Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivo Y53s: 64MP ಕ್ಯಾಮೆರಾ, 33W ಫಾಸ್ಟ್ ಚಾರ್ಜಿಂಗ್, ಕಡಿಮೆ ಬೆಲೆಯ ವಿವೋ Y53s ಸ್ಮಾರ್ಟ್​ಫೋನ್ ಬಿಡುಗಡೆ

ಸದ್ಯಕ್ಕೆ ಈ ಫೋನ್ ಒಂದು ಆಯ್ಕೆಯಲ್ಲಿ ಲಭ್ಯವಿದೆ ಎಂದು ತಿಳಿದುಬಂದಿದೆ. ಇದರ ಪ್ರಕಾರ ವಿವೋ Y53s ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 19,490 ರೂ. ಆಗಿದೆ.

Vivo Y53s: 64MP ಕ್ಯಾಮೆರಾ, 33W ಫಾಸ್ಟ್ ಚಾರ್ಜಿಂಗ್, ಕಡಿಮೆ ಬೆಲೆಯ ವಿವೋ Y53s ಸ್ಮಾರ್ಟ್​ಫೋನ್ ಬಿಡುಗಡೆ
Vivo Y53s
Follow us
TV9 Web
| Updated By: Vinay Bhat

Updated on:Aug 09, 2021 | 2:21 PM

ಭಾರತೀಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸಿ ಯಶಸ್ವಿಯಾಗಿರುವ ವಿವೋ ಕಂಪೆನಿ ಇದೀಗ ಹೊಸದಾಗಿ ವಿವೋ Y53s (Vivo Y53s) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು ಬರೋಬ್ಬರಿ 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗೆಯೇ ಅಧಿಕ ಬ್ಯಾಟರಿ ಬಾಳಿಕೆಯನ್ನು ಹೊಂದಿದ್ದು ಬಜೆಟ್ ಬೆಲೆಗೆ ಲಭ್ಯವಿರುವುದು ವಿಶೇಷ.

ಸದ್ಯಕ್ಕೆ ಈ ಫೋನ್ ಒಂದು ಆಯ್ಕೆಯಲ್ಲಿ ಲಭ್ಯವಿದೆ ಎಂದು ತಿಳಿದುಬಂದಿದೆ. ಇದರ ಪ್ರಕಾರ ವಿವೋ Y53s ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 19,490 ರೂ. ಆಗಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್, ಫ್ಲಿಪ್​ಕಾರ್ಟ್ ಸೇರಿದಂತೆ ಆಫ್​ಲೈನ್ ಸ್ಟೋರ್​ಗಳಲ್ಲಿ ಇದು ಖರೀದಿಗೆ ಸಿಗುತ್ತಿದೆ. ಹೆಚ್​ಡಿಎಫ್​ಸಿ ಕ್ರೆಡಿಟ್ ಕಾರ್ಡ್ ಹೊಂದಿರುವವರು 1,500 ರೂ. ಡಿಸ್ಕೌಂಟ್​ನ ಪಡೆದುಕೊಳ್ಳಬಹುದು.

ವಿವೋ Y53s ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಪಂಚ್‌ಹೋಲ್‌ ವಿನ್ಯಾಸವನ್ನ ಹೊಂದಿದ್ದು, 19.5: 9 ರಚನೆಯ ಅನುಪಾತವನ್ನ ಒಳಗೊಂಡಿದೆ. ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಇನ್ನೂ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ ಮತ್ತು ತೃತೀಯ ಕ್ಯಾಮೆರಾ ಕ್ರಮವಾಗಿ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸುವುದಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, GPS ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್, ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೇರಿದಂತೆ ಪ್ರಮುಖ ಆಯ್ಕೆಗಳಿವೆ.

Xiaomi: ಪದಕ ಗೆದ್ದ ಭಾರತೀಯರಿಗೆ ಶವೋಮಿಯಿಂದ ಸ್ಮಾರ್ಟ್​ಫೋನ್ ಗಿಫ್ಟ್: ಯಾವುದು ಗೊತ್ತಾ?

BSNL ಭರ್ಜರಿ ಆಫರ್: ಒಂದು ವರ್ಷದವರೆಗೆ ಅನಿಯಮಿತ ಕರೆ ಸೌಲಭ್ಯ, 600 GB ಉಚಿತ ಡೇಟಾ

(Vivo Y53s With Triple Rear Cameras 33W Fast Charging Launched in India Price Specifications)

Published On - 2:20 pm, Mon, 9 August 21

ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ