AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivo Y76 5G: ಬಹುನಿರೀಕ್ಷಿತ ವಿವೋ Y76 5G ಸ್ಮಾರ್ಟ್‌ಫೋನ್ ನ. 23ಕ್ಕೆ ಬಿಡುಗಡೆ: ಇದರಲ್ಲಿದೆ ಸಾಕಷ್ಟು ವಿಶೇಷತೆ

ಮೀಡಿಯಾ ಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿರುವ ವಿವೋ Y76 5G ಸ್ಮಾರ್ಟ್‌ಫೋನ್ 1,080 x 2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇಯಿಂದ ಕೂಡಿದೆ.

Vivo Y76 5G: ಬಹುನಿರೀಕ್ಷಿತ ವಿವೋ Y76 5G ಸ್ಮಾರ್ಟ್‌ಫೋನ್ ನ. 23ಕ್ಕೆ ಬಿಡುಗಡೆ: ಇದರಲ್ಲಿದೆ ಸಾಕಷ್ಟು ವಿಶೇಷತೆ
Vivo Y76
TV9 Web
| Edited By: |

Updated on: Nov 19, 2021 | 3:32 PM

Share

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಆಗಾಗ ವಿಶೇಷ ಫೀಚರ್​ಗಳುಳ್ಳ ಮೊಬೈಲ್ (Mobile) ಅನ್ನು ಪರಿಚಯಿಸಿ ಸುದ್ದಿಯಲ್ಲಿರುವ ವಿವೋ (Vivo) ಸಂಸ್ಥೆ ಇದೀಗ ಹೊಸ ಫೋನೊಂದನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ. ತನ್ನ 5G ಸ್ಮಾರ್ಟ್‌ಫೋನ್‌ಗಳ (5G Smartphones) ಪಟ್ಟಿಗೆ ಮತ್ತೊಂದು ಹೊಸ ಫೋನ್ ಸೇರ್ಪಡೆ ಮಾಡಲು ವಿವೋ ಸಜ್ಜಾಗಿದೆ. ಅದುವೇ ವಿವೋ ವೈ76 5ಜಿ (Vivo Y76 5G) ಸ್ಮಾರ್ಟ್‌ಫೋನ್. ಇದೇ ನವೆಂಬರ್ 23 ರಂದು ಅಧಿಕೃತವಾಗಿ ಈ ಸ್ಮಾರ್ಟ್​ಫೋನ್ ಬಿಡುಗಡೆ ಆಗಲಿದೆ. ಈ ಫೋನ್‌ನ ವಿನ್ಯಾಸ ಮತ್ತು ಪ್ರಮುಖ ಫೀಚರ್ಸ್‌ಗಳ ಬಗ್ಗೆ ಸಾಕಷ್ಟು ಕುತೂಹಲ ಕೆರಳಿಸಿದೆ.

ಮೀಡಿಯಾ ಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿರುವ ವಿವೋ Y76 5G ಸ್ಮಾರ್ಟ್‌ಫೋನ್ 1,080 x 2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇಯಿಂದ ಕೂಡಿದೆ. ಆಂಡ್ರಾಯ್ಡ್ 11 ಆಧಾರಿತ ಫಂಟೌಚ್ ಓಎಸ್ 11 ಅನ್ನು ಚಾಲನೆ ಮಾಡುತ್ತದೆ ಎಂದು ಹೇಳಲಾಗಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM + 128GB ಮತ್ತು 8GB + 256GB ಆಂತರೀಕ ಸಂಗ್ರಹ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಕ್ಯಾಮೆರಾವನ್ನು ಹೊಂದಿರಲಿದೆ. ಜೊತೆಗೆ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ. ಇನ್ನು ಇದರೊಂದಿಗೆ ಫೋಟೊ ಎಡಿಟಿಂಗ್ ಆಯ್ಕೆಗಳನ್ನು ಈ ಕ್ಯಾಮೆರಾ ಹೊಂದಿರಲಿದೆ.

ಇನ್ನು 4,100mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದ್ದು, 44W ಫ್ಲ್ಯಾಶ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆಯಂತೆ. ಹಾಗೆಯೇ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು 3.5mm ಆಡಿಯೋ ಜ್ಯಾಕ್ ಆಯ್ಕೆ ಪಡೆದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್, ಜಿಪಿಎಸ್ ಸೇರಿದಂತೆ ನೂತನ ಆಯ್ಕೆಗಳೊಂದಿಗೆ ವಿವೋ Y76 5G ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ.

Flipkart: ಫ್ಲಿಪ್​ಕಾರ್ಟ್​ನಲ್ಲಿ ಶುರುವಾಗಿದೆ ಹೊಸ ಮೇಳ: ಸ್ಮಾರ್ಟ್​ಫೋನ್ ಮೇಲಂತು ಬಂಪರ್ ಡಿಸ್ಕೌಂಟ್

(Vivo Y76 5G launch date is November 23 the company has confirmed)

Follow Us
TV9 Web
TV9 Web

TV9 Kannada

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು