WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಬಹುನಿರೀಕ್ಷಿತ ಚಾಟ್ ಲಾಕ್ ಫೀಚರ್: ಹೇಗೆ ಬಳಸುವುದು?

ವಾಟ್ಸ್​ಆ್ಯಪ್ ಇದೀಗ ಚಾಟ್ ಲಾಕ್ (Chat Lock) ಎಂಬ ಹೊಸ ಆಯ್ಕೆಯೊಂದನ್ನು ನೀಡಿದೆ. ಕೆಲ ವಾಟ್ಸ್​​ಆ್ಯಪ್ ಬೀಟಾ ಪರೀಕ್ಷಕರು ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ (Hide) ಮಾಡಬಹುದು.

WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಬಹುನಿರೀಕ್ಷಿತ ಚಾಟ್ ಲಾಕ್ ಫೀಚರ್: ಹೇಗೆ ಬಳಸುವುದು?
ವಾಟ್ಸ್​​ಆ್ಯಪ್
Follow us
|

Updated on: May 20, 2023 | 2:47 PM

ವಾಟ್ಸ್​ಆ್ಯಪ್ ಅನ್ನು ಇಂದು ಬಳಕೆ ಮಾಡುವವರ ಸಂಖ್ಯೆ ಭಾರತದಲ್ಲೇ 550 ಮಿಲಿಯನ್ ದಾಟಿದೆ. ಪ್ರತಿ ತಿಂಗಳು ಒಂದಲ್ಲ ಒಂದು ಹೊಸ ಅಪ್ಡೇಟ್ ಬಿಡುಗಡೆ ಮಾಡುತ್ತಿರುವ ವಾಟ್ಸ್​ಆ್ಯಪ್​ನಲ್ಲಿ (WhatsApp) ಸಾಲು ಸಾಲು ಫೀಚರ್​ಗಳು ಪರೀಕ್ಷಾ ಹಂತದಲ್ಲಿದೆ. ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ನೂತನ ಆಯ್ಕೆಗಳನ್ನು ಬಿಡುಗಡೆ ಮಾಡುವ ವಾಟ್ಸ್​ಆ್ಯಪ್​ನಲ್ಲಿ ಮುಂದಿನ ದಿನಗಳಲ್ಲಿ ಊಹಿಸಲಾಗದ ಫೀಚರ್​ಗಳು ಬರಲಿದೆ. ಬಳಕೆದಾರರ ಪ್ರೈವಸಿ ವಿಚಾರದಲ್ಲಿ ಯಾವಾಗಲೂ ಮುಂದಿರುವ ವಾಟ್ಸ್​ಆ್ಯಪ್ ಇದೀಗ ಚಾಟ್ ಲಾಕ್ (Chat Lock) ಎಂಬ ಹೊಸ ಆಯ್ಕೆಯೊಂದನ್ನು ನೀಡಿದೆ. ಕೆಲ ವಾಟ್ಸ್​​ಆ್ಯಪ್ ಬೀಟಾ ಪರೀಕ್ಷಕರು ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ (Hide) ಮಾಡಬಹುದು.

ಹೆಚ್ಚುವರಿ ಗೌಪ್ಯತೆ ಮತ್ತು ಭದ್ರತೆಯನ್ನು ಮೆಟಾ ಮಾಲೀಕತ್ವದ ಅಪ್ಲಿಕೇಶನ್ ತನ್ನ ಬಳಕೆದಾರರಿಗೆ ನೀಡಲು ಮುಂದಾಗಿದೆ. ವಾಟ್ಸ್​ಆ್ಯಪ್​ನಲ್ಲಿ ಚಾಟ್ ಅನ್ನು ಲಾಕ್ ಮಾಡಿದಾಗ ಬಳಕೆದಾರರು ತಮ್ಮ ಫಿಂಗರ್‌ಪ್ರಿಂಟ್ ಅಥವಾ ಪಾಸ್‌ಕೋಡ್ ಅನ್ನು ಬಳಸಿಕೊಂಡು ಮಾತ್ರ ತೆರೆಯಲು ಸಾಧ್ಯವಾಗುತ್ತದೆ. ಹೀಗಿದ್ದಾಗ ಇದನ್ನು ಬೇರೆ ಯಾರೂ ಸಹ ವೀಕ್ಷಣೆ ಮಾಡಲು ಸಾಧ್ಯವಾಗುವುದಿಲ್ಲ. ಈ ಆಯ್ಕೆ ಚಾಟ್​ನ ಕಾಂಟೆಕ್ಟ್ ಅಥವಾ ಗ್ರೂಪ್​ನ ಇನ್​ಫೋದಲ್ಲಿ ಇರುತ್ತದೆ. ಇದನ್ನು ಆ್ಯಕ್ಟಿವ್ ಮಾಡಿದ ತಕ್ಷಣ ಆ ಚಾಟ್ ಹೈಡ್ ಆಗಿ ಹೊಸ ಸೆಕ್ಷನ್​ಗೆ ಹೋಗುತ್ತದೆ.

Vivo Y78 5G: ಆಕರ್ಷಕ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ವಿವೊ

ಇದನ್ನೂ ಓದಿ

ಚಾಟ್ ಲಾಕ್ ಫೀಚರ್ ಬಳಸುವುದು ಹೇಗೆ?:

  • ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ವಾಟ್ಸ್​ಆ್ಯಪ್​ ಅನ್ನು ಮೊದಲು ಅಪ್​ಡೇಟ್​ ಮಾಡಿ.
  • ಚಾಟ್‌ಗಳನ್ನು ಲಾಕ್ ಮಾಡಲು ವಾಟ್ಸ್​ಆ್ಯಪ್​ ಕಾಂಟ್ಯಾಕ್ಟ್ ಪ್ರೊಫೈಲ್ ವಿಭಾಗ ಓಪನ್​ ಮಾಡಬೇಕು.
  • ಕೆಳಗೆ ಸ್ಕ್ರೋಲ್​ ಮಾಡಿದಾಗ ಚಾಟ್ ಲಾಕ್ ಆಯ್ಕೆ ಕಾಣಿಸುತ್ತದೆ
  • ಚಾಟ್ ಲಾಕ್ ಟ್ಯಾಪ್ ಮಾಡಿದರೆ ಲಾಕ್ ದಿಸ್ ಚಾಟ್ ವಿತ್ ಫಿಂಗರ್‌ಪ್ರಿಂಟ್ ಆಯ್ಕೆಯನ್ನು ಆಕ್ಟೀವ್​ ಮಾಡಬೇಕು.
  • ಫಿಂಗರ್‌ಪ್ರಿಂಟ್‌, ಪಾಸ್​ ಕೋಡ್​ ಅಥವಾ ಫೇಸ್​ ಐಡಿಯೊಂದಿಗೂ ಚಾಟ್ ಅನ್ನು ಲಾಕ್ ಮಾಡಬಹುದು.
  • ಲಾಕ್ಡ್ ಚಾಟ್ಸ್ ಎಂಬ ಫೋಲ್ಡರ್‌ನಲ್ಲಿ ಈ ಚಾಟ್​​ಗಳು ಗೌಪ್ಯವಾಗಿ ಇರಲಿವೆ.

ಎಡಿಟ್ ಸೆಂಟ್ ಮೆಸೇಜ್:

ವಾಟ್ಸ್​​ಆ್ಯಪ್ ಕೆಲವೇ ದಿನಗಳಲ್ಲಿ ಎಡಿಟ್ ಸೆಂಟ್ ಮೆಸೇಜ್ ಎಂಬ ನೂತನ ಅಪ್ಡೇಟ್ ಪರಿಚಯಿಸಲಿದೆ. ಎಡಿಟ್ ಸೆಂಟ್ ಮೆಸೇಜ್ ಆಯ್ಕೆಯ ಮೂಲಕ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡಬಹುದಾಗಿದೆ. ಈಗಾಗಲೇ ಈ ಆಯ್ಕೆ ಆಯ್ದ ಆಂಡ್ರಾಯ್ಡ್ ಬೇಟಾ ವರ್ಷನ್ ವಾಟ್ಸ್​ಆ್ಯಪ್ ಬಳಕೆದಾರರಿಗೆ ಲಭ್ಯವಾಗುತ್ತಿದೆ. ಇದರ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್‌ ಮಾಡಲು ಸಾಧ್ಯವಿಲ್ಲ. ಈ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ