WhatsApp Ban: ಶಾಕಿಂಗ್: ಭಾರತದ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್

WhatsApp Ban: ವಾಟ್ಸ್​ಆ್ಯಪ್ ಬಳಕೆದಾರರ ದೂರುಗಳಿಗೆ ಸಂಬಂಧಿಸಿದಂತೆ ವಿವರಗಳನ್ನು ಪರಿಗಣಿಸಿ, ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಅಕೌಂಟ್ ಬ್ಯಾನ್ ಮಾಡುತ್ತಿದೆ. ಅದರಂತೆ ಇದೀಗ 75 ಲಕ್ಷ ಖಾತೆಗಳನ್ನು ಬ್ಯಾನ್ ಮಾಡುವ ನಿರ್ಧಾರವನ್ನು ವಾಟ್ಸ್​ಆ್ಯಪ್ ತೆಗೆದುಕೊಂಡಿದೆ.

WhatsApp Ban: ಶಾಕಿಂಗ್: ಭಾರತದ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್
whatsapp ban
Follow us
|

Updated on: Dec 05, 2023 | 12:30 PM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ (WhatsApp) ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಈ ವರ್ಷದ ಅಕ್ಟೋಬರ್ 1 ರಿಂದ 31 ರ ನಡುವೆ ಒಟ್ಟು 7,548,000 ಖಾತೆಗಳನ್ನು ನಿಷೇಧಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 19,19,000 ಬಳಕೆದಾರರ ವರದಿಗಳ ನಂತರ ಈ ಖಾತೆಗಳನ್ನು ನಿಷೇಧಿಸುವ ನಿರ್ಧಾರವನ್ನು ವಾಟ್ಸ್​ಆ್ಯಪ್ ತೆಗೆದುಕೊಂಡಿದೆ.

ಅಕ್ಟೋಬರ್ ತಿಂಗಳಲ್ಲಿ ವಾಟ್ಸ್​ಆ್ಯಪ್ ದೇಶದಲ್ಲಿ ದಾಖಲೆಯ 9063 ದೂರುಗಳನ್ನು ಸ್ವೀಕರಿಸಿದೆ ಎಂದು ಹೇಳಿದೆ. ಇವುಗಳಲ್ಲಿ ಖಾತೆಗಳನ್ನು ನಿಷೇಧಿಸುವುದು ಅಥವಾ ಹಿಂದೆ ನಿಷೇಧಿತ ಖಾತೆಯನ್ನು ಪುನಃ ಸಕ್ರಿಯಗೊಳಿಸುವುದು ಸೇರಿದೆ. ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.

12GB RAM ಹೊಂದಿರುವ ಈ 5G ಸ್ಮಾರ್ಟ್​ಫೋನ್ ಬೆಲೆ ಕೇವಲ 9,999 ರೂ. ಎಂದರೆ ನಂಬಲೇಬೇಕು

ಇದನ್ನೂ ಓದಿ
Image
ಕೇವಲ 6,999 ರೂ. ಗಳಿಗೆ ಬಿಡುಗಡೆ ಆಯಿತು ಐಫೋನ್​ನಂತಹ ಸ್ಮಾರ್ಟ್​ಫೋನ್: ಖರೀದ
Image
ಹೊಸ ಮೊಬೈಲ್ ಖರೀದಿಸುವ ಮುನ್ನ ಏನೆಲ್ಲ ಚೆಕ್ ಮಾಡಬೇಕು?: ಇಲ್ಲಿದೆ ಮಾಹಿತಿ
Image
ಬೆಂಗಳೂರಿಗರೇ ಗಮನಿಸಿ: ಓಲಾ ಆ್ಯಪ್​ನಲ್ಲಿ ಬಂದಿದೆ ಹೊಸ ಫೀಚರ್
Image
ಡಿಸೆಂಬರ್​ನಲ್ಲಿ ಮಾರುಕಟ್ಟೆಗೆ ಎಷ್ಟು ಸ್ಮಾರ್ಟ್​ಫೋನ್​ಗಳು ಬರಲಿವೆ?

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ.

ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ