ವಾಟ್ಸಾಪ್, ಇನ್​ಸ್ಟಾಗ್ರಾಂ, ಫೇಸ್​ಬುಕ್ ಡೌನ್; ಸೋಷಿಯಲ್ ಮೀಡಿಯಾ ಬಳಕೆದಾರರ ಪರದಾಟ

WhatsApp, Facebook, Instagram: ಹಲವರು ತಮಗಾದ ಅನುಭವಗಳನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಅಪ್ಲಿಕೇಷನ್​ಗಳು ವೆಬ್ ಅಥವಾ ಸ್ಮಾರ್ಟ್​ಫೋನ್​ಗಳಲ್ಲಿ ಕೂಡ ಕೆಲಸ ಮಾಡುತ್ತಿಲ್ಲ. ಈ ಸಮಸ್ಯೆ ಆಂಡ್ರಾಯ್ಡ್ ಹಾಗೂ ಐಒಎಸ್ ಮತ್ತು ವೆಬ್​ ಮೂರರಲ್ಲೂ (Android, iOS) ಆಗಿರುವ ಬಗ್ಗೆ ತಿಳಿದುಬಂದಿದೆ.

ವಾಟ್ಸಾಪ್, ಇನ್​ಸ್ಟಾಗ್ರಾಂ, ಫೇಸ್​ಬುಕ್ ಡೌನ್; ಸೋಷಿಯಲ್ ಮೀಡಿಯಾ ಬಳಕೆದಾರರ ಪರದಾಟ
WhatsApp
Follow us
TV9 Web
| Updated By: ganapathi bhat

Updated on:Oct 04, 2021 | 10:04 PM

ಜನರು ಬಹುವಾಗಿ ಬಳಸುವ ಪ್ರಮುಖ ಅಪ್ಲಿಕೇಷನ್​ಗಳಾದ ವಾಟ್ಸಾಪ್, ಫೇಸ್​ಬುಕ್ ಹಾಗೂ ಇನ್​ಸ್ಟಾಗ್ರಾಂ ಸೋಷಿಯಲ್ ಮೀಡಿಯಾಗಳು ಸೋಮವಾರ ಸಂಜೆ (ಅಕ್ಟೋಬರ್ 4) ಕ್ರಾಶ್ ಆಗಿವೆ. ವಿಶ್ವದ ಬಹಳಷ್ಟು ಕಡೆಗಳಲ್ಲಿ ಈ ಸಮಸ್ಯೆ ಉಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದರಿಂದ ಸೋಷಿಯಲ್ ಮೀಡಿಯಾ ಬಳಸುವ ಅಸಂಖ್ಯ ಜನರು ಪರದಾಡುವಂತಾಗಿದೆ. ಹಲವರು ತಮಗಾದ ಅನುಭವಗಳನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಅಪ್ಲಿಕೇಷನ್​ಗಳು ವೆಬ್ ಅಥವಾ ಸ್ಮಾರ್ಟ್​ಫೋನ್​ಗಳಲ್ಲಿ ಕೂಡ ಕೆಲಸ ಮಾಡುತ್ತಿಲ್ಲ. ಈ ಸಮಸ್ಯೆ ಆಂಡ್ರಾಯ್ಡ್ ಹಾಗೂ ಐಒಎಸ್ ಮತ್ತು ವೆಬ್​ ಮೂರರಲ್ಲೂ (Android, iOS) ಆಗಿರುವ ಬಗ್ಗೆ ತಿಳಿದುಬಂದಿದೆ.

ಮಾಹಿತಿ ಹಂಚಿಕೊಳ್ಳಲು ಹಾಗೂ ಸಂವಹನಕ್ಕೆ ಬಹುತೇಕ ಜನರು ಈಗ ವಾಟ್ಸಾಪ್ ಅವಲಂಬಿಸಿರುತ್ತಾರೆ. ಮನರಂಜನೆಗೆ ಖ್ಯಾತ ಸೋಷಿಯಲ್ ಮೀಡಿಯಾಗಳಾದ ಇನ್​ಸ್ಟಾಗ್ರಾಂ ಹಾಗೂ ಫೇಸ್​ಬುಕ್ ಬಳಸುತ್ತಾರೆ. ಇದ್ಯಾವುದೂ ಈಗ ಕೆಲಸ ಮಾಡುತ್ತಿಲ್ಲ. ಕಳಿಸಿರುವ ಸಂದೇಶ, ಹಂಚಿಕೊಂಡಿರುವ ಪೋಸ್ಟ್​ಗಳು ಅರ್ಧಕ್ಕೆ ನಿಂತಂತಾಗಿದೆ. ಈ ವಿಚಾರವು ಈಗ ಟ್ವಿಟರ್ ಟ್ರೆಂಡಿಂಗ್​ನಲ್ಲಿ ಕೂಡ ಸ್ಥಾನ ಪಡೆದುಕೊಂಡಿದೆ. ಮತ್ತೊಂದು ಸಾಮಾಜಿಕ ಜಾಲತಾಣ ಟ್ವಿಟರ್​ನಲ್ಲಿ ಜನರು ವಿಚಾರ ಹಂಚಿಕೊಳ್ಳುತ್ತಿದ್ದಾರೆ. ಹಲವಾರು ಟ್ರಾಲ್, ಮೀಮ್ಸ್​​ಗಳು ಕೂಡ ಕ್ರಿಯೇಟ್ ಆಗಿವೆ.

ಟ್ವಿಟರ್ ಟ್ರೆಂಡಿಂಗ್​ನ ಟೆಕ್ನಾಲಜಿ ವಿಭಾಗದ 4 ಮತ್ತು 5ನೇ ಸ್ಥಾನದಲ್ಲಿ Facebook and Instagram ಮತ್ತು #facebookdown ಇದೆ. ಸುದ್ದಿ ಮಾಡುವ ವೇಳೆಗಾಗಲೇ ಈ ಬಗ್ಗೆ 88.1k ಮತ್ತು 69.5k ಟ್ವೀಟ್​ಗಳಾಗಿವೆ. ಟ್ರೆಂಡಿಂಗ್ 9ರಲ್ಲಿ ಮಾರ್ಕ್ ಜುಕರ್​ಬರ್ಗ್ ಹೆಸರಿದೆ. ಈ ಬಗ್ಗೆ 38.2k ಟ್ವೀಟ್​ಗಳು ಆಗಿವೆ. #serverdown ಎಂಬ ಹ್ಯಾಷ್ ಟ್ಯಾಗ್ ಕೂಡ ಟ್ವಿಟರ್​ನಲ್ಲಿ ಟ್ರೆಂಡ್ ಆಗಿದೆ.

ಇದನ್ನೂ ಓದಿ: How To: ಈಗ ವಾಟ್ಸಾಪ್ ಮೂಲಕ ಕೇವಲ 3 ಹಂತಗಳಲ್ಲಿ ಸುಲಭವಾಗಿ ಲಸಿಕೆ ಪ್ರಮಾಣಪತ್ರ ಪಡೆಯಿರಿ! ಇಲ್ಲಿದೆ ವಿವರ

ಇದನ್ನೂ ಓದಿ: Cyber Crime: ಸಾಮಾಜಿಕ ಜಾಲತಾಣದ ಮೂಲಕ ಮೋಸದ ಬಲೆ; ಎಚ್ಚರ ತಪ್ಪಿದರೆ ಅಪಾಯ ಖಚಿತ!

Published On - 9:37 pm, Mon, 4 October 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ