WhatsApp Ban: ಮಾರ್ಚ್ ತಿಂಗಳಲ್ಲಿ ಭಾರತದ 47 ಲಕ್ಷ ವಾಟ್ಸ್‌ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ
ಬ್ಯಾನ್ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.
ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್‌ಆ್ಯಪ್ ಮಾರ್ಚ್ ತಿಂಗಳಲ್ಲಿ ಬರೋಬ್ಬರಿ 47 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್‌ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಮಾರ್ಚ್ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್‌ಆ್ಯಪ್ (WhatsApp) ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 4,715,906 ವಾಟ್ಸ್‌ಆ್ಯಪ್ ಖಾತೆಗಳನ್ನು ಬ್ಯಾನ್ (Ban) ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಫೆಬ್ರವರಿ ತಿಂಗಳಲ್ಲಿ ಕೂಡ ಭಾರತದಲ್ಲಿ 46 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್‌ಆ್ಯಪ್ ಹೇಳಿತ್ತು.
ಬ್ಯಾನ್ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ. ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು.
ವಾಟ್ಸ್‌ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್‌ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ. ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.
ವಿಡಿಯೋ ಮೆಸೇಜ್:
ಸದ್ಯದಲ್ಲೇ ವಾಟ್ಸ್‌ಆ್ಯಪ್ ತನ್ನ ಬಳಕೆದಾರರಿಗೆ ವಿಡಿಯೋ ಮೆಸೇಜ್ ಫೀಚರ್ ಅನ್ನು ನೀಡಲಿದೆ. ವಾಟ್ಸ್‌ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ಬಳಕೆದಾರರು ತಮ್ಮ ಕಾಂಟೆಕ್ಟ್ನಲ್ಲಿ 60 ಸೆಕೆಂಡುಗಳವರೆಗೆ ಶಾರ್ಟ್ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಮತ್ತು ಹಂಚಿಕೊಳ್ಳುವ ಫೀಚರ್ ಅನ್ನು ಅಭಿವೃದ್ದಿ ಪಡಿಸುತ್ತಿದೆ ಎಂದು ಹೇಳಿದೆ. ಇದಕ್ಕೆ ವಿಡಿಯೋ ಮೆಸೇಜ್ ಎಂದು ಹೆಸರಿಡಲಾಗಿದೆ. ವಾಟ್ಸ್ಆ್ಯಪ್ನಲ್ಲಿ ವಿಡಿಯೋ ಶೇರ್ ಮಾಡುವುದು ಮತ್ತು ಈ ವಿಡಿಯೋ ಮೆಸೇಜ್ ಬೇರೆ ಬೇರೆ ಆಗಿದೆ. ಹೊಸ ಆಯ್ಕೆಯ ಮೂಲಕ ಬಳಕೆದಾರರು ಒಬ್ಬರ ಚಾಟ್ ತೆರೆದು ರಿಯಲ್ ಟೈಮ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಕಳುಹಿಸಬಹುದು.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ