಕ್ಯಾಮೆರಾ: ವಿವೋದಿಂದ ಮಧ್ಯಮ ಬೆಲೆಗೆ ಬೊಂಬಾಟ್ ಸ್ಮಾರ್ಟ್‌ಫೋನ್ ಬಿಡುಗಡೆ
ಇತ್ತೀಚೆಗಷ್ಟೆ ವಿವೋ ವೈ72ಟಿ (Vivo Y73t) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದ್ದ ವಿವೋ ಕಂಪನಿ ಇದೀಗ ತನ್ನ ವೈ ಸರಣಿಯಲ್ಲೇ ಹೊಸ ವಿವೋ Y52 5G 2022 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ.
ಪ್ರಸಿದ್ಧ ವಿವೋ ಕಂಪನಿ ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್ಫೋನುಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಇತ್ತೀಚೆಗಷ್ಟೆ ವಿವೋ ವೈ72ಟಿ (Vivo Y73t) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದ್ದ ವಿವೋ ಕಂಪನಿ ಇದೀಗ ತನ್ನ ವೈ ಸರಣಿಯಲ್ಲೇ ಹೊಸ ವಿವೋ ವೈ52 5ಜಿ 2022 (Vivo Y52 5G) ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಮೀಡಿಯಾಟೆಕ್ ಡೈಮೆನ್ಸಿಟಿ ಪ್ರೊಸೆಸರ್ ಅನ್ನು ನೀಡಲಾಗಿದೆ. ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್ಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್ ಬಗ್ಗೆ ಮಾಹಿತಿ ಇಲ್ಲಿದೆ.
- ವಿವೋ Y52 5G (2022) ಸ್ಮಾರ್ಟ್‌ಫೋನ್ ಸದ್ಯಕ್ಕೆ ತೈವಾನ್ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಕೆಲವು ತಿಂಗಳುಗಳ ನಂತರ ಭಾರತಕ್ಕೂ ಕಾಲಿಡಲಿದೆ. ಇದರ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯಕ್ಕೆ TWD 7,990, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 20,492 ರೂ. ಎನ್ನಬಹುದು.
- ಈ ಸ್ಮಾರ್ಟ್‌ಫೋನ್ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್‌ಡಿ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದರಲ್ಲಿ 96% NTSC ಕಲರ್ ಗ್ಯಾಮಟ್ ಇರುವುದು ವಿಶೇಷ.
- ಬೆಲೆಗೆ ತಕ್ಕಂತೆ ಬಲಿಷ್ಠವಾದ ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
- ವಿವೋ Y52 5G (2022) ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ನಿಂದ ಕೂಡಿದೆ.
- ಇದರಲ್ಲಿ ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ ಎಲ್‌ಇಡಿ ಫ್ಲ್ಯಾಷ್ ಅನ್ನು ಒಳಗೊಂಡಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಕೂಡ ನೀಡಲಾಗಿದೆ.
- ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, ಇದಕ್ಕೆ ತಕ್ಕಂತೆ 18W ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಸಪೋರ್ಟ್ ಕೂಡ ಇದೆ.
- ಉಳಿದಂತೆ ಹಾಟ್‌ಸ್ಪಾಟ್ ಡ್ಯುಯಲ್ ಸಿಮ್, ವೈ-ಫೈ, ಬ್ಲೂಟೂತ್ 5.1, ಜಿಪಿಎಸ್, ಎನ್‌ಎಫ್‌ಸಿ, ಯುಎಸ್‌ಬಿ-ಸಿ ಪೋರ್ಟ್ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆ ಅಳವಡಿಸಲಾಗಿದೆ.
ಇದನ್ನೂ ಓದಿ