Vivo Y55s 5G (2023)
ಪ್ರಸಿದ್ಧ ವಿವೋ (Vivo) ಕಂಪನಿ ಜಾಗತಿಕ ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್ಫೋನುಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಇತ್ತೀಚೆಗೆ ತನ್ನ ವಿವೋ ವೈ ಸರಣಿಯಲ್ಲಿ ಆಕರ್ಷಕ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡುತ್ತಿರುವ ಕಂಪನಿ ಇದೀಗ ಮಾರುಕಟ್ಟೆಯಲ್ಲಿ ತನ್ನ ಹೊಸ ವಿವೋ ವೈ55ಎಸ್ 5ಜಿ 2023 (Vivo Y55s 5G (2023)) ಫೋನೊಂದನ್ನು ರಿಲೀಸ್ ಮಾಡಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು 5ಜಿ ಬೆಂಬಲದ ಜೊತೆಗೆ ಆಕರ್ಷಕ ಕ್ಯಾಮೆರಾ, ಬಲಿಷ್ಠ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್ಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ, ಫೀಚರ್ಸ್ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
- ವಿವೋ Y55s 5G (2023) ಸ್ಮಾರ್ಟ್‌ಫೋನ್ 2,408 x 1,080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ HD+ LCD ಡಿಸ್‌ಪ್ಲೇ ಹೊಂದಿದೆ. ಇದು 60Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ.
- ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ನಿಂದ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 12 ಅನ್ನು ಆಧರಿಸಿದ ಫನ್‌ಟಚ್ ಓಎಸ್ 12 ಅನ್ನು ರನ್ ಮಾಡುತ್ತದೆ.
- 6GB RAM ಹಾಗೂ 128GB ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯ ಪಡೆದುಕೊಂಡಿದೆ. ಹಾಗೆಯೇ ಸ್ಟೋರೇಜ್ ವಿಸ್ತರಣೆಗಾಗಿ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಅನ್ನು ಸಹ ನೀಡಲಾಗಿದೆ.
- ಈ ಹೊಸ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, f/1.8 ಅಪರ್ಚರ್ ಲೆನ್ಸ್‌ನೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸರ್, f/2.4 ಅಪರ್ಚರ್ ಲೆನ್ಸ್‌ನೊಂದಿಗೆ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಕ್ಯಾಮೆರಾ ನೀಡಲಾಗಿದೆ.
- ಅಲ್ಲದೆ f/2.4 ಅಪರ್ಚರ್ ಲೆನ್ಸ್‌ನೊಂದಿಗೆ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ f/1.8 ಅಪರ್ಚರ್ ಲೆನ್ಸ್ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಅಳವಡಿಸಲಾಗಿದೆ.
- ಯುಎಸ್‌ಬಿ ಟೈಪ್-ಸಿ ಪೋರ್ಟ್ ಆಯ್ಕೆಯೊಂದಿಗೆ 18W ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ.
- ಕನೆಕ್ಟಿವಿಟಿ ವಿಚಾರದಲ್ಲಿ 5G,ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ v5.1, ಎನ್‌ಎಫ್‌ಸಿ, ಜಿಪಿಎಸ್, 3.5mm ಹೆಡ್‌ಫೋನ್ ಜ್ಯಾಕ್ ಆಯ್ಕೆ ನೀಡಲಾಗಿದೆ.
- ವಿವೋ Y55s 5G (2023) ಸ್ಮಾರ್ಟ್‌ಫೋನ್‌ನ 4GB RAM + 128GB ಸ್ಟೋರೇಜ್ ವೇರಿಯಂಟ್‌ಗೆ NTD 7,990, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 21,300 ರೂ. ಇರಬಹುದು.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ