Vivo Y75: ಬಜೆಟ್ ಬೆಲೆಗೆ ಬಂಪರ್ ಫೋನ್: ಭಾರತದಲ್ಲಿ ವಿವೋ Y75 ಸ್ಮಾರ್ಟ್‌ಫೋನ್ ರಿಲೀಸ್
ಮೊನ್ನೆಯಷ್ಟೆ ಸದ್ದಿಲ್ಲದೆ ವಿವೋ Y01 ಫೋನನ್ನು ಮಾರುಕಟ್ಟೆಗೆ ಪರಿಚಯಿಸಿದ್ದ ವಿವೋ ಇದೀಗ ಮತ್ತೊಂದು ಹೊಸ ವಿವೋ ವೈ75 (Vivo Y75) ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ.
ಪ್ರಸಿದ್ಧ ವಿವೋ (Vivo) ಕಂಪನಿ ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷ ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್ಫೋನನ್ನು (Smartphone) ಬಿಡುಗಡೆ ಮಾಡುತ್ತಿದೆ. ಮೊನ್ನೆಯಷ್ಟೆ ಸದ್ದಿಲ್ಲದೆ ವಿವೋ Y01 ಫೋನನ್ನು ಮಾರುಕಟ್ಟೆಗೆ ಪರಿಚಯಿಸಿದ್ದ ವಿವೋ ಇದೀಗ ಮತ್ತೊಂದು ಹೊಸ ವಿವೋ ವೈ75 (Vivo Y75) ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು ಇದರಲ್ಲಿರುವ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ನಿಂದ ಕೂಡಿದೆ. 4,050mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಒಳಗೊಂಡಿದೆ. ಇದಕ್ಕೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡ ನೀಡಲಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡುವುದಾದರೆ…
- ಭಾರತದಲ್ಲಿ ವಿವೋ Y75 ಸ್ಮಾರ್ಟ್‌ಫೋನ್ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ 20,999 ರೂ. ನಿಗದಿ ಮಾಡಲಾಗಿದೆ. ಫ್ಲಿಪ್ಕಾರ್ಟ್, ವಿವೋ ಇಂಡಿಯಾ ಇ-ಸ್ಟೋರ್ ಮತ್ತು ಪಾಲುದಾರ ಚಿಲ್ಲರೆ ಅಂಗಡಿಗಳಲ್ಲಿ ಈ ಫೋನನ್ನು ಖರೀದಿಸಬಹುದು.
- ವಿವೋ Y75 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಫುಲ್ ಹೆಚ್‌ಡಿ+ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹೇಲಿಯೊ G96 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಫನ್‌ಟಚ್ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
- ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆ್ಯಂಗಲ್ ಡೆಪ್ತ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
- ದೀರ್ಘ ಸಮಯ ಬಾಳಿಕೆ ಬರುವ 4050mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳು ಬ್ಲೂಟೂತ್ V5.2, Wi-Fi, GPS ಮತ್ತು FM ರೇಡಿಯೋ ಬೆಂಬಲವನ್ನು ಒಳಗೊಂಡಿದೆ. ಫಿಂಗರ್ಪ್ರಿಂಟ್ ಸೆನ್ಸಾರ್ನಿಂದ ಕೂಡಿದೆ.
ಇದನ್ನೂ ಓದಿ
ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ