WhatsApp Ban: ಶಾಕಿಂಗ್: ಭಾರತದ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್

ಕಳೆದ ವರ್ಷ ನವೆಂಬರ್ 1 ಮತ್ತು ನವೆಂಬರ್ 30 ರ ನಡುವೆ ವಾಟ್ಸ್​ಆ್ಯಪ್ ಭಾರತದಲ್ಲಿ 71,96,000 ಖಾತೆಗಳನ್ನು ನಿಷೇಧಿಸಿದೆ. ನವೆಂಬರ್ ತಿಂಗಳಲ್ಲಿ ವಾಟ್ಸ್​ಆ್ಯಪ್ ದೇಶದಲ್ಲಿ ದಾಖಲೆಯ 8841 ದೂರುಗಳನ್ನು ಸ್ವೀಕರಿಸಿದೆ ಎಂದು ಹೇಳಿದೆ. ಇವುಗಳಲ್ಲಿ ಖಾತೆಗಳನ್ನು ನಿಷೇಧಿಸುವುದು ಅಥವಾ ಹಿಂದೆ ನಿಷೇಧಿತ ಖಾತೆಯನ್ನು ಪುನಃ ಸಕ್ರಿಯಗೊಳಿಸುವುದು ಸೇರಿದೆ.

WhatsApp Ban: ಶಾಕಿಂಗ್: ಭಾರತದ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್
whatsapp ban
Follow us
|

Updated on: Jan 02, 2024 | 12:24 PM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ (WhatsApp) ಕಳೆದ ನವೆಂಬರ್ ತಿಂಗಳಲ್ಲಿ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಕಳೆದ ವರ್ಷ ನವೆಂಬರ್ 1 ಮತ್ತು ನವೆಂಬರ್ 30 ರ ನಡುವೆ 71,96,000 ಖಾತೆಗಳನ್ನು ನಿಷೇಧಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರಿಂದ ಸ್ವೀಕರಿಸಿದ 8,000 ಕ್ಕೂ ಹೆಚ್ಚು ಕುಂದುಕೊರತೆಗಳ ಮೇಲೆ ಈ ಖಾತೆಗಳನ್ನು ನಿಷೇಧಿಸುವ ನಿರ್ಧಾರವನ್ನು ವಾಟ್ಸ್​ಆ್ಯಪ್ ತೆಗೆದುಕೊಂಡಿದೆ.

ನವೆಂಬರ್ ತಿಂಗಳಲ್ಲಿ ವಾಟ್ಸ್​ಆ್ಯಪ್ ದೇಶದಲ್ಲಿ ದಾಖಲೆಯ 8841 ದೂರುಗಳನ್ನು ಸ್ವೀಕರಿಸಿದೆ ಎಂದು ಹೇಳಿದೆ. ಇವುಗಳಲ್ಲಿ ಖಾತೆಗಳನ್ನು ನಿಷೇಧಿಸುವುದು ಅಥವಾ ಹಿಂದೆ ನಿಷೇಧಿತ ಖಾತೆಯನ್ನು ಪುನಃ ಸಕ್ರಿಯಗೊಳಿಸುವುದು ಸೇರಿದೆ. ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ. ಕಳೆದ ಅಕ್ಟೋಬರ್ 1 ರಿಂದ 31 ರ ನಡುವೆ ಒಟ್ಟು 7,548,000 ಖಾತೆಗಳನ್ನು ನಿಷೇಧಿಸಲಾಗಿತ್ತು.

Smartphones 2023: ಹೊಸ ವರ್ಷಕ್ಕೆ ಸ್ವಾಗತ: ಜನವರಿಯಲ್ಲಿ ಬಿಡುಗಡೆ ಆಗಲಿರುವ ಸ್ಮಾರ್ಟ್​ಫೋನ್ಸ್ ಪಟ್ಟಿ ಇಲ್ಲಿದೆ

ಇದನ್ನೂ ಓದಿ
Image
ಸೈಲೆಂಟ್ ಆಗಿ ರಿಲೀಸ್ ಆಯಿತು ಹುವೈ ನೋವಾ Y62 ಸರಣಿ: ಏನಿದೆ ಫೀಚರ್ಸ್?
Image
ವಾಟ್ಸ್​ಆ್ಯಪ್​ನಿಂದ ಫೋನ್ ಸ್ಟೋರೇಜ್ ಫುಲ್ ಆಗುವ ಸಮಸ್ಯೆಗೆ ಇಲ್ಲಿದೆ ಪರಿಹಾರ
Image
ಐಫೋನ್‌ನ ಈ ಎರಡು ಸೆಟ್ಟಿಂಗ್‌ಗಳು ಅಪಾಯಕಾರಿ: ತಕ್ಷಣ ಆಫ್ ಮಾಡಿ
Image
ಕಳೆದ ವಾರ ಬಿಡುಗಡೆ ಆದ ಪೋಕೋ M6 5G ಫೋನ್ ಮೇಲೆ ಬಂಪರ್ ಡಿಸ್ಕೌಂಟ್

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ.

ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ