Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ನೀವು ವಾಟ್ಸ್​ಆ್ಯಪ್​ನಲ್ಲಿ ಆ ರೀತಿಯ ವಿಡಿಯೋ ಕಳುಹಿಸುತ್ತೀರಾ?: ಹಾಗಿದ್ರೆ ತಪ್ಪದೇ ಈ ಸ್ಟೋರಿ ಓದಿ

WhatsApp Ban: ವಾಟ್ಸ್​ಆ್ಯಪ್ ಕಳೆದ ಕೆಲವು ತಿಂಗಳುಗಳಿಂದ ಬಳಕೆದಾರರು ನೀಡುತ್ತಿರುವ ದೂರನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದು ಕಠಿಣ ಕ್ರಮಗಳನ್ನು ಕೂಡ ಕೈಗೊಳ್ಳುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಜನವರಿ ತಿಂಗಳಿನಲ್ಲಿ ಭಾರತದ 18,58,000 ವಾಟ್ಸ್​ಆ್ಯಪ್ (WhatsApp)​ ಖಾತೆಗಳನ್ನು ನಿಷೇಧ ಮಾಡಿದೆ.

WhatsApp: ನೀವು ವಾಟ್ಸ್​ಆ್ಯಪ್​ನಲ್ಲಿ ಆ ರೀತಿಯ ವಿಡಿಯೋ ಕಳುಹಿಸುತ್ತೀರಾ?: ಹಾಗಿದ್ರೆ ತಪ್ಪದೇ ಈ ಸ್ಟೋರಿ ಓದಿ
WhatsApp
Follow us
TV9 Web
| Updated By: Vinay Bhat

Updated on: Mar 03, 2022 | 12:55 PM

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ಆಕರ್ಷಕ ಫೀಚರ್​ಗಳನ್ನು ಪರಚಯಿಸುತ್ತಾ ಇರುತ್ತದೆ. ಇದರ ಜೊತೆಗೆ ಕಳೆದ ಕೆಲವು ತಿಂಗಳುಗಳಿಂದ ಬಳಕೆದಾರರು ನೀಡುತ್ತಿರುವ ದೂರನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದು ಕಠಿಣ ಕ್ರಮಗಳನ್ನು ಕೂಡ ಕೈಗೊಳ್ಳುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಜನವರಿ ತಿಂಗಳಿನಲ್ಲಿ ಭಾರತದ 18,58,000 ವಾಟ್ಸ್​ಆ್ಯಪ್ (WhatsApp)​ ಖಾತೆಗಳನ್ನು ನಿಷೇಧ ಮಾಡಿದೆ. ಐಟಿ ನಿಯಮಗಳಿಗೆ ಅನುಸಾರವಾಗಿ ಈ ಅಕೌಂಟ್‌ಗಳನ್ನು ಬ್ಯಾನ್‌ ಮಾಡಲಾಗಿದೆ. ವಾಟ್ಸ್​ಆ್ಯಪ್​ ನೀತಿಗಳ ಉಲ್ಲಂಘನೆಯಿಂದಾಗಿ ಹೆಚ್ಚಿನ ಖಾತೆಗಳನ್ನು ನಿಷೇಧಿಸಲಾಗಿದೆಯಾದರೂ, ಭಾರತದಲ್ಲಿನ ಇತರ ಬಳಕೆದಾರರು ವರದಿ ಮಾಡುವ ಕುಂದುಕೊರತೆಗಳ ಮೇಲೆ ಅಕೌಂಟ್‌ ಬ್ಯಾನ್‌ ಮಾಡುವ ಕ್ರಮ ತೆಗೆದುಕೊಳ್ಳುತ್ತದೆ. ಇತ್ತೀಚಿನ ವರದಿಯ ಪ್ರಕಾರ 2,069,000 ಕ್ಕೂ ಅಧಿಕ ಭಾರತೀಯರ ವಾಟ್ಸ್​ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ (WhatsApp Bans) ಎಂದು ಕಂಪನಿ ಹೇಳಿದೆ.

ವಾಟ್ಸ್​ಆ್ಯಪ್​​ ಜನವರಿ ತಿಂಗಳ ಮಾಸಿಕ ವರದಿಯಲ್ಲಿ, ಸೊಶೀಯಲ್‌ ಮೀಡಿಯಾ ನಿಯಮ ಉಲ್ಲಂಘನೆ ಜೊತೆಗೆ ವಾಟ್ಸ್​ಆ್ಯಪ್​​ನಿಯಮಗಳನ್ನು ಉಲ್ಲಂಘಿಸಿರುವವರ ಖಾತೆಗಳನ್ನು ನಿಷೇದಿಸಲಾಗಿದೆ ಎಂದು ಹೇಳಿದೆ. ಅಲ್ಲದೆ ವಾಟ್ಸ್​ಆ್ಯಪ್​​ನಲ್ಲಿ ಬಳಕೆದಾರರು ಮಾಡುವ ರಿಪೋರ್ಟ್‌ ಆಧಾರದ ಮೇಲೂ ಕೂಡ ಅನೇಕ ಅಕೌಂಟ್‌ಗಳನ್ನು ನಿಷೇಧ ಮಾಡಿದೆ. ಭಾರತದಲ್ಲಿ ಹೊಸ ಐಟಿ ನಿಯಮ ಜಾರಿಗೆ ಬಂದ ನಂತರ ಪ್ರತಿ ತಿಂಗಳು ಕೂಡ ಕುಂದುಕೊರತೆಯ ವರದಿ ನೀಡುವುದು ಕಡ್ಡಾಯವಾಗಿದೆ. ಅದರಂತೆ ವಾಟ್ಸ್​ಆ್ಯಪ್​​ ಜನವರಿ ತಿಂಗಳ ಅವಧಿಯಲ್ಲಿ ತಾನು ತೆಗೆದುಕೊಂಡ ನಿರ್ಧಾರಗಳ ಬಗ್ಗೆ ವರದಿಯಲ್ಲಿ ತಿಳಿಸಿದೆ.

ಬ್ಯಾನ್ ಆಗಲು ಕಾರಣವೇನು?:

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, “ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ. ವರ್ಷಗಳಲ್ಲಿ, ನಮ್ಮ ಬಳಕೆದಾರರನ್ನು ನಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಸುರಕ್ಷಿತವಾಗಿರಿಸಲು ನಾವು ಕೃತಕ ಬುದ್ಧಿಮತ್ತೆ ಮತ್ತು ಇತರ ಅತ್ಯಾಧುನಿಕ ತಂತ್ರಜ್ಞಾನ, ಡೇಟಾ ವಿಜ್ಞಾನಿಗಳು, ತಜ್ಞರು ಮತ್ತು ಇನ್ನಿತರ ಪ್ರಕ್ರಿಯೆಗಳಲ್ಲಿ ಸತತವಾಗಿ ಹೂಡಿಕೆ ಮಾಡಿದ್ದೇವೆ” ಎಂದಿದ್ದಾರೆ.

ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು. ಹೀಗಾಗಿ ಎಚ್ಚರದಿಂದಿರಿ.

ಪ್ರಮುಖವಾಗಿ ನೀವು ತುಂಬಾ ಖಾಸಾಗಿ ವಿಷಯಗಳನ್ನು ಯಾವುದೇ ಕಾರಣಕ್ಕೂ ವಾಟ್ಸ್​ಆ್ಯಪ್​ನಲ್ಲಿ ಹಂಚಿಕೊಳ್ಳಬೇಡಿ. ಒಂದು ವೇಳೆ ನೀವು ವಾಟ್ಸ್​ಆ್ಯಪ್​ನಲ್ಲಿ ಅಶ್ಲೀಲ (ಪೋರ್ನ್ ವಿಡಿಯೋ) ವಿಡಿಯೋಗಳನ್ನು ಕಳುಹಿಸಿದರೆ ನಿಮ್ಮನ್ನು ಜೈಲಿಗೆ ತಳ್ಳಬಹುದು. ಅಂತಹ ವಿಡಿಯೋಗಳನ್ನು ಕಳುಹಿಸುವಾಗ ನಿಮ್ಮ ಸಂಖ್ಯೆಯನ್ನು ಯಾರಾದರೂ ವರದಿ ಮಾಡಿದರೆ, ನಿಮ್ಮ ಖಾತೆಯನ್ನು ಸಹ ನಿಷೇಧಿಸಬಹುದು.

ಇದರ ನಡುವೆಯೇ ಬಳಕೆದಾರರಿಗೆ ಆಕರ್ಷಕ ಫೀಚರ್​ಗಳನ್ನು ನೀಡಲು ವಾಟ್ಸ್​ಆ್ಯಪ್ ಮುಂದಾಗಿದೆ. ವಾಟ್ಸ್​ಆ್ಯಪ್​​ ಕಾಲ್‌ನಲ್ಲಿ ಸೇರ್ಪಡೆ ಆಗಲು ಕಾಲ್ಸ್‌ ಲಿಂಕ್​​​ಗಳನ್ನು ಕ್ರಿಯೆಟ್‌ ಮಾಡಲು ಅವಕಾಶ ನೀಡಲಿದೆ. ಇದರಿಂದ ವಾಟ್ಸಾಪ್‌ ಕಾಲ್‌ ಅನ್ನು ಕಾಲ್ಸ್‌ ಲಿಂಕ್‌ ಮೂಲಕವೇ ಸೇರಬಹುದಾಗಿದೆ. ಗ್ರೂಪ್‌ ಕಾಲ್‌ ಹೋಸ್ಟ್‌ ಮಾಡುವವರು ಕಾಲ್ಸ್‌ ಲಿಂಕ್‌ ಮೂಲಕ ತಮ್ಮ ಸ್ನೇಹಿತರನ್ನು ಇನ್ವೈಟ್‌ ಮಾಡಲು ಸಾಧ್ಯವಾಗಲಿದೆ. ಅಂದರೆ ಗೂಗಲ್ ಮೀಟ್ ಲಿಂಕ್ ಮಾದರಿಯಲ್ಲಿ ಇದೆ ಇರಲಿದೆ. ವಾಟ್ಸ್​ಆ್ಯಪ್ ಪರಿಚಯಿಸಲು ಹೊರಟಿರುವ ಮತ್ತೊಂದು ಹೊಸ ಅಪ್ಡೇಟ್ ಕವರ್ ಫೋಟೋ. ನೀವು ಫೇಸ್​ಬುಕ್​ನಲ್ಲಿ ಕವರ್ ಫೋಟೋ ಆಯ್ಕೆಯನ್ನು ನೋಡಿರುತ್ತೀರಿ. ಸದ್ಯದಲ್ಲೇ ಇದೇರೀತಿಯ ಆಯ್ಕೆ ವಾಟ್ಸ್​ಆ್ಯಪ್​​ನಲ್ಲೂ ಸಿಗಲಿದೆ. ವಾಟ್ಸ್​ಆ್ಯಪ್ ಬೇಟಾಇನ್​ಫೋ ವರದಿ ಪ್ರಕಾರ, ಈ ಆಯ್ಕೆ ವಾಟ್ಸ್​ಆ್ಯಪ್ ಪ್ರೊಫೈಲ್​ನಲ್ಲಿ ಕಾಣಲಿದೆಯಂತೆ.

One Plus Nord 3: ಕೇವಲ 15 ನಿಮಿಷಗಳಲ್ಲಿ ಫುಲ್ ಚಾರ್ಜ್: ಒನ್​ಪ್ಲಸ್ ಬಿಡುಗಡೆ ಮಾಡುತ್ತಿದೆ ಅಚ್ಚರಿಯ ಫೋನ್

Best Gaming Smartphone: ಗೇಮಿಂಗ್ ಪ್ರಿಯರಿಗಾಗಿ 15000 ರೂ. ಒಳಗೆ ಸಿಗುತ್ತಿದೆ ಈ ಸ್ಮಾರ್ಟ್​ಫೋನ್​ಗಳು

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು