WhatsApp Ban: ಭಾರತದಲ್ಲಿ 29 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ: ತಪ್ಪಿಯೂ ಹೀಗೆ ಮಾಡಬೇಡಿ

ಜನವರಿ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 2,918,000 ಕ್ಕೂ ಅಧಿಕ ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ.

WhatsApp Ban: ಭಾರತದಲ್ಲಿ 29 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ: ತಪ್ಪಿಯೂ ಹೀಗೆ ಮಾಡಬೇಡಿ
WhatsApp
Follow us
Vinay Bhat
|

Updated on: Mar 02, 2023 | 11:16 AM

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಜನವರಿ ತಿಂಗಳಲ್ಲಿ 29 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಜನವರಿ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ (WhatsApp) ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 2,918,000 ಕ್ಕೂ ಅಧಿಕ ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ (Ban) ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಡಿಸೆಂಬರ್ ತಿಂಗಳಲ್ಲಿ ಕೂಡ ಭಾರತದಲ್ಲಿ 37 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು.

ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ. ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು.

0888888888: ಈ ಫೋನ್ ನಂಬರ್ ಬ್ಯಾನ್ ಆಗಲು ಕಾರಣ ಕೇಳಿದ್ರೆ ನೀವು ಶಾಕ್ ಆಗ್ತೀರಾ

ಇದನ್ನೂ ಓದಿ
Image
Xiaomi 13 Pro vs Xiaomi 13: ಶಓಮಿ ಯಾವ ಸ್ಮಾರ್ಟ್​ಫೋನ್ ಬೆಸ್ಟ್?
Image
Twitter Down: ಟ್ವಿಟರ್ ಓಪನ್ ಆಗುತ್ತಿಲ್ಲ ಎಂದು ವರದಿ ಮಾಡಿದ ಬಳಕೆದಾರರು
Image
Internet Shutdown: ಜಗತ್ತಿನಲ್ಲೇ ಅತ್ಯಧಿಕ ಇಂಟರ್​ನೆಟ್ ಸಂಪರ್ಕ ಸ್ಥಗಿತವಾಗಿರುವುದು ಭಾರತದಲ್ಲಿ- ಇಲ್ಲಿದೆ ವಿವರ
Image
Robotic Elephant: ಕೇರಳದ ಕೃಷ್ಣ ದೇಗುಲಕ್ಕೆ ರೋಬೋಟಿಕ್ ಆನೆ, ಜೀವಂತ ಆನೆಗಳಿಂದ ದೂರ ಉಳಿದಿದ್ದೇಕೆ?

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ. ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.

ವಾಟ್ಸ್​ಆ್ಯಪ್​ನಲ್ಲಿ ಶೆಡ್ಯುಲ್‌ ಫೀಚರ್:

ವಾಟ್ಸ್​ಆ್ಯಪ್ ಇದೀಗ ಕರೆಯನ್ನು ಶೆಡ್ಯುಲ್‌ ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಬಳಕೆದಾರರು ಮುಂಚಿತವಾಗಿಯೇ ಕರೆಯನ್ನು ನಿಗದಿಪಡಿಸುವ ಸಮಯಕ್ಕೆ ಮಾಡಬಹುದಾಗಿದೆ. ಈ ಮೂಲಕ ಪ್ರಮುಖ ಸಂಭಾಷಣೆಯನ್ನು ಯಾರೂ ಸಹ ಮಿಸ್‌ ಮಾಡಿಕೊಳ್ಳುವ ಸಂಭವ ಇರುವುದಿಲ್ಲ ಎಂದು ಸಂಸ್ಥೆ ಹೇಳಿದೆ. ಅಷ್ಟೇ ಅಲ್ಲದೆ ಯಾರನ್ನಾದರೂ ಕೆಲಸಕ್ಕೆ ನೇಮಿಸಿಕೊಳ್ಳಲು ಸಂದರ್ಶನ ಮಾಡಬೇಕು ಎಂದಿದ್ದರೆ, ಈ ವೇಳೆ ಸಂದರ್ಶಕರು ಸಂದರ್ಶನಕ್ಕೆ ಹಾಜರಾಗುವ ವ್ಯಕ್ತಿ ಜೊತೆ ಯಾವ ಸಮಯದಲ್ಲಿ ಮಾತನಾಡಬೇಕು ಎಂಬುದನ್ನು ಶೆಡ್ಯುಲ್‌ ಮಾಡಬಹುದು. ಮೊದಲಿಗೆ ಈ ಶೆಡ್ಯುಲ್‌ ಕರೆ ಸೌಲಭ್ಯ ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿರಲಿದ್ದು, ನಂತರದಲ್ಲಿ ಐಒಎಸ್ ಬಳಕೆದಾರರಿಗೂ ಸಿಗಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್