Vodafone Idea: ವೊಡಾಫೋನ್-ಐಡಿಯಾ ಸಿಮ್ ಖರೀದಿಗೆ ಮುಗಿಬಿದ್ದ ಜನರು: ಇದಕ್ಕೆ ಕಾರಣ ಆ ಒಂದು ಆಫರ್

ವೊಡಾಫೋನ್-ಐಡಿಯಾದ ಆಕರ್ಷಕ ಪ್ರಯೋಜನಗಳನ್ನು ಒಳಗೊಂಡ 500ರೂ. ಗಳ ಒಳಗಿನ ಕೆಲವು ಯೋಜನೆಗಳಿಗೆ ಗ್ರಾಹಕರು ಶಾಕ್ ಆಗಿದ್ದಾರೆ. ಅದರಲ್ಲಿ 299 ರೂ. ಪ್ಲಾನ್ ಕೂಡ ಒಂದು.

Vodafone Idea: ವೊಡಾಫೋನ್-ಐಡಿಯಾ ಸಿಮ್ ಖರೀದಿಗೆ ಮುಗಿಬಿದ್ದ ಜನರು: ಇದಕ್ಕೆ ಕಾರಣ ಆ ಒಂದು ಆಫರ್
vodafone idea
Follow us
TV9 Web
| Updated By: Vinay Bhat

Updated on: Oct 30, 2021 | 2:49 PM

ದೇಶದ ಟೆಲಿಕಾಂ (Telecom) ವಲಯದಲ್ಲಿ ಹಲವು ಬದಲಾವಣೆಗಳಾಗುತ್ತಿವೆ. ಕಡಿಮೆ ಬೆಲೆಗೆ ಅಧಿಕ ಡೇಟಾ, ಅನಿಯಮಿತ ಕರೆ ಸೇರಿದಂರೆ ಅನೇಕ ಆಫರ್​ಗಳನ್ನು (Offer) ಪೈಪೋಟಿಯಂತೆ ಪ್ರಸಿದ್ಧ ಟೆಲಿಕಾಂ ಕಂಪೆನಿಗಳು ತನ್ನ ಗ್ರಾಹಕರಿಗೆ ನೀಡುತ್ತಿದೆ. ಅದರಲ್ಲಿ ಪ್ರಮುಖವಾಗಿ ವೊಡಾಫೋನ್ (Vodafone Idea) ಸಂಸ್ಥೆಯ ಹಾಗೂ ಐಡಿಯಾ ಟೆಲಿಕಾಂ ಜೊತೆಯಾದ ಬಳಿಕ ಆಕರ್ಷಕ ಪ್ಲಾನ್​ಗಳನ್ನು ಬಿಡುಗಡೆ ಮಾಡಿ ಜನರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ವೊಡಾಫೋನ್-ಐಡಿಯಾದ 299 ರೂ. ಪ್ರಿಪೇಯ್ಡ್‌ ಪ್ಲಾನ್​ಗೆ (Vi rs 299 Plan) ಜನರು ಫಿದಾ ಆಗಿದ್ದಾರೆ.

ಹೌದು, ವಿ ಟೆಲಿಕಾಂ ಭಿನ್ನ ಪ್ರೈಸ್‌ ಟ್ಯಾಗ್‌ನಲ್ಲಿ ಹಲವು ಪ್ರೀಪೇಯ್ಡ್‌ ಆಯ್ಕೆಗಳನ್ನು ನೀಡಿದೆ. ಅವುಗಳಲ್ಲಿ ಬಹುತೇಕ ಯೋಜನೆಗಳು ದೈನಂದಿನ ಡೇಟಾ ಒಳಗೊಂಡಿದ್ದು, ಜೊತೆಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿವೆ. ಮುಖ್ಯವಾಗಿ ಆಕರ್ಷಕ ಪ್ರಯೋಜನಗಳನ್ನು ಒಳಗೊಂಡ 500ರೂ. ಗಳ ಒಳಗಿನ ಕೆಲವು ಯೋಜನೆಗಳಿಗೆ ಗ್ರಾಹಕರು ಶಾಕ್ ಆಗಿದ್ದಾರೆ. ಅದರಲ್ಲಿ 299 ರೂ. ಪ್ಲಾನ್ ಕೂಡ ಒಂದು.

ವೊಡಾಫೋನ್-ಐಡಿಯಾದ ಈ 299 ರೂ. ಪ್ಲಾನ್​​ನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಜೀ5 ಓಟಿಟಿ ಚಂದಾದಾರಿಕೆ, ವೀಲೆಂಟ್ ಡೇಟಾ ರೋಲ್‌ ಓವರ್, ವಿ ಮೂವಿಸ್ ಹಾಗೂ ಟಿವಿ ಸೌಲಭ್ಯಗಳು ಸಿಗಲಿರುವುದು ವಿಶೇಷ.

ಇದರ ಜೊತೆಗೆ ವಿ ಟೆಲಿಕಾಂನ 399ರೂ. ಪ್ರಿಪೇಯ್ಡ್‌ ಪ್ಲಾನ್​ ಕೂಡ ಇದೆ. ಇದರಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟ್​ವರ್ಕ್​ಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲಾನಿನಲ್ಲಿ ಬಳಕೆದಾರರು ಹೆಚ್ಚುವರಿ 5GB ಡೇಟಾವನ್ನು ಪಡೆಯಬಹುದು.

501 ರೂ. ಪ್ರಿಪೇಯ್ಡ್‌ ಪ್ಲಾನ್ ಕೂಡ ಉತ್ತಮವಾಗಿದೆ. ಇದು ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಯೋಜನೆಯಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16GB ಡೇಟಾ ಲಭ್ಯವಾಗಲಿದೆ.

JioPhone Next: ರಿವೀಲ್ ಆಯ್ತು ಜಿಯೋಫೋನ್‌ ನೆಕ್ಸ್ಟ್‌ ಸ್ಮಾರ್ಟ್​ಫೋನ್ ಬೆಲೆ: ದೀಪಾವಳಿಯಂದು ಖರೀದಿಗೆ ಲಭ್ಯ

WhatsApp: ನವೆಂಬರ್ 1 ರಿಂದ ಈ ಸ್ಮಾರ್ಟ್​ಫೋನ್​ಗಳಲ್ಲಿ ವಾಟ್ಸ್​ಆ್ಯಪ್​ ಬಂದ್: ನಿಮ್ಮ ಫೋನ್ ಕೂಡ ಇದೆಯೇ?

(Vodafone Idea or Vi Rs 299 plan offers double data benefits it gives 4GB daily data with call SMS benefits)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್