Vivo Y55s 5G: 6000mAh ಬ್ಯಾಟರಿ, ಮೀಡಿಯಾಟೆಕ್ ಪ್ರೊಸೆಸರ್‌: ಅತಿ ಕಡಿಮೆ ಬೆಲೆಗೆ ವಿವೋ Y55s 5G ಸ್ಮಾರ್ಟ್‌ಫೋನ್‌ ಬಿಡುಗಡೆ

ವಿವೋ Y55s 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ.

Vivo Y55s 5G: 6000mAh ಬ್ಯಾಟರಿ, ಮೀಡಿಯಾಟೆಕ್ ಪ್ರೊಸೆಸರ್‌: ಅತಿ ಕಡಿಮೆ ಬೆಲೆಗೆ ವಿವೋ Y55s 5G ಸ್ಮಾರ್ಟ್‌ಫೋನ್‌ ಬಿಡುಗಡೆ
Vivo Y55s 5G
Follow us
TV9 Web
| Updated By: Vinay Bhat

Updated on: Dec 09, 2021 | 2:26 PM

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಹಲವು ಮಾದರಿಯ ಫೋನ್​ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿರುವ ಪ್ರಸಿದ್ಧ ವಿವೋ ಸಂಸ್ಥೆ ಇದೀಗ ಹೊಸ ವಿವೋ ವೈ55ಎಸ್ 5ಜಿ (Vivo Y55s 5G) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಮೀಡಿಯಾಟೆಕ್ ಡೈಮೆನ್ಸಿಟಿ ಪ್ರೊಸೆಸರ್‌, ಬರೋಬ್ಬರಿ 6,000mAh ಸಾಮರ್ಥ್ಯದ ಬ್ಯಾಟರಿ,  ಡ್ಯುಯಲ್ ರಿಯರ್‌ ಕ್ಯಾಮೆರಾ (Camera) ಸೆಟ್‌ಅಪ್‌ ಹೊಂದಿರುವ ಈ ಸ್ಮಾರ್ಟ್​ಫೋನ್ ಸದ್ಯಕ್ಕೆ ಚೀನಾ ಮಾರುಕಟ್ಟೆಯಲ್ಲಿ ಆಗಿದೆ. ಮುಂದಿನ ವರ್ಷದ ಆರಂಭದಲ್ಲಿ ಇದು ಭಾರತಕ್ಕೂ ಕಾಲಿಡಲಿದೆ ಎನ್ನಲಾಗಿದೆ.

ಏನು ವಿಶೇಷತೆ?:

ವಿವೋ Y55s 5G ಸ್ಮಾರ್ಟ್‌ಫೋನ್‌ 1,080 x 2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 84.5% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದೆ. ಬಲಿಷ್ಠವಾದ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಫಂಟೌಚ್ ಓಎಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಜೊತೆಗೆ 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಎಷ್ಟು?:

ವಿವೋ Y55s 5G ಸ್ಮಾರ್ಟ್‌ಫೋನ್‌ ಬೆಲೆ ಚೀನಾದಲ್ಲಿ CNY 1,699. ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 20,200 ರೂ. ಎನ್ನಲಾಗಿದೆ ಇನ್ನು ಈ ಫೋನ್ ಮೂರು ಬಣ್ಣ ಆಯ್ಕೆಗಳಲ್ಲಿ ಲಭ್ಯವಿದ್ದು, ಕ್ರಮವಾಗಿ ಕಪ್ಪು, ನೀಲಿ ಮತ್ತು ಗುಲಾಬಿ ಆಗಿವೆ.

Sim Card: ನಿಮ್ಮ ಹೆಸರಿನಲ್ಲಿ ಲೆಕ್ಕಕ್ಕಿಂತ ಹೆಚ್ಚು ಸಿಮ್ ಕಾರ್ಡ್​ ಇದೆಯಾ?: ಸರ್ಕಾರ ತಂದಿದೆ ಹೊಸ ರೂಲ್ಸ್

(Vivo Y55s 5G With MediaTek Dimensity 700 SoC 50-Megapixel Dual Cameras 6000mAh Battery Launched)

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು