AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಕಿಂಗ್: ಭಾರತದ ಬರೋಬ್ಬರಿ 72 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ

WhatsApp banned over 72 lakh accounts: ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 7,228,000 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಮೇ ತಿಂಗಳಲ್ಲಿ ಕೂಡ ಭಾರತದಲ್ಲಿ 6,508,000 ಖಾತೆಗಳನ್ನು ನಿಷೇಧಿಸಿದೆ.

ಶಾಕಿಂಗ್: ಭಾರತದ ಬರೋಬ್ಬರಿ 72 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ
WhatsApp
Vinay Bhat
|

Updated on: Sep 05, 2023 | 12:25 PM

Share

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ (WhatsApp) ಕಳೆದ ಜುಲೈ ತಿಂಗಳಲ್ಲಿ ಬರೋಬ್ಬರಿ 72 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಜುಲೈ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 7,228,000 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಮೇ ತಿಂಗಳಲ್ಲಿ ಕೂಡ ಭಾರತದಲ್ಲಿ 6,508,000 ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು.

ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ. ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು.

ಬಹುನಿರೀಕ್ಷಿತ ರಿಯಲ್ ಮಿ ನಾರ್ಜೊ 60x ಫೋನ್ ಬಿಡುಗಡೆ ದಿನಾಂಕ ಪ್ರಕಟ: ಯಾವಾಗ?, ಬೆಲೆ ಎಷ್ಟು?

ಇದನ್ನೂ ಓದಿ
Image
ಡಿಲೀಟ್‌ ಮಾಡಲಾದ ನಿಮ್ಮ ಫೋಟೋಗಳನ್ನು ರಿಸ್ಟೋರ್‌ ಮಾಡುವುದು ಹೇಗೆ?
Image
ಇಂದಿನಿಂದ ಐಕ್ಯೂ Z7 ಪ್ರೊ 5G ಸ್ಮಾರ್ಟ್​ಫೋನ್ ಖರೀದಿಗೆ ಲಭ್ಯ
Image
ನಿಮ್ಮ ಹೆಸರಿನಲ್ಲಿ ಬೇರೆಯವರು ಸಿಮ್ ಕಾರ್ಡ್ ಖರೀದಿಸಿದ್ದಾರೆಯೇ?
Image
ಬಜೆಟ್ ಪ್ರಿಯರಿಗಾಗಿ ಬಂತು ಬೊಂಬಾಟ್ ಸ್ಮಾರ್ಟ್​ಫೋನ್: ರಿಯಲ್ ಮಿ C51 ಬಿಡುಗಡ

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ. ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.

ವಾಟ್ಸ್​ಆ್ಯಪ್​ನಲ್ಲಿ ಇ-ಮೇಲ್ ವೆರಿಫಿಕೇಷನ್ ಫೀಚರ್:

ಸದ್ಯದಲ್ಲೇ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ಹೊಸ ಇ-ಮೇಲ್ ವೆರಿಫಿಕೇಷನ್ ಫೀಚರ್​ನ ಪ್ರಯೋಜನ ಪಡೆಯಲಿದ್ದಾರೆ. WABetaInfo ವರದಿ ಮಾಡಿದಂತೆ, ವಾಟ್ಸ್​ಆ್ಯಪ್ ಇ-ಮೇಲ್ ಐಡಿಯನ್ನು ಬಳಸಿಕೊಂಡು ನಿಮ್ಮ ಖಾತೆಯನ್ನು ರಕ್ಷಿಸಲು ಹೊಸ ಭದ್ರತಾ ವೈಶಿಷ್ಟ್ಯದ ರೂಪದಲ್ಲಿ ಈ ಆಯ್ಕೆಯನ್ನು ನೀಡಲು ಮುಂದಾಗಿದೆ. ಇದರಿಂದ ನಿಮ್ಮ ಖಾತೆ ಮತ್ತಷ್ಟು ಭದ್ರತೆಯಿಂದ ಕೂಡಿರುತ್ತದೆ. ಈ ವೈಶಿಷ್ಟ್ಯವು ಪರೀಕ್ಷಾ ಹಂತದಲ್ಲಿದೆ ಮತ್ತು ಇದು ಆಂಡ್ರಾಯ್ಡ್​ನ ಬೀಟಾ ಪರೀಕ್ಷಕರಿಗೆ ಲಭ್ಯವಿದೆ. ಈ ಫೀಚರ್ ಅನ್ನು ವಾಟ್ಸ್​ಆ್ಯಪ್ ಬೀಟಾ ಆವೃತ್ತಿ ಸಂಖ್ಯೆ 2.23.18.19 ರ ಮೂಲಕ ಪ್ರವೇಶಿಸಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ