WhatsApp Ban: ಭಾರತದಲ್ಲಿ ಬರೋಬ್ಬರಿ 45 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ: ಎಚ್ಚರ ವಹಿಸಿ

|

Updated on: Apr 02, 2023 | 1:43 PM

ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 4,597,400 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ (Ban) ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ.

WhatsApp Ban: ಭಾರತದಲ್ಲಿ ಬರೋಬ್ಬರಿ 45 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ: ಎಚ್ಚರ ವಹಿಸಿ
WhatsApp
Follow us on

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಫೆಬ್ರವರಿ ತಿಂಗಳಲ್ಲಿ ಬರೋಬ್ಬರಿ 45 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಫೆಬ್ರವರಿ 01-28ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ (WhatsApp) ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 4,597,400 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ (Ban) ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಜನವರಿ ತಿಂಗಳಲ್ಲಿ ಕೂಡ ಭಾರತದಲ್ಲಿ 29 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು.

ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ. ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು.

WhatsApp: ವಾಟ್ಸ್ಆ್ಯಪ್​​ನಲ್ಲಿರುವ ಈ ಹಿಡನ್ ಫೀಚರ್ ಬಳಸಿದ್ದೀರಾ?: ಇಲ್ಲಿದೆ ನೋಡಿ

ಇದನ್ನೂ ಓದಿ
OnePlus 10R 5G: 150W SuperVOOC ಚಾರ್ಜರ್​ನ ಒನ್​ಪ್ಲಸ್‌ 10R ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಆಫರ್ ಮಿಸ್ ಮಾಡ್ಬೇಡಿ
boAt Lunar Connect Pro: ಸ್ಟೈಲಿಶ್ ಜತೆಗೆ ಸ್ಮಾರ್ಟ್ ವಾಚ್ ಪ್ರಿಯರಿಗಾಗಿ ಹೊಸ ಬೋಟ್ ವಾಚ್
Oppo A1x 5G: ಭರ್ಜರಿ 5,000mAh ಬ್ಯಾಟರಿಯ ಒಪ್ಪೊ ಸ್ಮಾರ್ಟ್​ಫೋನ್
Redmi 12C: ಬೆಸ್ಟ್​ ಫೋನ್ ಬೆಸ್ಟ್ ಬಜೆಟ್ ದರ ಶಓಮಿ ರೆಡ್ಮಿ 12C

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ. ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.

ವಾಟ್ಸ್​ಆ್ಯಪ್​ನಿಂದ ಬರುತ್ತೆ ವಿಶೇಷ ಮೆಸೇಜ್:

ಬಳಕೆದಾರರಿಗೆ ಬಹಳ ಉಪಯುಕ್ತವಾದ ಫೀಚರ್ ಒಂದನ್ನು ಪರಿಚಯಿಸಲು ವಾಟ್ಸ್​ಆ್ಯಪ್ ಮುಂದಾಗಿದೆ. ಅಂದರೆ ನಿಮ್ಮ ಖಾತೆಗೆ ವಾಟ್ಸ್​ಆ್ಯಪ್​ನಿಂದ ಮೆಸೇಜ್ ಬರಲಿದ್ದು, ಇದರಲ್ಲಿ ಅನೇಕ ಮಾಹಿತಿಗಳನ್ನು ನೀಡಲಾಗುತ್ತದೆ. ಉದಾಹರಣೆಗೆ ಕಂಪನಿ ಮುಂದಿನ ದಿನಗಳಲ್ಲಿ ಪರಿಚಯಿಸಲಿರುವ ಹೊಸ ಅಪ್ಡೇಟ್ ಬಗ್ಗೆ ಅಥವಾ ನೂತನ ಫೀಚರ್ ಕುರಿತು ಮೆಸೇಜ್ ಕಳುಹಿಸಿ ಮಾಹಿತಿ ನೀಡಲಿದೆ. ಇದು ವಾಟ್ಸ್​ಆ್ಯಪ್​ನ ಅಧಿಕೃತ ಚಾಟ್ ಆಗಿದ್ದು ವೆರಿಫೈ ಮಾರ್ಕ್ ಕೂಡ ಇರಲಿದೆ. ಬಳಕೆದಾರರಿಗೆ ವಾಟ್ಸ್​ಆ್ಯಪ್ ಅನ್ನು ಹೇಗೆ ಉಪಯೋಗಿಸ ಬೇಕು ಎಂಬುವುದರಿಂದ ಹಿಡಿದು ಕೆಲ ಟಿಪ್ಸ್​ಗಳನ್ನು ಕೂಡ ನೀಡಲಿದೆಯಂತೆ. ಸದ್ಯಕ್ಕೆ ಈ ಆಯ್ಕೆ ಪರೀಕ್ಷಾ ಹಂತದಲ್ಲಿದ್ದು ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಲಭ್ಯವಾಗಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:43 pm, Sun, 2 April 23