ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್‌ಆ್ಯಪ್ (WhatsApp) ವಿನೂತನವಾದ ಅಪ್ಡೇಟ್ ಮೂಲಕ ಸುದ್ದಿಯಾಗುತ್ತಲೇ ಇದೆ. ಈಗೀಗ ಒಮ್ಮೆಲೆ 4,5 ಹೊಸ ಹೊಸ ಆಯ್ಕೆಯನ್ನು ನೀಡುತ್ತಿರುವ ವಾಟ್ಸ್ಆ್ಯಪ್ನಲ್ಲಿ ಸಾಲು ಸಾಲು ಅಪ್ಡೇಟ್ಗಳು ಬರಲು ತಯಾರಾಗಿ ನಿಂತಿದೆ. ಇತ್ತೀಚೆಗಷ್ಟೆ ವಾಟ್ಸ್‌ಆ್ಯಪ್ ಶೀಘ್ರದಲ್ಲಿ ತನ್ನ ಆಂಡ್ರಾಯ್ಡ್ (Android) ಮತ್ತು ಐಒಎಸ್ ಬಳಕೆದಾರರಿಗೆ ಮೆಸೇಜ್ ವಿಥ್ ಯುವರ್ ಸೆಲ್ಫ್ ಎಂಬ ಆಯ್ಕೆಯನ್ನು ಅಭಿವೃದ್ದಿ ಪಡಿಸುತ್ತಿರುವ ಬಗ್ಗೆ ತಿಳಿಸಿತ್ತು. ಇದೀಗ ಇದೇ ಆಯ್ಕೆಯನ್ನು ವಿಂಡೋಸ್ ಬಳಕೆದಾರರಿಗೆ ನೀಡಲು ವಾಟ್ಸ್‌ಆ್ಯಪ್ ಮುಂದಾಗಿದೆ. ಈ ಫೀಚರ್ ಮೂಲಕ ವಾಟ್ಸ್ಆ್ಯಪ್ನಲ್ಲಿ ನಿಮ್ಮ ನಂಬರ್ಗೆ ನೀವೇ ಮೆಸೇಜ್ ಮಾಡಬಹುದು.
ವಾಟ್ಸ್‌ಆ್ಯಪ್ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಮೆಸೇಜ್ ವಿಥ್ ಯುವರ್ ಸೆಲ್ಫ್ ಎಂಬ ಹೊಸ ಫೀಚರ್ ಕೆಲವೇ ದಿನಗಳಲ್ಲಿ ಸಿಗಲಿದೆ. ಹೀಗಿರುವಾಗ ಇದೇ ಆಯ್ಕೆ ವಿಂಡೋಸ್ ಬೇಟಾ ಆ್ಯಪ್ನಲ್ಲಿ ಕಾಣಿಸಿಕೊಂಡಿದೆ. 2.2248.2.0 ಅಪ್ಡೇಟ್ನಲ್ಲಿ ಈ ಆಯ್ಕೆ ಸಿಗಲಿದೆ. ವಾಟ್ಸ್ಆ್ಯಪ್ನಲ್ಲಿ ನಿಮಗೆ ನೀವೇ ಮೆಸೇಜ್ ಮಾಡಲು ಈಗಲು ಸಾಧ್ಯವಿದೆ. ಆದರೆ, ಅದು ಗ್ರೂಪ್ ಒಂದನ್ನು ರಚಿಸಿ ನೀವೊಬ್ಬರೆ ಆ ಗ್ರೂಪ್ನ ಸದಸ್ಯರಾಗಿ ಮೆಸೇಜ್ ಮಾಡಬಹುದು. ಆದರೀಗ ವಾಟ್ಸ್‌ಆ್ಯಪ್ ನೀಡಲಿರುವ ಈ ಹೊಸ ಆಯ್ಕೆಯಲ್ಲಿ ಕಾಂಟೆಕ್ಟ್ ಲಿಸ್ಟ್ನಲ್ಲಿ ಬೇರೆಯವರ ನಂಬರ್ ಜೊತೆ ನಿಮ್ಮ ನಂಬರ್ ಕೂಡ ಕಾಣಲಿದೆ. ಆ ನಂಬರ್ ಮೇಲೆ ಕ್ಲಿಕ್ ಮಾಡಿದರೆ ಚಾಟ್ ಬಾಕ್ಸ್ ಕೂಡ ತೆರೆಯಲಿದ್ದು ಆಗ ನಿಮಗೆ ನೀವೇ ಮಸೇಜ್ ಮಾಡಬಹುದಾಗಿದೆ.
Realme 10 Pro: 108MP ಕ್ಯಾಮೆರಾ, 67W ಫಾಸ್ಟ್ ಚಾರ್ಜರ್: ರಿಯಲ್ ಮಿಯಿಂದ ಊಹಿಸಲಾಗದ ಬೆಲೆಗೆ ಸ್ಮಾರ್ಟ್ಫೋನ್ ರಿಲೀಸ್
ಸ್ಟೇಟಸ್ನಲ್ಲಿ ವಾಯ್ಸ್ ಮೆಸೇಜ್ ಹಾಕಿ:
ಇನ್ನು ಸದ್ಯದಲ್ಲೇ ವಾಟ್ಸ್‌ಆ್ಯಪ್ ಸ್ಟೇಟಸ್ನಲ್ಲಿ ವಾಯ್ಸ್ ಮೆಸೇಜ್ ಅನ್ನು ಹಂಚಿಕೊಳ್ಳಬಹುದಂತೆ. ವಾಯ್ಸ್ ನೋಟ್ ಅನ್ನು ಸ್ಟೇಟಸ್ನಲ್ಲಿ ಹಂಚಿಕೊಳ್ಳಬಹುದಾದ ಆಯ್ಕೆ ಮೊದಲಿಗೆ ಐಒಎಸ್ ಬಳಕೆದಾರರಿಗೆ ಸಿಗಲಿದೆ. ಈವರೆಗೆ ಸ್ಟೇಟಸ್ನಲ್ಲಿ ವಿಡಿಯೋ, ಫೋಟೋ, ಲಿಂಕ್ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದು. ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಂದರೆ ಬಳಕೆದಾರರು ಸ್ಟೇಟಸ್ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್ಗಳನ್ನು ಶೇರ್ ಮಾಡಬಹುದಾಗಿದೆ. 30 ಸೆಕೆಂಡ್ಗಳ ಕಾಲ ಇದು ಇರಲಿದೆ. ಇದಕ್ಕಾಗಿ ಬರಹಗಳನ್ನು ಹಂಚಿಕೊಳ್ಳಬಹುದಾದ ಜಾಗದಲ್ಲಿ ಮೈಕ್ರೊ ಫೋನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಇಲ್ಲಿ ಮೈಕ್ರೊ ಫೋನ್ ಮೇಲೆ ಕ್ಲಿಕ್ ಮಾಡುವ ಮೂಲಕ ವಾಯ್ಸ್ ಸ್ಟೇಟಸ್ ಶೇರ್ ಮಾಡಬಹುದು. ಇದು ಎಂಡ್-ಟು-ಎಂಡ್ ಎನ್ಕ್ರಿಪ್ಟೆಡ್ ಆಗಿದೆ. ಸದ್ಯಕ್ಕೆ ಈ ಆಯ್ಕೆ ಐಒಎಸ್ ಬೇಟಾ ಬಳಕೆದಾರರಿಗೆ ಲಭ್ಯವಾಗುತ್ತಿದೆ.
ವೆಬ್ ಬಳಕೆದಾರರಿಗೆ ಸ್ಕ್ರೀನ್ ಲಾಕ್ ಫೀಚರ್:
ಡೆಸ್ಕ್ಟಾಪ್ನಲ್ಲಿ ವಾಟ್ಸ್‌ಆ್ಯಪ್ ಬಳಸುವವರಿಗೆ ಸದ್ಯದಲ್ಲೇ ಸ್ಕ್ರೀನ್ ಲಾಕ್ ಎಂಬ ಹೊಸ ಆಯ್ಕೆ ನೀಡುವುದಾಗಿ ಘೋಷಿಸಿದೆ. ವಾಟ್ಸ್‌ಆ್ಯಪ್ ಹಿಂದಿನಿಂದಲೂ ಬಳಕೆದಾರರ ಪ್ರೈವಸಿ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಾಮುಖ್ಯತೆ ವಹಿಸುತ್ತದೆ. ಇದೀಗ ಭದ್ರತೆಯನ್ನು ಮತ್ತಷ್ಟು ಗಟ್ಟಿ ಮಾಡುವ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿದೆ. ವಾಟ್ಸ್‌ಆ್ಯಪ್ ವೆಬ್ನಲ್ಲಿ ಬರುವ ಸ್ಕ್ರೀನ್ ಲಾಕ್ ಎಂಬ ಹೊಸ ಫೀಚರ್ನಲ್ಲಿ ವಾಟ್ಸ್‌ಆ್ಯಪ್ ಓಪನ್ ಮಾಡಿದ ಪ್ರತಿ ಬಾರಿ ಬಳಕೆದಾರರು ಪಾಸ್‌ವರ್ಡ್ ಹಾಕಬೇಕಾಗುತ್ತದೆ. ಬಳಕೆದಾರರು ತಮ್ಮ ಡೆಸ್ಕ್ಟಾಪ್ನಲ್ಲಿ ವಾಟ್ಸ್‌ಆ್ಯಪ್ ಬಳಸದೇ ಇದ್ದಾಗ ಬೇರೆಯವರು ಅನಧಿಕೃತವಾಗಿ ಬಳಸದಂತೆ ಇದು ರಕ್ಷಣೆ ನೀಡಲಿದೆ ಎಂದು ಕಂಪನಿ ತಿಳಿಸಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:17 pm, Sat, 10 December 22