WhatsApp: ವಾಟ್ಸ್ಆ್ಯಪ್ನಲ್ಲಿ ಬರುತ್ತಿದೆ ಫೇಸ್ಬುಕ್ನಲ್ಲಿರುವ ಈ ಅದ್ಭುತ ಫೀಚರ್: ಬಳಕೆದಾರರು ಫುಲ್ ಖುಷ್
ಈಗಾಗಲೇ ಇನ್ಸ್ಟಾಗ್ರಾಮ್, ಫೇಸ್ಬುಕ್, ಐಮೆಸೇಜ್ ಮತ್ತು ಲಿಂಕ್ಡಿನ್ನಲ್ಲಿ ಇರುವಂತಹ ಜನಪ್ರಿಯ ಅಪ್ಲಿಕೇಶನ್‌ಗಳು ಬಳಕೆದಾರರಿಗೆ ಮೆಸೇಜ್ ರಿಯಾಕ್ಷನ್ ಫೀಚರ್ಸ್‌ಗಳನ್ನು ನೀಡುತ್ತಿವೆ.
ವಿಶ್ವದಲ್ಲಿ ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಫೇಸ್ಬುಕ್ (facebook) ಒಡೆತನದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ (WhatsApp) ಈಗೀಗ ಹೊಸ ಹೊಸ ಅಪ್ಡೇಟ್ಗಳನ್ನು ನೀಡುತ್ತಿದೆ. ಸದ್ಯ ಇದೀಗ ಬಳಕೆದಾರರಿಗೆ ಉತ್ತಮ ಅನುಭವವನ್ನು ನೀಡಲು ಹೊಸ ಫೀಚರ್ಸ್ ಪರಿಚಯಿಸಲು ವಾಟ್ಸ್ಆ್ಯಪ್ ಮುಂದಾಗಿದೆ. WaBetaInfo ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳ ಪ್ರಕಾರ ವಾಟ್ಸ್ಆ್ಯಪ್ ಶೀಘ್ರದಲ್ಲೇ ಫೇಸ್ಬುಕ್ನಲ್ಲಿರುವಂತೆಯೆ ಮೆಸೇಜ್ ರಿಯಾಕ್ಷನ್ ಫೀಚರ್ಸ್ ಅನ್ನು ಪರಿಚಯಿಸುವ ಸಾಧ್ಯತೆ ಇದೆ.
ಈಗಾಗಲೇ ಇನ್ಸ್ಟಾಗ್ರಾಮ್, ಫೇಸ್ಬುಕ್, ಐಮೆಸೇಜ್ ಮತ್ತು ಲಿಂಕ್ಡಿನ್ನಲ್ಲಿ ಇರುವಂತಹ ಜನಪ್ರಿಯ ಅಪ್ಲಿಕೇಶನ್‌ಗಳು ಬಳಕೆದಾರರಿಗೆ ಮೆಸೇಜ್ ರಿಯಾಕ್ಷನ್ ಫೀಚರ್ಸ್‌ಗಳನ್ನು ನೀಡುತ್ತಿವೆ. ಇದೇ ಕಾರಣಕ್ಕೆ ವಾಟ್ಸ್ಆ್ಯಪ್ ಕೂಡ ಸದ್ಯದಲ್ಲೇ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಮೆಸೇಜ್ ರಿಯಾಕ್ಷನ್ ಸೇರಿಸಲು ಸಿದ್ಧತೆ ನಡೆಸಿದೆ. ಇದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಬಗೆಗಿನ ಫೋಟೋ ಒಂದು ಈಗ ವೈರಲ್ ಆಗಿದೆ.
ವಾಟ್ಸ್ಆ್ಯಪ್ನ ಮೆಸೇಜ್ ರಿಯಾಕ್ಷನ್ ಫಿಚರ್ಸ್ ಎಮೋಜಿ ಐಕಾನ್‌ಗಳೊಂದಿಗೆ ಪ್ರತಿಕ್ರಿಯಿಸಲು ನಿಮಗೆ ಅನುಮತಿಸುತ್ತದೆ. ಇದು ಫೇಸ್‌ಬುಕ್‌ನಲ್ಲಿನ ಪೋಸ್ಟ್‌ಗಳಿಗೆ ನೀವು ಹೇಗೆ ಪ್ರತಿಕ್ರಿಯಿಸುತ್ತಿರೋ ಅದೇ ಮಾದರಿಯಲ್ಲಿ ಇರಲಿದೆ. ಅಂದರೆ ಎಮೋಜಿಗಳ ರಿಯಾಕ್ಷನ್ಗಾಗಿ ನೀವು ಸಂದೇಶವನ್ನು ಲಾಂಗ್ ಪ್ರೆಸ್ ಮಾಡಬೇಕಾಗುತ್ತದೆ. ಪಾಪ್ ಅಪ್ ಆಗುವ ಯಾವುದೇ ಎಮೋಜಿಗಳಿಂದ ಆಯ್ಕೆ ಮಾಡಬೇಕಾಗುತ್ತದೆ. ನಿಮ್ಮ ಮೆಚ್ಚಿನದನ್ನು ನೀವು ಆಯ್ಕೆ ಮಾಡಿದ ನಂತರ, ನೀವು ಯಾರ ಸಂದೇಶಕ್ಕೆ ಪ್ರತಿಕ್ರಿಯಿಸಿದ್ದೀರೋ ಅವರು ಅದೇ ಪ್ರತಿಕ್ರಿಯೆಗೆ ಅಧಿಸೂಚನೆಯನ್ನು ಪಡೆಯುತ್ತೀರಿ.
ಸದ್ಯ ಈ ಹೊಸ ಫೀಚರ್ಸ್ ಆಯ್ಕೆಗೆ ನೀವು ಹೊಸ ಆವೃತ್ತಿಯ ವಾಟ್ಸ್ಆ್ಯಪ್ಗೆ ಅಪ್ಡೇಟ್ ಆಗ ಬೇಕಾಗುತ್ತದೆ. ವಾಟ್ಸ್ಆ್ಯಪ್ ನೀವು ಪ್ರತಿಕ್ರಿಯೆಯನ್ನು ಬೆಂಬಲಿಸದ ಹಳೆಯ ಆವೃತ್ತಿಯನ್ನು ಬಳಸುತ್ತಿರುವ ಎಚ್ಚರಿಕೆಯ ಸಂದೇಶವನ್ನು ಪ್ರದರ್ಶಿಸಲಿದೆ. ಈ ಫೀಚರ್ಸ್ ಮೊದಲು ವಾಟ್ಸ್ಆ್ಯಪ್ನ ಆಂಡ್ರಾಯ್ಡ್ ಆವೃತ್ತಿಯಲ್ಲಿ ಮತ್ತು ನಂತರ ಐಒಎಸ್ ಬಳಕೆದಾರರಿಗೆ ಲಭ್ಯವಿರುತ್ತದೆ.
ಪ್ರಸ್ತುತ ಈ ಫೀಚರ್ಸ್ ಪರೀಕ್ಷಾ ಹಂತದಲ್ಲಿದ್ದು ಕೆಲವೇ ದಿನಗಳಲ್ಲಿ ಅಪ್‌ಡೇಟ್‌ನಲ್ಲಿ ಲಭ್ಯವಾಗುತ್ತದೆ ಎಂದು ಹೇಳಲಾಗುತ್ತಿದೆ. ಮೆಸೇಜ್ ರಿಯಾಕ್ಷನ್ ಫೀಚರ್ಸ್‌ನಿಂದಾಗಿ ನಿಮಗೆ ಬಂದ ಸಂದೇಶಗಳಿಗೆ ತ್ವರಿತವಾಗಿ ಎಮೊಜಿಗಳ ಮೂಲಕ ಉತ್ತರಿಸಲು ಸಾಧ್ಯವಾಗಲಿದೆ. ಇದರಿಂದ ನಿಮ್ಮ ಚಾಟ್ ಸಂಬಾಷಣೆ ಇನ್ನಷ್ಟು ಉಲ್ಲಾಸದಾಯಕವಾಗಿರಲಿದೆ ಎಂದು ಹೇಳಲಾಗುತ್ತಿದೆ.
ವಾಟ್ಸ್ಆ್ಯಪ್ ತನ್ನ ಕೊನೆಯ ಅಪ್‌ಡೇಟ್‌ನಲ್ಲಿ, ಬಳಕೆದಾರರು ತಮ್ಮ ಸ್ನೇಹಿತರಿಗೆ ಮತ್ತು ಕುಟುಂಬದವರಿಗೆ ಫೊಟೋ ಅಥವಾ ವಿಡಿಯೋವನ್ನು ಕಳುಹಿಸಿದಾಗ ಒಮ್ಮೆ ಮಾತ್ರ ಕಾಣಿಸುವಂತೆ ಆಯ್ಕೆ ನೀಡಿತ್ತು. ಈ ಹೊಸ ಸಿಂಗಲ್ ವೀವಿಂಗ್ ಆಯ್ಕೆ ಅನೇಕರು ಮೆಚ್ಚಿಕೊಂಡಿದ್ದಾರೆ.
ಮೊಬೈಲ್ ಬಳಕೆದಾರರ ಗಮನಕ್ಕೆ: ಇನ್ಮುಂದೆ ಈ ಫೋನ್ಗಳಲ್ಲಿ ವಾಟ್ಸ್ಆ್ಯಪ್ ಕಾರ್ಯ ನಿರ್ವಹಿಸುವುದಿಲ್ಲ
JioPhone Next: ಸ್ಮಾರ್ಟ್ಫೋನ್ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಕೇವಲ 500 ರೂ.ಗೆ ಜಿಯೋ ನೆಕ್ಸ್ಟ್
(WhatsApp Emoji Reactions WhatsApp Upcoming update message reactions here is how it works)